ಕಿಚ್ಚ ಸುದೀಪ್ ಬಿಜೆಪಿಗೆ ಬೆಂಬಲ ಘೋಷಿಸುತ್ತಿದ್ದಂತೆ ಪರ ವಿರೋಧಗಳು ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ನಟ ಪ್ರಕಾಶ್ ರಾಜ್ ಆಘಾತ ವ್ಯಕ್ತಪಡಿಸಿದ್ದಾರೆ. ಸುದೀಪ್ ನಿರ್ಧಾರದಿಂದ ನೋವಾಗಿದೆ ಎಂದಿದ್ದಾರೆ. 

ಬೆಂಗಳೂರು(ಏ.05): ಕರ್ನಾಟಕ ವಿಧಾನಸಭಾ ಚುನಾವಣೆ ಕಣ ರಂಗೇರಿದೆ. ಮೂರು ಪಕ್ಷಗಳು ಪ್ರಚಾರ, ರಣಂತ್ರಗಳು ಜೋರಾಗಿದೆ. ಇದರ ನಡುವೆ ಬಿಜೆಪಿಗೆ ಆನೆ ಬಲ ಸಿಕ್ಕಿದೆ. ಖ್ಯಾತ ನಟ ಕಿಚ್ಚ ಸುದೀಪ್ ಇಂದು ಬಿಜೆಪಿಗೆ ಬೆಂಬಲ ಘೋಷಿಸಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ ಜೊತೆ ಸುದ್ದಿಗೋಷ್ಠಿ ನಡೆಸಿದ ಕಿಚ್ಚ ಸುದೀಪ್ ತಮ್ಮ ಬೆಂಬಲ ಪ್ರಕಟಿಸಿದರು. ಕಿಚ್ಚ ಸುದೀಪ್ ನಿರ್ಧಾರ ನಟ ಪ್ರಕಾಶ್ ರಾಜ್‌ಗೆ ತೀವ್ರ ಆಘಾತ ತಂದಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಕಾಶ್ ರಾಜ್, ಕಿಚ್ಚ ಸುದೀಪ್ ನಿರ್ಧಾರ ಅಚ್ಚರಿ ತಂದಿದೆ. ಜೊತೆಗೆ ತೀವ್ರ ನೋವಾಗಿದೆ ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ.

ಕಿಚ್ಚು ಸುದೀಪ್ ಬಿಜೆಪಿಗೆ ಬೆಂಬಲ ನೀಡಿರುವುದು ಪ್ರಕಾಶ್ ರಾಜ್ ಸೇರಿದಂತೆ ಕಾಂಗ್ರೆಸ್ ನಾಯಕರು, ಎಡಪಂಥೀಯ ನಾಯಕರಿಗೆ ಸುತಾರಂ ಇಷ್ಟವಾಗಿಲ್ಲ. ಒಂದೆಡೆ ಕಾಂಗ್ರೆಸ್ ಸತತವಾಗಿ ಬಿಜೆಪಿಯನ್ನು ಟೀಕಿಸಿದೆ. ಪ್ರಕಾಶ್ ರಾಜ್ ಒಂದು ಹೆಜ್ಜೆ ಮುಂದೆ ಹೋಗಿ ಸುದೀಪ್ ತಮ್ಮನ್ನು ತಾವು ಮಾರಿಕೊಳ್ಳುವವರಲ್ಲ ಎಂದು ಟ್ವೀಟ್ ಮಾಡಿ ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನ ಮಾಡಿದ್ದರು. ಈ ಮೂಲಕ ಸುದೀಪ್ ಬಿಜೆಪಿಗೆ ಬೆಂಬಲ ನೀಡಿದರೆ, ಮಾರಿಕೊಂಡಂತೆ ಅನ್ನೋ ಅಭಿಪ್ರಾಯದಲ್ಲಿ ಟ್ವೀಟ್ ಮಾಡಿದ್ದರು. ಆದರೆ ಕಿಚ್ಚ ಸುದೀಪ್ ಟೀಕೆ ಟಿಪ್ಪಣಿಗೆ ಕಿವಿಗೊಡದೆ ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ.

ಅವರ ಜೊತೆ ಮುಂದಿನ ಸಿನಿಮಾ ಮಾಡಲು ಕಾಯ್ತಿದ್ದೀನಿ: ಪ್ರಕಾಶ್ ರಾಜ್ ಹೇಳಿಕೆಗೆ ಕಿಚ್ಚ ಸುದೀಪ್ ರಿಯಾಕ್ಷನ್

ಕಿಚ್ಚ ಸುದೀಪ್ ಬಿಜೆಪಿ ಸೇರಲಿದ್ದಾರೆ, ಬಿಜೆಪಿಗೆ ಬೆಂಬಲ ನೀಡಲಿದ್ದಾರೆ ಅನ್ನೋ ಸುದ್ದಿ ಮಾಧ್ಯಮಗಳಲ್ಲಿ ಕಳೆದ ಕೆಲದಿನಗಳಿಂದ ಹರಿದಾಡುತ್ತಿತ್ತು. ಇಂದು ಸುದ್ದಿಗೋಷ್ಠಿ ಕರೆಯುತ್ತಿದ್ದಂತೆ ಮಾಧ್ಯಮಗಳು ಸತತ ಸುದ್ದಿ ಪ್ರಸಾರ ಮಾಡಿತ್ತು. ಇದರ ಬೆನ್ನಲ್ಲೇ ಪ್ರಕಾಶ್ ಟ್ವೀಟ್ ಮೂಲಕ ಇವು ಸುಳ್ಳು ಸುದ್ದಿ ಎಂದಿದ್ದರು. ಬಿಜೆಪಿ ಸೋಲುವ ಭೀತಿ ಕಾಡುತ್ತಿದೆ. ಹೀಗಾಗಿ ಸುಳ್ಳು ಸುದ್ದಿಯನ್ನು ಬಿಜೆಪಿ ಹರಡುತ್ತಿದೆ. ಕಿಚ್ಚ ಸುದೀಪ್ ತಮ್ಮನ್ನು ತಾವು ಮಾರಿಕೊಳ್ಳುವ ವ್ಯಕ್ತಿತ್ವವಲ್ಲ ಎಂದು ಪ್ರಕಾಶ್ ರಾಜ್ ಹೇಳಿದ್ದರು. ಈ ಮೂಲಕ ಪರೋಕ್ಷವಾಗಿ ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆ ಹಾಗೂ ಬೆಂಬಲಕ್ಕೆ ವಿರೋಧ ವ್ಯಕ್ತಪಡಿಸಿದ್ದರು.

ಸುದ್ದಿಗೋಷ್ಠಿಯಲ್ಲಿ ಪ್ರಕಾಶ್ ರಾಜ್ ಟ್ವೀಟ್ ಕರಿತು ಮಾಧ್ಯಮದ ಪ್ರಶ್ನೆಗೆ ಕಿಚ್ಚ ಸುದೀಪ್ ಅದೇ ದಾಟಿಯಲ್ಲಿ ಉತ್ತರ ನೀಡಿದ್ದರು. ನಾನು ಪ್ರಕಾಶ್ ರಾಜ್ ಅವರೊಂದಿಗೆ ಮಂದಿನ ಸಿನಿಮಾ ಮಾಡಲು ಕಾಯುತ್ತಿದ್ದೇನೆ. ಪ್ರಕಾಶ್ ರಾಜ್ ಜೊತೆ ಸಿನಿಮಾ ಮಾಡಿದ್ದಾರೆ. ಅವರ ಬಗ್ಗೆ ಅಪಾರ ಗೌರವವಿದೆ. ಮುಂದಿನ ಸಿನಿಮಾಗಾಗಿ ಕಾಯುತ್ತಿದ್ದೇನೆ ಎಂದಿದ್ದರು.

ನನ್ನ ಬೆಂಬಲ ಸಿಎಂ ಬೊಮ್ಮಾಯಿಗೆ: ಕಿಚ್ಚ ಸುದೀಪ ಬಹಿರಂಗ ಹೇಳಿಕೆ

ವಾಲ್ಮೀಕಿ ಸಮುದಾಯಕ್ಕೆ ಸೇರಿದ ಸುದೀಪ್‌ ಅವರು ಚಿತ್ರದುರ್ಗ ಜಿಲ್ಲೆಯ ಯಾವುದಾದರೊಂದು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎಂಬ ವದಂತಿಯೂ ಕಳೆದ ಚುನಾವಣೆ ವೇಳೆ ಕೇಳಿಬಂದಿತ್ತು. ಎಲ್ಲ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಆತ್ಮೀಯ ಸಂಬಂಧ ಇರಿಸಿಕೊಂಡಿರುವ ಸುದೀಪ್‌ ಅವರು ನಿರ್ದಿಷ್ಟವಾಗಿ ಒಂದು ರಾಜಕೀಯ ಪಕ್ಷದೊಂದಿಗೆ ಗುರುತಿಸಿಕೊಳ್ಳುವ ಬಗ್ಗೆ ಅನುಮಾನವೂ ಇತ್ತು.ಆದರೆ ಈ ಬಾರಿ ಬಿಜೆಪಿ ಸುದೀಪ್ ಬೆಂಬಲ ಪಡೆಯುವಲ್ಲಿ ಯಶಸ್ವಿಯಾಗಿದೆ. ಇದೇ ವೇಳೆ ಸುದೀಪ್ ತಮ್ಮ ಬೆಂಬಲ ಬಸವರಾಜ್ ಬೊಮ್ಮಾಯಿಗೆ. ಯಾವುದೇ ಪಕ್ಷಕ್ಕೆ ಸೇರ್ಪಡೆಯಾಗಿಲ್ಲ. ವ್ಯಕ್ತಿ ನೋಡಿ ಬೆಂಬಲ ನೀಡಿದ್ದೇನೆ. ನನ್ನ ಕಷ್ಟಕಾಲದಲ್ಲಿ ನಿಂತವರಿಗೆ ನಾನು ಬೆಂಬಲ ನೀಡುತ್ತೇನೆ ಎಂದಿದ್ದಾರೆ.