Kichcha Sudeep: ಡಿಸೆಂಬರ್ 15 ರಂದು 'ಕಬ್ಜ' ಸೆಟ್‌ಗೆ ಅಭಿನಯ ಚಕ್ರವರ್ತಿ ಎಂಟ್ರಿ

ಆರ್​.ಚಂದ್ರು ಹಾಗೂ ಉಪೇಂದ್ರ ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಪ್ಯಾನ್‌ ಇಂಡಿಯಾ  ಸಿನಿಮಾ 'ಕಬ್ಜ' ಪ್ರೋಮೋ ಮತ್ತು ಮೋಷನ್ ಪೋಸ್ಟರ್‌ಗಳು ಈಗಾಗಲೇ ಬಿಡುಗಡೆಯಾಗಿ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದ್ದು, ಇದೀಗ ಚಿತ್ರತಂಡದಿಂದ ವಿಶೇಷ ಮಾಹಿತಿಯೊಂದು ಹೊರಬಿದ್ದಿದೆ.

Kannada Actor Kichcha Sudeep to enter Kabza sets on December 15th gvd

ಆರ್​.ಚಂದ್ರು (R.Chandru) ಹಾಗೂ ಉಪೇಂದ್ರ (Upendra) ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಪ್ಯಾನ್‌ ಇಂಡಿಯಾ (Pan India) ಸಿನಿಮಾ 'ಕಬ್ಜ' (Kabza) ಪ್ರೋಮೋ ಮತ್ತು ಮೋಷನ್ ಪೋಸ್ಟರ್‌ಗಳು ಈಗಾಗಲೇ ಬಿಡುಗಡೆಯಾಗಿ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದೆ. ಚಿತ್ರದಲ್ಲಿ ದೊಡ್ಡ ತಾರಾಬಳಗವೇ ಇದೆ. ಸ್ಯಾಂಡಲ್‌ವುಡ್‌ನ ಪವರ್ ಸ್ಟಾರ್ ಪುನೀತ್​ ರಾಜ್​ಕುಮಾರ್ (Puneeth Rajkumar)​ ಅಗಲಿಕೆಯ ಕಾರಣದಿಂದ 'ಕಬ್ಜ' ಟೀಸರ್ (Teaser) ಬಿಡುಗಡೆಯನ್ನು ಚಿತ್ರತಂಡ ಮುಂದೂಡಿತ್ತು. ಇದೀಗ ಚಿತ್ರತಂಡದಿಂದ ವಿಶೇಷ ಮಾಹಿತಿಯೊಂದು ಹೊರಬಿದ್ದಿದೆ.

ಹೌದು! 'ಕಬ್ಜ' ಚಿತ್ರದ ಚಿತ್ರೀಕರಣ ಮತ್ತೆ ಆರಂಭವಾಗಿದ್ದು, ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kichcha Sudeep) ಅವರು ಡಿಸೆಂಬರ್ 15ರಿಂದ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ. 'ವಿಕ್ರಾಂತ್ ರೋಣ' ಚಿತ್ರದ ನಂತರ ಈ ಚಿತ್ರದಲ್ಲಿ ಸುದೀಪ್ ಅಭಿನಯಿಸುತ್ತಿದ್ದಾರೆ. ಅಂಡರ್‌ವರ್ಲ್ಡ್ ಕಥೆಯನ್ನು ಹೊಂದಿರುವ 'ಕಬ್ಜ' ರೆಟ್ರೋ ಲುಕ್‌ನ್ನು ಹೊಂದಿದೆ. 'ಕಬ್ಜ' ಸಿನಿಮಾದಲ್ಲಿ ಸುದೀಪ್ ಅವರು ಭಾರ್ಗವ್ ಭಕ್ಷಿ ಎನ್ನುವ ಮಾಫಿಯಾ ದೊರೆಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾ ಮೂಲಕ ಉಪೇಂದ್ರ ಮತ್ತು ಸುದೀಪ್ ಎರಡನೇ ಬಾರಿ ತೆರೆ ಮೇಲೆ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ 'ಮುಕುಂದ ಮುರಾರಿ' (Mukunda Murari) ಸಿನಿಮಾದಲ್ಲಿ ಇವರಿಬ್ಬರೂ ಜೊತೆಯಾಗಿ ನಟಿಸಿದ್ದರು. 

Upendra: 'ಕಬ್ಜ' ಚಿತ್ರದ ಟೀಸರ್ ಲಾಂಚ್ ಮುಂದೂಡಿದ ನಿರ್ದೇಶಕ ಆರ್.ಚಂದ್ರು

ಎಂ.ಟಿ.ಬಿ ನಾಗರಾಜ್ (M.T.B.Nagaraj) ಅರ್ಪಿಸುವ ಈ ಚಿತ್ರವು ಶ್ರೀ ಸಿದ್ದೇಶ್ವರ ಎಂಟರ್ ಪ್ರೈಸಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿದೆ. 'ಕಬ್ಜ' ಚಿತ್ರಕ್ಕೆ 'ಕೆಜಿಎಫ್' ಖ್ಯಾತಿಯ ರವಿ ಬಸ್ರೂರು (Ravi  Basrur) ಸಂಗೀತ ಸಂಯೋಜನೆಯಿದ್ದು, ಕಾರ್ಯಕಾರಿ ನಿರ್ಮಾಪಕರಾಗಿ ಮುನೀಂದ್ರ ಹಾಗೂ ಲೈನ್ ಪ್ರೊಡ್ಯೂಸರ್ ಆಗಿ ರಾಜಶೇಖರ್ ಕಾರ್ಯನಿರ್ವಹಿಸುತ್ತಿದ್ದಾರೆ. ಎ.ಜೆ.ಶೆಟ್ಟಿ ಕ್ಯಾಮೆರಾ ಕೈಚಳಕ, ಮಹೇಶ್ ಸಂಕಲನ, ರಾಜು ಸುಂದರಂ, ಗಣೇಶ್, ಶೇಖರ್ ನೃತ್ಯ ನಿರ್ದೇಶನ ಹಾಗೂ ರವಿವರ್ಮ, ವಿಕ್ರಂಮೋರ್, ವಿಜಯ್, ಪೀಟರ್ ಹೆನ್ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. 

Kannada Actor Kichcha Sudeep to enter Kabza sets on December 15th gvd

'ಕಬ್ಜ' ಚಿತ್ರದಲ್ಲಿ ದೊಡ್ಡ ತಾರಾಬಳಗವೇ ಇದ್ದು, ಬಾಲಿವುಡ್‌ನ ಖ್ಯಾತ ನಟ ನವಾಬ್‌ ಶಾ (Nawab Shah) ಇತ್ತೀಚೆಗೆ ಸಿನಿಮಾ ಸೆಟ್‌ಗೆ ಎಂಟ್ರಿ ಕೊಟ್ಟಿದ್ದರು. ತಮಿಳಿನ 'ಐ' (I) ಚಿತ್ರದ ಖ್ಯಾತಿಯ ಕಾಮರಾಜನ್‌ (Kamarajan), ಟಾಲಿವುಡ್‌ ವಿಲನ್ ಜಗಪತಿ ಬಾಬು (Jagapati Babu), ರಾಹುಲ್‌ ದೇವ್‌, ಸುನಿಲ್‌ ಪುರಾಣಿಕ್‌, ಲಕ್ಷ್ಮೀಶ ಲಕ್ಷ್ಮಣ್‌ (ಲಕ್ಕಿ ಲಕ್ಷ್ಮಣ್‌),  ಪ್ರಮೋದ್‌ ಶೆಟ್ಟಿ, ರಾಹುಲ್ ಜಗತಪ್, ಅನೂಪ್ ರೇವಣ್ಣ, ಜಾನ್ ಕೊಕ್ಕಿನ್, ನವೀನ್, ಕೋಟ ಶ್ರೀನಿವಾಸ್, ಜಯಪ್ರಕಾಶ್, ಕಾಟ್ ರಾಜು, ಸುಬ್ಬರಾಜು ಮುಂತಾದವರು ಚಿತ್ರದ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. 

ಅದ್ಧೂರಿಯಾಗಿ ನಡೀತಿದೆ ಕಬ್ಜ ಶೂಟಿಂಗ್, ಉಪ್ಪಿ ಸೂಪರ್ ಲುಕ್

ಈ ಚಿತ್ರದಲ್ಲಿ ಉಪೇಂದ್ರ ಎದುರಿಗೆ ದಕ್ಷಿಣ ಭಾರತದ ಅತಿ ದೊಡ್ಡ ಡಾನ್‌ ಭಗೇರನಾಗಿ ಕಾಣಿಸಿಕೊಳ್ಳುತ್ತಿದ್ದೇನೆ. ಇಲ್ಲಿ ಮೂರು ದಿನಗಳ ಶೆಡ್ಯೂಲ್‌ ಇದೆ. ಬಳಿಕ ಹೈದರಾಬಾದ್‌, ಮಂಗಳೂರಿನಲ್ಲೂ ನನ್ನ ಭಾಗದ ಶೂಟಿಂಗ್‌ ನಡೆಯಲಿದೆ. ಚಿತ್ರತಂಡದವರು ನನ್ನನ್ನು ಎಷ್ಟು ಚೆನ್ನಾಗಿ ನೋಡ್ಕೊಳ್ತಿದ್ದಾರೆ ಅಂದ್ರೆ ಬಾಲಿವುಡ್‌ಗಿಂತ ಹೆಚ್ಚು ಕಂಫರ್ಟ್‌ ಫೀಲ್‌ ಇಲ್ಲೇ ಸಿಗುತ್ತಿದೆ. ಚಂದ್ರು-ಉಪ್ಪಿ ಕಾಂಬಿನೇಶನ್‌ನಲ್ಲಿ ಮುಂದೆಯೂ ಚಿತ್ರ ಮಾಡುವ ಉತ್ಸಾಹ ಇದೆ ಎಂದು ಬಾಲಿವುಡ್‌ ನಟ ನವಾಬ್‌ ಶಾ ಈ ಹಿಂದೆ ಹೇಳಿದ್ದರು. 1947-1986 ನಡುವಿನ ಕಾಲಘಟ್ಟದ ಭೂಗತಲೋಕದ ಅಧ್ಯಾಯವನ್ನು 'ಕಬ್ಜ' ಚಿತ್ರ ತೆರೆದಿಡಲಿದೆ.

Latest Videos
Follow Us:
Download App:
  • android
  • ios