ಭಾರತೀಯ ಅಂಚೆ ಇಲಾಖೆಯು ಪ್ರೀತಿಯ ಕಿಚ್ಚ ಸುದೀಪ್ ಅವರ ವಿಶೇಷ ಅಂಚೆ ಲಕೋಟೆಯನ್ನು ಹೊರ ತರುತ್ತಿದೆ. ಈ ವಿಚಾರ ಕಿಚ್ಚನ ಅಭಿಮಾನಿಗಳ ಸಂಭ್ರಮಕ್ಕೆ ಕಾರಣವಾಗಿದೆ.

ಭಾರತೀಯ ಅಂಚೆ ಇಲಾಖೆಯು ಪ್ರೀತಿಯ ಕಿಚ್ಚ ಸುದೀಪ್ ಅವರ ವಿಶೇಷ ಅಂಚೆ ಲಕೋಟೆಯನ್ನು ಹೊರ ತರುತ್ತಿದೆ. ಈ ವಿಚಾರ ಕಿಚ್ಚನ ಅಭಿಮಾನಿಗಳ ಸಂಭ್ರಮಕ್ಕೆ ಕಾರಣವಾಗಿದೆ. ಭಾರತ ಸರ್ಕಾರದ ಅಂಚೆ ಇಲಾಖೆಯು ದೇಶದ ಮಹತ್ತರ ಘಟನೆಗಳನ್ನು, ಪ್ರಶಸ್ತಿಗಳನ್ನು ಅಥವಾ ವ್ಯಕ್ತಿಗಳ ಸಾಧನೆಗಳು ನೂರಾರು ವರ್ಷ ದಾಖಲೆಯಾಗಿ ಉಳಿಸಬೇಕೆಂಬ ಕಾರಣಕ್ಕೆ ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡುತ್ತದೆ. ಇದೀಗ ಕಿಚ್ಚ ಸುದೀಪ್ ಅವರ ಸಾಧನೆ ಗುರುತಿಸಿ ಅಂಚೆ ಇಲಾಖೆ ಈ ಕೆಲಸ ಮಾಡುತ್ತಿರುವುದು ಅಭಿಮಾನಿಗಳಿಗೆ ಹೆಮ್ಮೆಯ ವಿಚಾರವಾಗಿದೆ. 

ಚಿತ್ರರಂಗದಲ್ಲಿ 25ವರ್ಷಗಳ ಜರ್ನಿಯನ್ನು ಯಶ್ವಿಯಾಗಿ ಪೂರ್ಣಗೊಳಿಸಿರುವ ಪ್ಯಾನ್ ಇಂಡಿಯಾ ಸ್ಟಾರ್ ಸುದೀಪ್ ಅವರ ಸಾಧನೆಯನ್ನು ಸಹ ಭಾರತೀಯ ಅಂಚೆ ಇಲಾಖೆ ದಾಖಲೆ ಮಾಡುತ್ತಿದೆ. ಆ ನಿಮಿತ್ತ ಅಂಚೆ ಇಲಾಖೆಯ ಅಧೀಕ್ಷರಾದ ಶ್ರೀ ಮಾದೇಶ್ ಅವರು ಕಿಚ್ಚ ಸುದೀಪ್ ಅವರ ಮನೆಗೆ ಭೇಟಿ ನೀಡಿದ್ದರು. ಅಭಿನಯ ಚಕ್ರವರ್ತಿಯಿಂದ NOC ಯನ್ನು ಪಡೆದರು. ಜೊತೆಗೆ ಬಿಡುಗಡೆ ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಆಹ್ವಾನಿಸಿದರು. ಅಂದಹಾಗೆ ಈ ವಿಶೇಷ ಅಂಚೆ ಲಕೋಟೆಯ ಬಿಡುಗಡೆ ಸಮಾರಂಭ ಯಾವಾಗ ಎನ್ನುವುದು ಇನ್ನು ಬಹಿರಂಗವಾಗಿಲ್ಲ. ಆಧರೆ ಶೀಘ್ರದಲ್ಲಿಯೇ ನೆರವೇರಲಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.

ಕಿಚ್ಚ ಸುದೀಪ್ ಅವರ ಸಾಧನೆಗಳನ್ನು ಗುರುತಿಸಿ ವಿಶೇಷ ಅಂಚೆ ಲಕೋಟೆ ಮೂಲಕ ಗೌರವ ಸಲ್ಲಿಸುತ್ತಿರುವ ಭಾರತೀಯ ಅಂಚೆ ಇಲಾಖೆಯನ್ನು ಕಿಚ್ಚ ಸುದೀಪ್ ಅವರ ಅಭಿಮಾನಿಗಳು ಮತ್ತು ಕನ್ನಡ ಮನಸುಗಳು ಸಾಮಾಜಿಕ ಜಾಲತಾಣದಲ್ಲಿ ಹೃದಯತುಂಬಿ ಶ್ಲಾಘಿಸುತ್ತಿದ್ದಾರೆ. 

ಕಿಚ್ಚನ ಹಬ್ಬಕ್ಕೆ ಸಿದ್ದರಾದ್ರು ಅಭಿಮಾನಿಗಳು: ಸೆಪ್ಟೆಂಬರ್ 2ರಂದು ಸುದೀಪ್ ಫ್ಯಾನ್ಸ್ ದರ್ಬಾರ್!

ಕಿಚ್ಚ ಸುದೀಪ್ ಅವರ ಸಿನಿಮಾ ವಿಚಾರಕ್ಕೆ ಬರುವುದಾದರೆ ತಾಯವ್ವ ಸಿನಿಮಾ ಮೂಲಕ ಬಣ್ಣದ ಲೋಕದ ಪಯಣ ಪ್ರಾರಂಭಿಸಿದ ಕಿಚ್ಚ ಬಳಿಕ ಸ್ಪರ್ಷ ಸಿನಿಮಾ ಮೂಲಕ ಹೀರೋ ಆಗಿ ದೊಡ್ಡ ಪರದೆ ಮೇಲೆ ಅಬ್ಬರಿಸಿದರು. ಸ್ಪರ್ಷ, ಹುಚ್ಚ ಸಿನಿಮಾಗಳು ಕಿಚ್ಚನ ನಟನೆಯನ್ನು ಕನ್ನಡ ಪ್ರೇಕ್ಷಕರಿಗೆ ಪರಿಚಯಿಸಿತು. ಬಳಿಕ ಅನೇಕ ಸಿನಿಮಾಗಳಲ್ಲಿ ಮಿಂಚಿದರು. ನಟನೆಯ ಜೊತೆಗೆ ಸುದೀಪ್ ನಿರ್ದೇಶನ, ನಿರ್ಮಾಣಕ್ಕೂ ಇಳಿದಿದ್ದಾರೆ. ಮೈ ಆಟೋಗ್ರಾಫ್ ಸಿನಿಮಾ ಮೂಲಕ ಸುದೀಪ್ ನಿರ್ದೇಶನಕ್ಕೆ ಇಳಿದರು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಸಕ್ಸಸ್ ತಂದುಕೊಟ್ಟಿತು. ಬಳಿಕ ಕಿಚ್ಚ ಸ್ಟಾರ್ ಆಗಿ ಗುರುತಿಸಿಕೊಂಡರು. 

Kiccha Sudeep: ಸುದೀಪ್ ಯಂಗ್ ಅಂಡ್ ಎನರ್ಜಿಟಿಕ್ ಲುಕ್ ಹಿಂದಿನ ಸೂಪರ್ ಸಿಕ್ರೇಟ್

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕನ್ನಡ ಮಾತ್ರವಲ್ಲದೇ ಬೇರೆ ಬೇರೆ ಭಾಷೆಯಲ್ಲಿ ಮಿಂಚುತ್ತಿದ್ದಾರೆ. ತಮಿಳು, ತೆಲುಗು ಹಿಂದಿಯಲ್ಲಿ ಮಿಂಚಿರುವ ಸುದೀಪ್ ವಿಕ್ರಾಂತ್ ರೋಣ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಹೊರಹೊಮ್ಮಿದ್ದಾರೆ. ಅಭಿನಯ ಚಕ್ರವರ್ತಿ ಕೊನೆಯದಾಗಿ ವಿಕ್ರಾಂತ್ ರೋಣ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದೆ. ಅನೂಪ್ ಭಂಡಾರಿ ಸಾರಥ್ಯದಲ್ಲಿ ಮೂಡಂಬಿದಿರುವ ಈ ಸಿನಿಮಾಗೆ ಜಾಕ್ ಮಂಜು ನಿರ್ಮಾಣ ಮಾಡಿದ್ದರು. ಈ ಸಿನಿಮಾದ ವಿಶೇಷ ಹಾಡಿನಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ನಟಿಸಿದ್ದರು. ರಾ..ರಾ..ರಕ್ಕಮ್ಮ ಹಾಡು ಸಿಕ್ಕಾಪಟ್ಟೆ ಫೇಮಸ್ ಆಗಿದೆ. ವಿಕ್ರಾಂತ್ ರೋಣ ಬಳಿಕ ಕಿಚ್ಚನ ಹೊಸ ಸಿನಿಮಾ ಅನೌನ್ಸ್ ಆಗಿಲ್ಲ. ಮುಂದಿನ ಸಿನಿಮಾ ಯಾವುದು ಎನ್ನುವ ಕುತೂಹಲ ಹೆಚ್ಚಾಗಿದೆ. ರಿಯಲ್ ಸ್ಟಾರ್ ಉಪೇಂದ್ರ ಅವರ ಕಬ್ಜ ಸಿನಿಮಾದಲ್ಲಿ ಸುದೀಪ್ ವಿಭಿನ್ನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ಬಿಗ್ ಬಾಸ್ ಒಟಿಟಿ ರಿಯಾಲಿಟಿ ಶೋ ಅನ್ನು ನಡೆಸಿಕೊಡುತ್ತಿದ್ದಾರೆ.