ಇದೊಂದು ಆಕಸ್ಮಿಕ ದುರಂತ: ನಟಿ ರಕ್ಷಿತಾ ಪ್ರೇಮ್

ಪುನೀತ್ ನಮ್ಮನ್ನು ಬಿಟ್ಟು ಹೋಗಿದ್ದು ದುರಂತ. ಈಗ ಏನೂ ಹೇಳಲೂ ಆಗ್ತಿಲ್ಲ. ಪುನೀತ್ ನಿಧನ ಹೇಗಾಯ್ತು ಅಂತಾ ನನಗೆ ತಿಳಿಯುತ್ತಿಲ್ಲ. ನಾನು ಕೆಲಸದ ಮೇಲೆ ಹೈದರಾಬಾದ್‌ಗೆ ಹೋಗಿದ್ದೆ. ಟಾಲಿವುಡ್‌ ಡೈರೆಕ್ಟರ್ ಪೂರಿ ಜಗನ್ನಾಥ್ ಕರೆ ಮಾಡಿ ವಿಷಯ ಹೇಳಿದರು. 

Kannada Actor Puneeth Rajkumar No More Actress Rakshita Prem Condolences

ಚಿತ್ರರಂಗದ ನಟಸಾರ್ವಭೌಮ, ನಮ್ಮೆಲ್ಲರ ಪ್ರೀತಿಯ ರಾಜಕುಮಾರ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Puneeth Rajkumar)ಅವರ ಪಾರ್ಥಿವ ಶರೀರವನ್ನು ಕಂಠೀರವ ಸ್ಟೇಡಿಯಂನಲ್ಲಿ ಸಾರ್ವಜನಿಕ ದರ್ಶನಕ್ಕಾಗಿ ಇಡಲಾಗಿದೆ. ಸಹಸ್ರಾರು ಅಭಿಮಾನಿಗಳು ಅಗಲಿದ ಪುನೀತ್ ರಾಜ್ ಕುಮಾರ್ ಅವರ ದರ್ಶನ ಮಾಡುತ್ತಿದ್ದಾರೆ. ನಾನಾ ಊರುಗಳಿಂದ ಬಂದು ಪ್ರೀತಿಯ ನಟ ಅಪ್ಪು ಅಗಲಿಕೆಯನ್ನು ನೋಡಿ ಕಣ್ಣೀರು ಸುರಿಸುತ್ತಿದ್ದಾರೆ. ಕನ್ನಡ ಚಿತ್ರರಂಗದ ತಾರೆಯರು ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಪುನೀತ್ ಅಗಲಿಕೆ ಬಗ್ಗೆ ನೋವನ್ನು ಹೊರಹಾಕುತ್ತಿದ್ದಾರೆ.  

ಪುನೀತ್ ರಾಜ್‌ಕುಮಾರ್ ಅಂತಿಮ ದರ್ಶನ ಪಡೆದ ನಟಿ ರಕ್ಷಿತಾ ಪ್ರೇಮ್ (Rakshita Prem) ತೀವ್ರ ಸಂತಾಪ ವ್ಯಕ್ತಪಡಿಸಿದರು. ಪುನೀತ್ ರಾಜ್‌ಕುಮಾರ್ ನಮ್ಮನ್ನು ಬಿಟ್ಟು ಹೋಗಿದ್ದು ದುರಂತ. ಈಗ ಏನೂ ಹೇಳಲೂ ಆಗ್ತಿಲ್ಲ. ಪುನೀತ್ ನಿಧನ ಹೇಗಾಯ್ತು ಅಂತಾ ನನಗೆ ತಿಳಿಯುತ್ತಿಲ್ಲ. ನಾನು ಕೆಲಸದ ಮೇಲೆ ಹೈದರಾಬಾದ್‌ಗೆ ಹೋಗಿದ್ದೆ. ಟಾಲಿವುಡ್‌ ಡೈರೆಕ್ಟರ್ ಪೂರಿ ಜಗನ್ನಾಥ್ (Puri Jagannadh) ಕರೆ ಮಾಡಿ ವಿಷಯ ಹೇಳಿದರು. ಇದೊಂದು ಆಕಸ್ಮಿಕ ದುರಂತ ಎಂದು ನಟಿ ರಕ್ಷಿತಾ ಪ್ರೇಮ್ ಕಂಬನಿ ಮಿಡಿದಿದ್ದಾರೆ. ಇನ್ನು 2002 ರಲ್ಲಿ ಬಿಡುಗಡೆಯಾದ 'ಅಪ್ಪು' (Appu) ಚಿತ್ರದ ಮೂಲಕ  ರಕ್ಷಿತಾ ಮತ್ತು ಪುನೀತ್ ಒಟ್ಟಾಗಿ ಸ್ಯಾಂಡಲ್‌ವುಡ್‌ನಲ್ಲಿ ನಟಿಸಿದ್ದರು. ಚಿತ್ರವನ್ನು ಪೂರಿ ಜಗನ್ನಾಥ್ ನಿರ್ದೇಶಿಸಿದ್ದರು.

ಅಮೆರಿಕಾದಿಂದ ಬಂದು ಅಪ್ಪನ ​​ ತಲೆ ಸವರಿ ಅಂತಿಮ ದರ್ಶನ ಪಡೆದ ಪುತ್ರಿ ಧೃತಿ

ಪುನೀತ್​ ಅವರ ಅಂತಿಮ ದರ್ಶನ ಪಡೆಯಲು ಬರುತ್ತಿರುವ ಅಭಿಮಾನಿಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವುದರಿಂದ ಅಂತ್ಯಸಂಸ್ಕಾರವನ್ನು ಭಾನುವಾರಕ್ಕೆ ಮುಂದೂಡಲಾಗಿದ್ದು, ನಾಳೆ ಬೆಳಗಿನ ಜಾವದವರೆಗೂ ಪುನೀತ್ ದರ್ಶನ ಮಾಡಲು ಅನುಕೂಲ ಮಾಡಲಾಗುವುದು. ಪವರ್ ಸ್ಟಾರ್ ಪುನೀತ್​ ರಾಜ್​ಕುಮಾರ್ ಅಂತ್ಯ ಸಂಸ್ಕಾರ ಭಾನುವಾರ  ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನೆರವೇರಲಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲಾಗುವುದು.

ತುಂಬಾ ಬೇಜಾರು, ಸಂಕಟ ಆಗುತ್ತಿದೆ: ಕಣ್ಣೀರಾದ ರಚಿತಾ ರಾಮ್

ಇನ್ನು ಪುನೀತ್ ರಾಜ್‌ಕುಮಾರ್ ಅವರು 29 ಚಲನಚಿತ್ರಗಳಲ್ಲಿ ನಾಯಕ ನಟರಾಗಿ ಅಭಿನಯಿಸಿದ್ದಾರೆ. ಬಾಲ್ಯದಲ್ಲಿ ಪುನೀತ್ ಅನೇಕ ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ವಸಂತ ಗೀತ (1980), ಭಾಗ್ಯವಂತ (1981), ಚಲಿಸುವ ಮೋಡಗಳು (1982), ಎರಡು ನಕ್ಷತ್ರಗಳು (1983), ಭಕ್ತ ಪ್ರಹ್ಲಾದ, ಯಾರಿವನು ಮತ್ತು ಬೆಟ್ಟದ ಹೂವು (1985) ಚಿತ್ರಗಳಲ್ಲಿ ಅವರ ಅಭಿನಯವು ಪ್ರಶಂಸೆಗೆ ಪಾತ್ರವಾಯಿತು. ಬೆಟ್ಟದ ಹೂವು ಚಿತ್ರದಲ್ಲಿನ ರಾಮು ಪಾತ್ರಕ್ಕಾಗಿ ಅವರು ಅತ್ಯುತ್ತಮ ಬಾಲ ಕಲಾವಿದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಪಡೆದರು. ಚಲಿಸುವ ಮೋಡಗಳು ಮತ್ತು ಎರಡು ನಕ್ಷತ್ರಗಳು ಚಿತ್ರಕ್ಕಾಗಿ ಕರ್ನಾಟಕ ರಾಜ್ಯ ಅತ್ಯುತ್ತಮ ಬಾಲ ಕಲಾವಿದ ಪ್ರಶಸ್ತಿಯನ್ನು ಪಡೆದಿದ್ದಾರೆ.

"

Latest Videos
Follow Us:
Download App:
  • android
  • ios