Kantara ಶಿವನ ಪಾತ್ರದಲ್ಲಿ ಪುನೀತ್ ರಾಜ್‌ಕುಮಾರ್; ಫ್ಯಾನ್ ಮೇಡ್ ಪೋಸ್ಟರ್ ವೈರಲ್

ಕಾಂತಾರ ಸಿನಿಮಾದಲ್ಲಿ ಅಪ್ಪು ನಟಿಸಿದ್ದರೆ ಹೇಗಿರುತ್ತಿತ್ತು ಎಂದು ಅಭಿಮಾನಿಯೊಬ್ಬರ ಕಲ್ಪನೆಯಲ್ಲಿ ಮೂಡಿಬಂದ ಪೋಸ್ಟರ್ ವೈರಲ್ ಆಗಿದೆ. 

Fan made of Puneeth rajkumar as Kantara shiva poster viral on social media sgk

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾದ ಹವಾ ಇನ್ನೂ ಕಮ್ಮಿ ಆಗಿಲ್ಲ. ಬಾಕ್ಸ್ ಆಫೀಸ್ ನಲ್ಲೂ ಕಾಂತಾರ ಅಬ್ಬರ ಮುಂದುವರೆದಿದೆ. ಸಿನಿಮಾ ರಿಲೀಸ್ ಆಗಿ ಒಂದೂವರೆ ತಿಂಗಳು ಕಳೆದರೂ ಇನ್ನೂ ಅನೇಕ ಕಡೆ  ಕಾಂತಾರ ಉತ್ತಮ ಪ್ರದರ್ಶನ ಕಾಣುತ್ತಿದೆ. ರಿಷಬ್​ ಶೆಟ್ಟಿ ನಟನೆ ಮತ್ತು ನಿರ್ದೇಶನಕ್ಕೆ ಪ್ರೇಕ್ಷಕರು ಫುಲ್​ ಮಾರ್ಕ್ಸ್​ ನೀಡಿದ್ದಾರೆ. ಈಗಾಗಲೇ ಕೋಟಿ ಕೋಟಿ ಬಾಚಿಕೊಳ್ಳುವ ಮೂಲಕ ಕಾಂತಾರ ಹೊಂಬಾಳೆ ಫಿಲ್ಮ್ಸ್‌ಗೆ ದೊಡ್ಡ ಲಾಭ ತಂದುಕೊಟ್ಟಿದೆ. ಕನ್ನಡ ಮಾತ್ರವಲ್ಲದೆ ಬೇರೆ ಬೇರೆ ಭಾಷೆಯಲ್ಲೂ ಸಿನಿಮಾಗೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಬಾಕ್ಸ್ ನಲ್ಲೂ ಭರ್ಜರಿ ಕಮಾಯಿ ಮಾಡಿದೆ. ಸದ್ಯ ದೇಶದಾದ್ಯಂತ ಸದ್ದು ಮಾಡುತ್ತಿರುವ ಕಾಂತಾರ ಚಿತ್ರದಲ್ಲಿ ಪವರ್ ಸ್ಟಾರ್  ಪುನೀತ್ ರಾಜ್ ಕುಮಾರ್ ನಟಿಸಬೇಕಿತ್ತು. ಕಾಂತರಾ ಶಿವನ ಪಾತ್ರಕ್ಕೆ ಮೊದಲು ಪುನೀತ್ ಅವರಿಗೆ ಅಪ್ರೋಚ್ ಮಾಡಲಾಗಿತ್ತು. ಆದರೆ ಪವರ್ ಸ್ಟಾರ್ ಈ ಸಿನಿಮಾದಲ್ಲಿ ನಟಿಸಿಲ್ಲ. 

ಒಂದು ವೇಳೆ ಕಾಂತಾರ ಸಿನಿಮಾದಲ್ಲಿ ಅಪ್ಪು ನಟಿಸಿದ್ದರೆ ಹೇಗಿರುತ್ತಿತ್ತು ಎಂದು ಅಭಿಮಾನಿಯೊಬ್ಬರ ಕಲ್ಪನೆಯಲ್ಲಿ ಮೂಡಿಬಂದ ಪೋಸ್ಟರ್ ವೈರಲ್ ಆಗಿದೆ. ಹೌದು, ಪವರ್ ಸ್ಟಾರ್ ಕಾಂತಾರ ಶಿವನಾಗಿ ಕಾಣಿಸಿಕೊಂಡಿದ್ದರೆ ಹೇಗಿರುತ್ತಿತ್ತು ಎಂದು ಅಭಿಮಾನಿಯೊಬ್ಬರು ತನ್ನ ಕಲ್ಪನೆಯಲ್ಲಿ ಪೋಸ್ಟರ್ ಮಾಡಿದ್ದಾರೆ. ಈ ಪೋಸ್ಟರ್ ಈಗ ವೈರಲ್ ಆಗಿದೆ. ಈ ಪೋಸ್ಟರ್‌ಗೆ ಅಭಿಮಾನಿಗಳಿಂದ ಮತ್ತು ಸಿನಿಮಾ ಪ್ರೇಮಿಗಳಿಂದ ಸಿಕ್ಕಾಪಟ್ಟೆ ಲೈಕ್ಸ್ ಮತ್ತು ಕಾಮೆಂಟ್ ಹರಿದುಬರುತ್ತಿದೆ. 

ಅಂದಹಾಗೆ ಈ ಪೋಸ್ಟರ್ ಡಿಸೈನ್ ಮಾಡಿದ್ದು ಡಿಜಿಟಲ್​ ಆರ್ಟಿಸ್ಟ್​ ಕುಶಾಲ್​ ಹಿರೇಮಠ್​. ಪುನೀತ್​ ಅವರ ಬೇರೆ ಫೋಟೋವನ್ನು ಬಳಸಿಕೊಂಡು ಈ ರೀತಿ ವಿನ್ಯಾಸ ಮಾಡಲಾಗಿದೆ. ಕಾಂತಾರ ಚಿತ್ರದ ಕಥಾನಾಯಕ ಶಿವನ ಪಾತ್ರವನ್ನು ಪುನೀತ್​ ನಿರ್ವಹಿಸಿದ್ದರೆ ಅವರ ಗೆಟಪ್​ ಹೇಗಿರುತ್ತಿತ್ತು ಎಂದು ಈ ರೀತಿಯಾಗಿ ಅವರು ಕಲ್ಪಿಸಿಕೊಂಡು ಡಿಸೈನ್ ಮಾಡಿದ್ದಾರೆ. ಈ ಫೋಟೋ ಅಭಿಮಾನಿಗಳನ್ನು ಭಾವುತೆಗೆ ತಳ್ಳಿದೆ. 

ಇನ್ನು ಕಾಂತಾರ ಬಗ್ಗೆ ಹೇಳುವುದಾದರೆ, ಈಗಾಗಲೇ 300 ಕೋಟಿಯ ಗಡಿ ದಾಟಿ 350 ಕೋಟಿಯತ್ತಾ ಮುನ್ನುಗ್ಗುತ್ತಿದೆ. ಹಿಂದಿ ಭಾಗದಲ್ಲಿ ಕಾಂತಾರ ಉತ್ತಮ ಕಲೆಕ್ಷನ್ ಮಾಡಿದೆ. ಸಿನಿಮಾ ರಿಲೀಸ್ ಆಗಿ 4 ವಾರಕ್ಕೆ ಹಿಂದಿಯಲ್ಲಿ 70 ಕೋಟಿ ರುಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ ಎಂದು ವರದಿಯಾಗಿದೆ. ವೀಕೆಂಡ್‌ಗೆ ಕಾಂತಾರ 67 ಕೋಟಿ ಬಾಚಿಕೊಂಡಿತ್ತು. ಇದೀಗ ಗಳಿಕೆ 70 ಕೋಟಿ ದಾಟಿದೆ ಎಂದು ಹೇಳಲಾಗುತ್ತಿದೆ. ಹಿಂದಿಯಲ್ಲಿ ಕನ್ನಡದ ಸಿನಿಮಾವೊಂದು ಈ ಪರಿ ಕಲೆಕ್ಷನ್ ಮಾಡಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರವಾಗಿದೆ.

ಬಾಲಿವುಡ್‌ನಲ್ಲಿ ಮುಂದುವರೆದ ಕಾಂತಾರ ಅಬ್ಬರ; 4 ವಾರಕ್ಕೆ ರಿಷಬ್ ಶೆಟ್ಟಿ ಸಿನಿಮಾ ಗಳಿಸಿದೆಷ್ಟು?

1 ಕೋಟಿ ಟಿಕೆಟ್ ಮಾರಾಟ

ಕರ್ನಾಟಕದಲ್ಲಿ ಕಾಂತಾರ ಸಿನಿಮಾದ 1 ಕೋಟಿ ಟಿಕೆಟ್ ಮಾರಾಟವಾಗಿದೆ. ಈ ಮೂಲಕ ಅತೀ ಹೆಚ್ಚು ಟಿಕೆಟ್ ಮಾರಾಟವಾದ ಸಿನಿಮಾ ಕಾಂತಾರ ಎನ್ನುವ ಹೆಗ್ಗಳಿಕೆ ಗಳಿಸಿದೆ. ಈಗಾಗಲೇ ದೇಶ-ವಿದೇಶಗಳಲ್ಲಿ ಸದ್ದು ಮಾಡುತ್ತಿರುವ ಕಾಂತಾರಗೆ ಈ ದಾಖಲೆ ಮತ್ತಷ್ಟು ಖುಷಿ ತಂದಿದೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದೆ. 

Kantara; ಮತ್ತೊಂದು ದಾಖಲೆ ಬರೆದ ರಿಷಬ್ ಶೆಟ್ಟಿ, ಕರ್ನಾಟಕದಲ್ಲಿ 1 ಕೋಟಿ ಟಿಕೆಟ್ ಮಾರಾಟ

ಕಾಂತಾರ ಸಿನಿಮಾ ಸೆಪ್ಟಂಬರ್ 30ರಂದು ರಿಲೀಸ್ ಆಗಿದೆ. ಕನ್ನಡದಲ್ಲಿ ಮಾತ್ರ ರಿಲೀಸ್ ಆದ ಕಾಂತಾರ ದೊಡ್ಡ ಮಟ್ಟದಲ್ಲಿ ಸಕ್ಸಸ್ ಕಾಣುತ್ತಿದ್ದಂತೆ ಬೇರೆ ಬೇರೆ ಭಾಷೆಗೆ ಡಬ್ ಆಗಿ ರಿಲೀಸ್ ಆಯಿತು. ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿಯಲ್ಲಿ ಕಾಂತಾರ ರಿಲೀಸ್ ಆಗಿದೆ. ಪರಭಾಷೆಯಲ್ಲೂ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಕೇವಲ ಅಭಿಮಾನಿಗಳು ಮಾತ್ರವಲ್ಲದೇ ಸಿನಿಮಾ ಗಣ್ಯರು ಸಹ ಮೆಚ್ಚುಗೆ ವ್ಯಕ್ತಪಡಿಸಿದರು. ಸೂಪರ್ ಸ್ಟಾರ್ ರಜನಿಕಾಂತ್, ಧನುಷ್, ಅನುಷ್ಕಾ ಶೆಟ್ಟಿ, ಪ್ರಭಾಸ್, ಕಾರ್ತಿ, ನಾನಿ, ಕಂಗನಾ ರಣಾವತ್ ಸೇರಿದಂತೆ ಅನೇಕ ಕಲಾವಿದರೂ ಹಾಡಿಹೊಗಳಿದರು. 
 

Latest Videos
Follow Us:
Download App:
  • android
  • ios