ಕೊರೋನಾ ವೈರಸ್‌ ಮತ್ತು ಲಾಕ್‌ಡೌನ್‌ನಿಂದ ಜನರ ಜೀವನ ಅಸ್ತವ್ಯಸ್ತಗೊಂಡಿದೆ. ಅದರಲ್ಲೂ ಸ್ಯಾಂಡಲ್‌ವುಡ್‌ಗೆ ದಿನೆ ದಿನೇ ದೊಡ್ಡ ಪ್ರಮಾಣದಲ್ಲಿ ಸಂಕಷ್ಟ ಎದುರಾಗುತ್ತಿದೆ.  ಈ ನಡುವೆ ಕನ್ನಡ ಚಿತ್ರರಂಗ ಹಿರಿಯ ನಟ ಮತ್ತು ಕಿರುತೆರೆ ಪೋಷಕ ನಟರಾಗಿ ಕಾಣಿಸಿಕೊಳ್ಳುತ್ತಿದ್ದ ಹುಲಿವನ್ ಗಂಗಾಧರ್‌ ವಿಧಿವಶರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು. 

ಸ್ಯಾಂಡಲ್‌ವುಡ್ ನಿರ್ದೇಶಕ ಜೋಗಿ ಪ್ರೇಮ್ ತಾಯಿ ನಿಧನ!

ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಗಾಧರ್ ನಿನ್ನ ರಾತ್ರಿ ಉಸಿರಾಟದ ತೊಂದರೆಯಿಂದ ಕೊನೆ ಉಸಿರೆಳೆದಿದ್ದಾರೆ.

1500ಕ್ಕೂ ಹೆಚ್ಚು ನಾಟಕ, 118 ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದಿ ಈ ಹಿರಿಯ ಕಲಾವಿದ, ಕಿರುತೆರೆಯಲ್ಲೂ ಬ್ಯುಸಿಯಾಗಿದ್ದರು. 

ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಪ್ರೇಮಲೋಕ' ಧಾರಾವಾಹಿಯಲ್ಲಿ ಪೋಷಕ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಧಾರಾವಾಹಿಯ ಚಿತ್ರೀಕರಣದಲ್ಲಿ ಗಂಗಾಧರ್‌ ಭಾಗಿಯಾಗಿದ್ದರು. ಚಿತ್ರೀಕರಣದ ಎರಡನೇ ದಿನಕ್ಕೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. 

ಕೊರೋನಾ ಪಾಸಿಟಿವ್ ಬಂದ ಕಾರಣ ಗಂಗಾಧರ್ ಡಿಪ್ರೆಶನ್‌ಗೆ ಒಳಗಾಗಿದ್ದರು ಎನ್ನಲಾಗಿದೆ. ಈ ಕಾರಣಕ್ಕೆ ಮಕ್ಕಳ ಜೊತೆಯೂ ಮಾತನಾಡುವುದನ್ನು ಬಿಟ್ಟಿದ್ದರಂತೆ. 

ಅಭಿಮಾನಿಗಳ ಮುಂದೆ ಲೈವ್ ಬಂದ ಧ್ರುವ ಸರ್ಜಾ ಹೇಳಿದ್ದೇನು?

ಉಲ್ಟಾ ಪಲ್ಟಾ, ಗ್ರಾಮ ದೇವತೆ, ಭೂಮಿ ತಾಯಿ ಚೊಚ್ಚಲ ಮಗ, ಅಪ್ಪು, ಕುರಿಗಳು ಸಾರ್ ಕುರಿಗಳು, ಶಬ್ಧವೇದಿ  ಸೇರಿದಂತೆ ಸಾಕಷ್ಟು ಹಿಟ್ ಸಿನಿಮಾಗಳಲ್ಲಿ ನಟಿಸಿದ ಈ ಕಲಾವಿದ, ಸ್ಯಾಂಡಲ್‌ವುಡ್‌ನ ಬಹುತೇಕ ಹಿರಿಯ, ಕಿರಯ ಕಲಾವಿದರೊಂದಿಗೆ ತೆರೆ ಹಂಚಿಕೊಂಡಿದ್ದಾರೆ. ಅಲ್ಲದೇ ಅನೇಕ ಸೀರಿಯಲ್‌ಗಳಲ್ಲಿಯೂ ನಟಿಸುತ್ತಿದ್ದು, ಎಲ್ಲರ ಮನೆ ಮಾತಾಗಿದ್ದಾರು.

ಮೂವರು ಹೆಣ್ಣು ಮಕ್ಕಳು ಮತ್ತು ಪತ್ನಿಯನ್ನು ಅಗಲಿರುವ ಹುಲಿವನ ಗಂಗಾಧರ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸೋಣ.