ಸ್ಯಾಂಡಲ್‌ವುಡ್‌ ಹಿರಿಯ ನಟ ಹಾಗೂ ನಿರ್ಮಾಪಕ ರಾಘವೇಂದ್ರ ರಾಜ್‌ಕುಮಾರ್ ಎರಡನೇ ಹಂತದ ಲಸಿಕ ಅಭಿಯಾನದಲ್ಲಿ ಕೊರೋನಾ ಲಸಿಕೆ ಪಡೆದಿದ್ದಾರೆ.  ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಲಸಿಕೆ ತೆಗೆದುಕೊಂಡು, ಅಭಿಮಾನಿಗಳಿಗೂ ಲಸಿಕೆ ಹಾಕಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಫಸ್ಟ್ ಡೋಸ್ ಕೊರೋನಾ ವ್ಯಾಕ್ಸಿನ್ ಪಡೆದ ಮೋಹನ್ ಲಾಲ್

ನಟ ಅನಂತ್ ನಾಗ್, ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಕೊರೋನಾ ಲಸಿಕೆ ಪಡೆದ ಬೆನ್ನಲ್ಲೇ ರಾಘವೇಂದ್ರ ರಾಜ್‌ಕುಮಾರ್ ಸಹ ಲಸಿಕೆ ಹಾಕಿಸಿಕೊಂಡಿದ್ದಾರೆ. 'ದೊಡ್ಡವರು ಲಸಿಕೆ ಹಾಕಿಸಿಕೊಳ್ಳಿ ಎಂದು ನಮ್ಮ ಸರಕಾರ ಹೇಳುತ್ತಿದೆ. ಹಾಗಾಗಿ ನಾನೂ ಹಾಕಿಸಿಕೊಂಡೆ. ನೀವೂ ಲಸಿಕೆ ಹಾಕಿಸಿಕೊಳ್ಳಿ,' ಎಂದು ರಾಘಣ್ಣ ಮನವಿ ಮಾಡಿಕೊಂಡಿದ್ದಾರೆ.

"

ಕೆಲವು ದಿನಗಳ ಹಿಂದೆ ರಾಘವೇಂದ್ರ ರಾಜ್‌ಕುಮಾರ್ ಅವರಿಗೆ ಮಲ್ಲೇಶ್ವರಂನಲ್ಲಿ ಸಿನಿಮಾ ಚಿತ್ರೀಕರಣ ಮಾಡುವ ವೇಳೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿತ್ತು. ಎರಡು ದಿನಗಳ ಕಾಲ ಚಿಕಿತ್ಸೆ ಪಡೆದು, ರಾಘವೇಂದ್ರ ರಾಜ್‌ಕುಮಾರ್ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.