Asianet Suvarna News Asianet Suvarna News

ನವೆಂಬರ್‌ ತಿಂಗಳಲ್ಲಿ ನಿಖಿಲ್ ಕುಮಾರಸ್ವಾಮಿ 'ರೈಡರ್' ರಿಲೀಸ್!

'ಸೀತಾರಾಮ ಕಲ್ಯಾಣ'  ಚಿತ್ರದ ಮೂಲಕ ಲವರ್ ಬಾಯ್​ ಆಗಿ ಸ್ಯಾಂಡಲ್​ವುಡ್​ ಪ್ರೇಕ್ಷಕರನ್ನು ರಂಜಿಸಿದ್ದ ನಿಖಿಲ್ ಕುಮಾರಸ್ವಾಮಿ  'ರೈಡರ್' ಚಿತ್ರದಲ್ಲಿ ಬಾಸ್ಕೆಟ್ ಬಾಲ್ ಪ್ಲೇಯರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Kannada Actor Nikhil Kumaraswamy Rider to hit theaters on November
Author
Bangalore, First Published Oct 21, 2021, 12:26 PM IST
  • Facebook
  • Twitter
  • Whatsapp

ಕನ್ನಡ ಚಿತ್ರರಂಗದ ಯುವರಾಜ, ರಾಜಕಾರಣಿ ನಿಖಿಲ್‌ ಕುಮಾರ್‌ (Nikhil Kumar) ಅಭಿನಯದ ಬಹು ನಿರೀಕ್ಷಿತ ವಿಜಯ್‌ ಕುಮಾರ್‌ ಕೊಂಡ (Vijay Kumar Konda) ನಿರ್ದೇಶನದ 'ರೈಡರ್‌' (Rider) ಚಿತ್ರದ ಹಾಡು ಮತ್ತು ಟೀಸರ್‌ (Teaser) ಬಿಡುಗಡೆ ಇತ್ತೀಚೆಗೆ ಅದ್ದೂರಿಯಾಗಿ ನಡೆಯಿತು. ನಟ ನಿಖಿಲ್‌ ಕುಮಾರ್‌ ಆಪ್ತ ಸುನೀಲ್‌ ಗೌಡ (Sunil Gowda) ಈ ಚಿತ್ರದ ಮೂಲಕ ನಿರ್ಮಾಪಕರಾಗಿದ್ದಾರೆ. ಲಹರಿ ಫಿಲಮ್ಸ್‌ (Lahari Films) ಕೂಡ ನಿರ್ಮಾಣದಲ್ಲಿ ಪಾಲುದಾರಿಕೆ ಹಂಚಿಕೊಂಡಿದೆ. ನವೆಂಬರ್‌ ತಿಂಗಳಲ್ಲಿ ಸಿನಿಮಾ ತೆರೆಗೆ ಬರಲಿದೆ. 

'ಸೀತಾರಾಮ ಕಲ್ಯಾಣ' (Seetharama Kalyana) ನಂತರ ಒಪ್ಪಿಕೊಂಡು ಮಾಡಿರುವ ಸಿನಿಮಾ ಇದು. ವಿಜಯ್‌ ಕುಮಾರ್‌ ಕೊಂಡ ಅದ್ಭುತ ಕತೆಯನ್ನು ಈ ಚಿತ್ರದ ಮೂಲಕ ಹೇಳಿದ್ದಾರೆ. ನಾನು ಮುಂದಿನ ದಿನಗಳಲ್ಲಿ ಹೊಸಬರಿಗೆ ಸಿನಿಮಾ ನಿರ್ಮಿಸುತ್ತಿದ್ದೇನೆ. ಈ ನಿಟ್ಟಿನಲ್ಲಿ ಎನ್‌ಕೆ ಬ್ಯಾನರ್‌ (NK Banner) ಹೆಸರಿನಲ್ಲಿ ನಿರ್ಮಾಣ ಸಂಸ್ಥೆ ಆರಂಭಿಸುತ್ತಿದ್ದೇನೆ  ಎಂದರು ನಿಖಿಲ್‌. 'ಈ ಚಿತ್ರದ ಮೂಲಕ ನನ್ನ ನಿರ್ಮಾಪಕನನ್ನಾಗಿ ಮಾಡಿದ ನಿಖಿಲ್‌ ಕುಮಾರ್‌ ಸೇರಿದಂತೆ ಪ್ರತಿಯೊಬ್ಬರಿಗೂ ಧನ್ಯವಾದಗಳು' ಎಂದರು ಸುನೀಲ್‌ ಗೌಡ. 

'ರೈಡರ್‌' ಡಬ್ಬಿಂಗ್‌ ಮುಗಿಸಿದ ನಿಖಿಲ್‌ ಕುಮಾರಸ್ವಾಮಿ!

'ಸೀತಾರಾಮ ಕಲ್ಯಾಣ'  ಚಿತ್ರದ ಮೂಲಕ ಲವರ್ ಬಾಯ್​ (Lover Boy) ಆಗಿ ಸ್ಯಾಂಡಲ್​ವುಡ್​ ಪ್ರೇಕ್ಷಕರನ್ನು ರಂಜಿಸಿದ್ದ ನಿಖಿಲ್ ಕುಮಾರಸ್ವಾಮಿ  'ರೈಡರ್' ಚಿತ್ರದಲ್ಲಿ ಬಾಸ್ಕೆಟ್ ಬಾಲ್ ಪ್ಲೇಯರ್ (Basketball Player) ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ನಿಖಿಲ್‌ಗೆ ನಾಯಕಿಯಾಗಿ ಯುವ ನಟಿ ಕಾಶ್ಮೀರಿ ಪರ್ದೇಸಿ (Kashmira Pardeshi) ನಟಿಸಿದ್ದು, ಮತ್ತೊಬ್ಬ ನಾಯಕಿಯಾಗಿ ಅನುಷಾ ರೈ (Anusha Rai) ಅಭಿನಯಿಸಿದ್ದಾರೆ.

'ರೈಡರ್'​ ಆ್ಯಕ್ಷನ್​ ಚಿತ್ರವಾಗಿದ್ದು, ಈಗಾಗಲೇ ಚಿತ್ರದ ಟೀಸರ್ (Teaser), ಪೋಸ್ಟರ್ ಲುಕ್‌  (First Look) ಮೂಲಕ ವೀಕ್ಷಕರ ಗಮನ ಸೆಳೆಯುವಲ್ಲಿ ಚಿತ್ರತಂಡ ಯಶಸ್ವಿಯಾಗಿದೆ. ಕೆ.ಎಮ್.ಪ್ರಕಾಶ್ ಸಂಕಲನ, ಶ್ರೀಶ ಕುದುವಳ್ಳಿ ಕ್ಯಾಮೆರಾ ಕೈ ಚಳಕ, ಶರತ್ ಚಕ್ರವರ್ತಿ ಸಂಭಾಷಣೆ, ಭೂಷನ್ ಕೋರಿಯೊಗ್ರಾಫಿ, ಡಾ.ರವಿವರ್ಮ ಸಾಹಸ ಚಿತ್ರಕ್ಕಿದೆ. 

ಗಂಡು ಮಗುವಿಗೆ ತಂದೆಯಾದ ನಿಖಿಲ್ ಕುಮಾರಸ್ವಾಮಿ!

ದತ್ತಣ್ಣ, ಗರುಡ ರಾಮ್, ಚಿಕ್ಕಣ್ಣ, ಶೋಭರಾಜ್, ರಾಜೇಶ್ ನಟರಂಗ, ಶಿವರಾಜ್.ಕೆ.ಆರ್.ಪೇಟೆ, ಬಿಗ್​ ಬಾಸ್​ ವಿನ್ನರ್​ ಮಂಜು ಪಾವಗಡ, ಸಂಪದ ಹುಲಿವಾನ, ನಿಹಾರಿಕ ಸೇರಿದಂತೆ ದೊಡ್ಡ ತಾರಬಳಗ ಚಿತ್ರದಲ್ಲಿದೆ. ಇನ್ನು ಇತ್ತಿಚೆಗಷ್ಟೇ ಚಿತ್ರದ 'ಡವ್ವ ಡವ್ವ' ರೊಮ್ಯಾಂಟಿಕ್ ಹಾಡು ಬಿಡುಗಡೆಯಾಗಿ ಯೂಟ್ಯೂಬ್ ಟ್ರೆಂಡಿಂಗ್‌ನಲ್ಲಿತ್ತು. ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗಿತ ಸಂಯೋಜನೆ ಚಿತ್ರಕ್ಕಿದೆ.

"

Follow Us:
Download App:
  • android
  • ios