Asianet Suvarna News Asianet Suvarna News

Puneeth Rajkumar: ಅಪ್ಪು ಜೊತೆಗಿನ ಸುಮಧುರ ಕ್ಷಣಗಳನ್ನು ಹಂಚಿಕೊಂಡ ಜನಾರ್ದನ ರೆಡ್ಡಿ ಪುತ್ರ ಕಿರೀಟಿ!

ಚಿಕ್ಕ ವಯಸ್ಸಿನಲ್ಲೇ ಕಿರೀಟಿ ರೆಡ್ಡಿಗೆ ಸಿನಿಮಾರಂಗದ ಮೇಲೆ ಆಸಕ್ತಿ ಬೆಳೆದಿತ್ತು. 'ಜಾಕಿ' ಚಿತ್ರ ಬಿಡುಗಡೆಯಾದಾಗ ಪುನೀತ್ ರಾಜ್‌ಕುಮಾರ್ ಜೊತೆಗೆ ಸಿನಿಮಾ ನೋಡುವ ಅವಕಾಶ ಕಿರೀಟಿಗೆ ಲಭ್ಯವಾಗಿತ್ತು. ಪುನೀತ್ ಕೂಡ ಆಗ ಕಿರೀಟಿಗೆ ಸಾಕಷ್ಟು ಸ್ಫೂರ್ತಿದಾಯಕ ಮಾತುಗಳನ್ನು ಆಡಿದ್ದರು.

Janardhana Reddys Son Kireeti Reddy Remembers Puneeth Rajkumar gvd
Author
Bangalore, First Published Mar 4, 2022, 12:36 PM IST

ಸ್ಯಾಂಡಲ್‌ವುಡ್‌ನ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) ಅಂದ್ರೆ ಅಪ್ಪು. ಅವರಿಗೆ, ಪ್ರೀತಿ, ಸ್ನೇಹ, ಆತ್ಮೀಯತೆ ತಾನೊಬ್ಬ ಸ್ಟಾರ್ ಎನ್ನುವ ಯಾವುದೇ ಹಮ್ಮು-ಬಿಮ್ಮು ಇಲ್ಲದೇ ಎಲ್ಲರೊಳಗೆ ಒಬ್ಬರಾಗಿ ಬೆರೆಯುತ್ತಿದ್ದ ಮೇರುನಟನಾಗಿ ಎಲ್ಲರೊಟ್ಟಿಗೆ ಒಡನಾಟ ಹೊಂದಿದ್ದವರು. ಅದೇ ರೀತಿ ಮಾಜಿ ಸಚಿವ ಜನಾರ್ದನ ರೆಡ್ಡಿ (Janardhana Reddy) ಕುಟುಂಬಕ್ಕೂ ಪುನೀತ್ ಕುಟುಂಬಕ್ಕೂ ಒಂದೊಳ್ಳೆ ಅವಿನಾಭಾವ ಸಂಬಂಧವಿತ್ತು. ಇದೀಗ ಅಪ್ಪು ಆಶೀರ್ವಾದೊಂದಿಗೆ ಜನಾರ್ದನ ರೆಡ್ಡಿ ಪುತ್ರ ಕಿರೀಟಿ ರೆಡ್ಡಿ (Kireeti Reddy) ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಹಾಗಾಗಿ ಒಂದಷ್ಟು ತಯಾರಿ ಮಾಡಿಕೊಂಡು ದೊಡ್ಡ ತಾರಾಬಳಗ ಹಾಗೂ ತಾಂತ್ರಿಕ ಬಳಗದೊಂದಿಗೆ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡುತ್ತಿರುವ ಕಿರೀಟಿ, ಅಪ್ಪು ಜೊತೆಗಿನ ಸುಮಧುರ ಕ್ಷಣಗಳನ್ನು ಮೆಲುಕು ಹಾಕಿದ್ದಾರೆ.

ಹೌದು! ಚಿಕ್ಕ ವಯಸ್ಸಿನಲ್ಲೇ ಕಿರೀಟಿ ರೆಡ್ಡಿಗೆ ಸಿನಿಮಾರಂಗದ ಮೇಲೆ ಆಸಕ್ತಿ ಬೆಳೆದಿತ್ತು. 'ಜಾಕಿ' (Jackie) ಚಿತ್ರ ಬಿಡುಗಡೆಯಾದಾಗ ಪುನೀತ್ ರಾಜ್‌ಕುಮಾರ್ ಜೊತೆಗೆ ಸಿನಿಮಾ ನೋಡುವ ಅವಕಾಶ ಕಿರೀಟಿಗೆ ಲಭ್ಯವಾಗಿತ್ತು. ಪುನೀತ್ ಕೂಡ ಆಗ ಕಿರೀಟಿಗೆ ಸಾಕಷ್ಟು ಸ್ಫೂರ್ತಿದಾಯಕ ಮಾತುಗಳನ್ನು ಆಡಿದ್ದರು. ಅಂದು ತೆಗೆದ ಫೋಟೋ ಹಾಗೂ ಪುನೀತ್​ ಜತೆಗಿನ ಇತ್ತೀಚಿನ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ (Social Media) ಕಿರೀಟಿ ಹಂಚಿಕೊಂಡಿದ್ದು, ವಿಶೇಷ ಸಾಲುಗಳನ್ನು ಕೂಡ ಬರೆದುಕೊಂಡಿದ್ದಾರೆ.

ಜನಾರ್ದನ ರೆಡ್ಡಿ ಪುತ್ರ ಕಿರೀಟಿ ಚಿತ್ರದ ಮುಹೂರ್ತಕ್ಕೆ Rajamouli ಆಗಮನ

ಈ ಬಗ್ಗೆ ಫೇಸ್‌ಬುಕ್‌ನಲ್ಲಿ (Facebook) 'ಈ ಎರಡು ಚಿತ್ರಗಳ ನಡುವಿನ ವ್ಯತ್ಯಾಸ 10 ವರ್ಷಗಳದ್ದು . ಆದರೂ ಆ ನೆನಪುಗಳು ನನ್ನ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ. 2010ರಲ್ಲಿ 'ಜಾಕಿ' ಚಿತ್ರದ ಬಿಡುಗಡೆಯ ಸಂದರ್ಭದಲ್ಲಿ ನಾನು ಅಪ್ಪು ಸರ್ ಅವರನ್ನು ಮೊದಲ ಸಲ ಭೇಟಿಯಾದೆ. ಅವರ ಡ್ಯಾನ್ಸ್, ಆ್ಯಕ್ಷನ್, ಸ್ಕ್ರೀನ್ ಪ್ರೆಸೆನ್ಸ್ ನೋಡಿ ಅಚ್ಚರಿಗೊಂಡಿದ್ದೆ. ಆದರೆ, ಅವರು ಆಫ್ ಸ್ಕ್ರೀನ್‌ನಲ್ಲಿದ್ದ ರೀತಿ ಮನಸಿಗೆ ಹತ್ತಿರವಾಯಿತು. ನಾವು ಥಿಯೇಟರ್‌ನಿಂದ ನನ್ನ ಮನೆಗೆ ಹೋಗುತ್ತಿದ್ದಾಗ, ಮಳೆ ಬೀಳುತ್ತಿತ್ತು ಮತ್ತು ಪುನೀತ್ ಸರ್ ಅವರೆ ನಬ್ಬರಿಗೂ ಕೊಡೆ ಹಿಡಿದರು. ನೃತ್ಯದ ಬಗ್ಗೆ ಮತ್ತು ಅವರ ಆಕ್ಷನ್ ಬಗ್ಗೆ ನನ್ನೊಂದಿಗೆ ಮಾತನಾಡುತ್ತಿದ್ದರು. ಚಿಕ್ಕ ಹುಡುಗನಿಗೆ ಕೊಡೆ ಹಿಡಿದ ಸೂಪರ್‌ಸ್ಟಾರ್. 

Janardhana Reddys Son Kireeti Reddy Remembers Puneeth Rajkumar gvd

ನಮ್ಮ ಕನಸಿನಲ್ಲಿಯೂ ಊಹಿಸಲಾಗದ ಸಂಗತಿ.  ಅದು ಪುನೀತ್ ಸರ್ ಅವರಿಂದ ಮಾತ್ರ ಸಾಧ್ಯ. ಆ ದಿನ ನಾನು ಸರಳತೆಯ ಮೌಲ್ಯವನ್ನು ಅರಿತೆ. ಇದು ಅಪ್ಪು ಸರ್ ಅವರಿಂದ ನಾನು ಅತ್ಯಮೂಲ್ಯವಾದ ಪಾಠ. ಜಗತ್ತಿಗೆ ನನ್ನನ್ನು ಪರಿಚಯಿಸಿಕೊಳ್ಳಲು ಕೇವಲ ಒಂದು ದಿನ ಬಾಕಿ. ಇದೆಲ್ಲಾ ಶುರುವಾಗಿದ್ದು ಪುನೀತ್ ರಾಜ್‌ಕುಮಾರ್ ಸರ್ ಅವರಿಂದ.  ಸ್ಫೂರ್ತಿ, ಮಾದರಿ, ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ನನ್ನ ಜೀವನದ ಮಾರ್ಗದರ್ಶಿ ಅವರು. ನಿಮ್ಮ ಮಾತುಗಳನ್ನು ಎಂದಿಗೂ ಮರೆಯುವುದಿಲ್ಲ ಸರ್.  ನನ್ನ ಮೇಲಿನ ನಿಮ್ಮ ನಂಬಿಕೆಯೆ ರಕ್ಷಾಕವಚ. ನಾನು ಅದನ್ನು ಜವಾಬ್ದಾರಿಯಿಂದ ನಿಭಾಯಿಸುತ್ತೇನೆ. ನೀವು ಮತ್ತು ನಮ್ಮ ಜನತೆ ಯಾವಾಗಲೂ ಹೆಮ್ಮೆಪಡುವಂತೆ ಮಾಡಲು ಸದಾ ಶ್ರಮಿಸುತ್ತೇನೆ' ಎಂದು ಭಾವನಾತ್ಮಕವಾಗಿ ಕಿರೀಟಿ ಬರೆದುಕೊಂಡಿದ್ದಾರೆ. ಈ ಮೂಲಕ ಅಪ್ಪು ಮತ್ತು ತನ್ನ ಒಡನಾಟವನ್ನು ಜನರಿಗೆ ಪರಿಚಯಿಸಿದ್ದಾರೆ.

Making of James Movie 2022: ಚಿತ್ರದ ಎಲ್ಲಾ ಫೈಟ್​ ಸೀನ್‌ಗಳು ಅಪ್ಪು ಸರ್ ಮೊಬೈಲ್​ನಲ್ಲಿತ್ತು: ಚೇತನ್‌ಕುಮಾರ್

ಇನ್ನು ತೆಲುಗಿನ ಪ್ರಸಿದ್ಧ ನಿರ್ಮಾಣ ಸಂಸ್ಥೆ ವಾರಾಹಿ ಪ್ರೊಡಕ್ಷನ್ (Vaaraahi Production) ಜನಾರ್ದನ ರೆಡ್ಡಿ ಪುತ್ರನನ್ನು ಚಿತ್ರರಂಗಕ್ಕೆ ಪರಿಚಯಿಸಲು ಮುಂದಾಗಿದೆ. ಈ ಸಿನಿಮಾ ಕನ್ನಡ ಹಾಗೂ ತೆಲುಗು ಎರಡೂ ಭಾಷೆಯಲ್ಲಿ ನಿರ್ಮಾಣಗೊಳ್ಳಲಿದ್ದು, ಚಿತ್ರದ ಟೈಟಲ್ ಅನ್ನು ಇನ್ನೂ ಚಿತ್ರತಂಡ ರಿವೀಲ್ ಮಾಡಿಲ್ಲ. ರಾಧಾಕೃಷ್ಣ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದೊಂದು ಲವ್ ಕಮ್ ಫ್ಯಾಮಿಲಿ ಕಥೆಯುಳ್ಳ ಸಿನಿಮಾ ಆಗಿದ್ದು, ತೆಲುಗಿನ ಸ್ಟಾರ್ ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ (Devi Sri Prasad) ಸಂಗೀತ ನೀಡಲಿದ್ದಾರೆ. 'ಬಾಹುಬಲಿ' ಚಿತ್ರಕ್ಕೆ ಕ್ಯಾಮೆರಾ ಹಿಡಿದ್ದ ಕೆ ಸೆಂಥಿಲ್ ಕುಮಾರ್‌ ಛಾಯಾಗ್ರಹಣ ಇರಲಿದೆ. ರವೀಂದರ್‌ ಕಲಾ ನಿರ್ದೇಶನ, ಖ್ಯಾತ ಸ್ಟಂಟ್‌ ಮಾಸ್ಟರ್‌ ಪೀಟರ್‌ ಹೀನ್‌ (Peter Hein) ಸಾಹಸ ಸಂಯೋಜನೆ ಚಿತ್ರಕ್ಕಿದೆ.
 

Follow Us:
Download App:
  • android
  • ios