Sandalwood ಸೆಂಚುರಿ ಸ್ಟಾರ್ ಶಿವಣ್ಣನಿಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು
ಸ್ಯಾಂಡಲ್‌ವುಡ್‌ನ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ 61ನೇ ವಯಸ್ಸಿನಲ್ಲೂ ಎನರ್ಜಿಟಿಕ್ ಆಗಿರೋ ನಟ. ಸದ್ಯ ಆರೋಗ್ಯ ವ್ಯತ್ಯಯದಿಂದ ಶಿವರಾಜ್‌ಕುಮಾರ್ ಆಸ್ಪತ್ರೆಗೆ ಹೋಗಿದ್ದರು.
ಬೆಂಗಳೂರು (ನ.04): ಸ್ಯಾಂಡಲ್‌ವುಡ್‌ನ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ 61ನೇ ವಯಸ್ಸಿನಲ್ಲೂ ಎನರ್ಜಿಟಿಕ್ ಆಗಿರೋ ನಟ. ಸದ್ಯ ಆರೋಗ್ಯ ವ್ಯತ್ಯಯದಿಂದ ಶಿವರಾಜ್‌ಕುಮಾರ್ ಆಸ್ಪತ್ರೆಗೆ ಹೋಗಿದ್ದರು. ಶಿವಣ್ಣ ಆಸ್ಪತ್ರೆಗೆ ಹೋಗುತ್ತಿದ್ದಂತೆ ಇತ್ತ ಅವರ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದರು. ಆದರೆ, ಶಿವಣ್ಣನ ಆರೋಗ್ಯದ ಬಗ್ಗೆ ವೈದ್ಯರು ಮಾಹಿತಿ ನೀಡುತ್ತಿದ್ದಂತೆ ನಿರಾಳರಾಗಿದ್ದಾರೆ.
ಅಂದಹಾಗೆ, ಶಿವರಾಜ್‌ಕುಮಾರ್ ಜ್ವರದಿಂದ ಬಳಲುತ್ತಿದ್ದಾರೆ. ಹೀಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಕೆಲವು ದಿನಗಳಿಂದ ಶಿವಣ್ಣನ ಆರೋಗ್ಯದಲ್ಲಿ ಏರುಪೇರಾಗಿತ್ತು. ಆದರೆ, ನಿನ್ನೆ (ನವೆಂಬರ್ 3) ಶಿವರಾಜ್‌ಕುಮಾರ್ ಹೆಚ್ಚು ಸುಸ್ತಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಲಾಗಿದೆ. ಬೆಂಗಳೂರಿನ ವೈದೇಹಿ ಆಸ್ಪತ್ರೆಯಲ್ಲಿ ಶಿವಣ್ಣನಿಗೆ ತಜ್ಞ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಜ್ವರದ ಜೊತೆಗೆ ಸಾಮಾನ್ಯ ಆರೋಗ್ಯ ತಪಾಸಣೆ ಕೂಡ ಮಾಡಿದ್ದಾರೆ ಎನ್ನಲಾಗಿದೆ.
ಜ್ವರಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಪಡೆದ ಬಳಿಕ ಶಿವರಾಜ್‌ಕುಮಾರ್ ಅವರನ್ನು ಮಧ್ಯಾಹ್ನವೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಸದ್ಯ ಶಿವಣ್ಣ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಹೀಗಾಗಿ ಅಭಿಮಾನಿಗಳು ಆತಂಕ ಪಡೆಬೇಕಾದ ಅಗತ್ಯವಿಲ್ಲ ಎಂದು ವೈದ್ಯರೇ ಮಾಧ್ಯಮಗಳಿಗೆ ಮಾಹಿತಿಯನ್ನು ನೀಡಿದ್ದಾರೆ. ನಿನ್ನೆ ಅರ್ಜುನ್ ಜನ್ಯ ನಿರ್ದೇಶನದ ಸಿನಿಮಾದಲ್ಲಿ ಶಿವಣ್ಣ ಮಳೆಯಲ್ಲಿ ನೆನೆದಿದ್ದರು. ಜೊತೆಗೆ ಆಸ್ಪತ್ರೆಗೆ ಹೋಗಿ ಜನರಲ್ ಚೆಕಪ್ ಮಾಡಿಸಿಕೊಂಡು ಬಂದಿದ್ದಾರೆ. ಅಭಿಮಾನಿಗಳು ಆತಂಕ ಪಡುವಂತಹದೇನಿಲ್ಲ ಎಂದು ಶಿವಣ್ಣ ಮ್ಯಾನೇಜರ್ ರಾಜ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
Golden Dressನಲ್ಲಿ ಮಿಂಚಿದ Rashmika Mandanna: ಕಿರಿಕ್ ಬೆಡಗಿ ಪೋಸ್ ನೋಡಿ ಡವ್ ರಾಣಿ ಎಂದ ಫ್ಯಾನ್ಸ್!
ಕೆಲವು ವರ್ಷಗಳ ಹಿಂದೆ ಶಿವಣ್ಣನಿಗೆ ಹೃದಯ ಸಂಬಂಧಿ ಸಮಸ್ಯೆ ಎದುರಾಗಿತ್ತು. ಹೀಗಾಗಿ ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು. ಬೆಂಗಳೂರಿನ ಮಲ್ಯ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಪಡೆದು ಕೆಲ ದಿನ ವೈದ್ಯರ ಸಲಹೆ ಮೇರೆಗೆ ಅಲ್ಲೇ ಇದ್ದರು. ಆ ವೇಳೆ ಅಭಿಮಾನಿಗಳು ಆಸ್ಪತ್ರೆ ಮುಂದೆ ಆತಂಕದಿಂದ ಜಮಾಯಿಸಿದ್ದರು. ಇನ್ನೊಂದು ಸಂದರ್ಭದಲ್ಲಿ ಶಿವಣ್ಣ ಭುಜ ನೋವಿನಿಂದ ಬಳಲುತ್ತಿದ್ದರು. ಬಲಭುಜದ ನೋವು ಹೆಚ್ಚಾಗಿದ್ದರಿಂದ ಶೂಟಿಂಗ್‌ಗೆ ಬ್ರೇಕ್ ಕೊಟ್ಟು ಶಸ್ತ್ರ ಚಿಕಿತ್ಸೆಗೆಂದು ಲಂಡನ್‌ಗೆ ತೆರಳಿದ್ದರು. ಆ ಸಂದರ್ಭದಲ್ಲಿ ತಮ್ಮ 57ನೇ ಹುಟ್ಟುಹಬ್ಬವನ್ನೂ ಆಚರಿಸಿಕೊಂಡಿರಲಿಲ್ಲ. ಕೆಲವು ದಿನ ಲಂಡನ್‌ನಲ್ಲಿ ಚಿಕಿತ್ಸೆ ಪಡೆದ ಬಳಿಕ ಬೆಂಗಳೂರಿಗೆ ಹಿಂತಿರುಗಿದ್ದರು.