ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್‌ಐಆರ್..!
ಸೆ.3ರಂದು ಚಿತ್ರೀಕರಣದ ವೇಳೆ ಮೋಹನ್ 30 ಅಡಿ ಎತ್ತರದ ಏಣಿಯಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ. ಅವನನ್ನು ಗೊರಗುಂಟೆ ಪಾಳ್ಯದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಗುರುವಾರ ಮೃತಪಟ್ಟಿದ್ದಾನೆ. ಚಿತ್ರೀಕರಣದ ವೇಳೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿದ ಆರೋಪ ಅಡಿ ಚಿತ್ರ ನಿರ್ದೇಶಕ ಯೋಗರಾಜ್ ಭಟ್ ಹಾಗೂ ವ್ಯವಸ್ಥಾಪಕ ಸುರೇಶ್ ಸೇರಿ ಮೂವರ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಬೆಂಗಳೂರು(ಸೆ.06): 'ಮನದ ಕಡಲು' ಸಿನಿಮಾ ಚಿತ್ರೀಕರಣದ ವೇಳೆ 30 ಅಡಿ ಎತ್ತರದ ಏಣಿಯಿಂದ ಬಿದ್ದು ಲೈಟ್ ಬಾಯ್ ಮೃತಪಟ್ಟಿರುವ ಘಟನೆ ಬೆಂಗಳೂರಿನ ಮಾದನಾಯಕನ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆ ದಿದೆ. ಈ ಸಂಬಂಧ ಚಿತ್ರದ ನಿರ್ದೇಶಕ ಯೋಗರಾಜ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.
ತುಮಕೂರು ಜಿಲ್ಲೆಯ ಕೊರಟಗೆರೆ ಮೂಲದ ಮೋಹನ್ ಕುಮಾರ್ (30) ಮೃತ ಲೈಟ್ ಬಾಯ್. ಸೆ.3ರಂದು ಮಾದನಾಯಕನಹಳ್ಳಿ ಸಮೀಪದ ವಿಆರ್‌ಎಲ್ ಅರೇನಾ ಬಳಿ ಚಿತ್ರೀಕರಣ ನಡೆಯುತ್ತಿತ್ತು. ಆ ವೇಳೆ ಅವಘಡ ಸಂಭವಿಸಿದೆ. ಮೃತ ಮೋಹನ್ ಹಾಗೂ ಅವರ ಸಹೋದರ ಬೆಂಗಳೂರು ನಗರದ ಬಡಾವಣೆಯೊಂದರಲ್ಲಿ ನೆಲೆಸಿದ್ದರು. ಚಿತ್ರರಂಗದಲ್ಲಿ ಇಬ್ಬರೂ ಲೈಟ್ ಬಾಯ್‌ಗಳಾಗಿ ಕೆಲಸ ಮಾಡುತ್ತಿದ್ದರು. ಸೆ.3ರಂದು ಚಿತ್ರೀಕರಣದ ವೇಳೆ ಮೋಹನ್ 30 ಅಡಿ ಎತ್ತರದ ಏಣಿಯಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ. ಅವನನ್ನು ಗೊರಗುಂಟೆ ಪಾಳ್ಯದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಗುರುವಾರ ಮೃತಪಟ್ಟಿದ್ದಾನೆ.
ಚಿತ್ರೀಕರಣದ ವೇಳೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿದ ಆರೋಪ ಅಡಿ ಚಿತ್ರ ನಿರ್ದೇಶಕ ಯೋಗರಾಜ್ ಭಟ್ ಹಾಗೂ ವ್ಯವಸ್ಥಾಪಕ ಸುರೇಶ್ ಸೇರಿ ಮೂವರ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ
ದುರ್ಘಟನೆ ಆಗಿದ್ದು ಹೇಗೆ?
• ಮಾದನಾಯಕನಹಳ್ಳಿ ಸಮೀಪದ ವಿಆರ್‌ಎಲ್ ಅರೇನಾ ಬಳಿ ದುರಂತ
• ಗೊರಗುಂಟೆ ಪಾಳ್ಯದ ಆಸ್ಪತ್ರೆಗೆ ದಾಖಲು; ಚಿಕಿತ್ಸೆ ಫಲಿಸದೆ ಮೋಹನ್ ಗುರುವಾರ ಸಾವು
• ಚಿತ್ರೀಕರಣದ ವೇಳೆ ಮುನ್ನೆಚ್ಚರಿಕೆ ಕೈಗೊಳ್ಳದ ಕಾರಣ ನಿರ್ದೇಶಕ, ಮ್ಯಾನೇಜರ್ ಸೇರಿ ಮೂವರ ವಿರುದ್ಧ ಎಫ್‌ಐಆರ್