ಸುಚೇಂದ್ರ ಪ್ರಸಾದ್ ನಿರ್ದೇಶನದ 'ಪದ್ಮಗಂಧಿ' ಚಿತ್ರದ ಟ್ರೈಲರ್ ಬಿಡುಗಡೆ ಹಿನ್ನೆಲೆಯಲ್ಲಿ, ಮೇ ೧ ರಿಂದ ೪ ರವರೆಗೆ ಬೆಂಗಳೂರಿನ ಸುಚಿತ್ರ ಫಿಲ್ಮ್ ಸೊಸೈಟಿಯಲ್ಲಿ ಚಿತ್ರ-ರಂಗ ಕಲಾ ಉತ್ಸವ ಆಯೋಜನೆಗೊಂಡಿದೆ. ಚಿತ್ರರಂಗ, ಕಿರುತೆರೆ, ರಂಗಭೂಮಿ ಮತ್ತು ಸಾಹಿತ್ಯ ಕ್ಷೇತ್ರದ ಗಣ್ಯರು ಭಾಗವಹಿಸಿ ಚರ್ಚೆ ನಡೆಸಲಿದ್ದಾರೆ. ಕನ್ನಡ, ಸಂಸ್ಕೃತ, ಹಿಂದಿ ಭಾಷೆಗಳಲ್ಲಿ ನಿರ್ಮಾಣಗೊಂಡಿರುವ ಈ ಚಿತ್ರ ಮಕ್ಕಳ ಚಿತ್ರವಾಗಿದ್ದು, ಕಮಲದ ಹೂವಿನ ಕುರಿತ ಕಥಾವಸ್ತುವನ್ನು ಹೊಂದಿದೆ.

ಕನ್ನಡ ಚಿತ್ರರಂಗದಲ್ಲಿ ಸುಚೇಂದ್ರ ಪ್ರಸಾದ್ (Suchendra Prasad) ಅವರಿಗೆ ಸಾಕಷ್ಟು ಖ್ಯಾತಿ ಇದೆ. ಇಲ್ಲಿ ನಟರಾಗಿ, ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ ಸುಚೇಂದ್ರ ಪ್ರಸಾದ್. ಇದೀಗ ಪದ್ಮಗಂಧಿ ಎಂಬ ಕನ್ನಡ, ಸಂಸ್ಕೃತ, ಹಿಂದಿ ಭಾಷೆಯ ಸಿನಿಮಾವನ್ನು ನಿರ್ದೇಶನ ಮಾಡಿರುವ ಅವರ ಪಾಲಿಗೆ ಮೇ 01ರಂದು ಹುಟ್ಟುಹಬ್ಬದ ಸಂಭ್ರಮ. ಆ ನೆಪದಲ್ಲಿಯೇ ಇದೀಗ ನಾಲ್ಕು ದಿನಗಳ ಕಾಲ ಚಿತ್ರ-ರಂಗ ಕಲಾ ಉತ್ಸವ ಸಮಾಗಮ ಕಾರ್ಯಕ್ರಮ ನಡೆಯಲಿದೆ. ಮೇ 01 ರಿಂದ 4ರವರೆಗೆ ನಡೆಯಲಿರುವ ಈ ಕಾರ್ಯಕ್ರಮ, ಬೆಂಗಳೂರಿನ ಸುಚಿತ್ರ ಫಿಲ್ಮ್ ಸೊಸೈಟಿಯಲ್ಲಿ ಆಯೋಜನೆ ಆಗಿದೆ. 

ಈ ಮೂಲಕ ಕನ್ನಡ ಚಿತ್ರರಂಗ, ಕಿರುತೆರೆ, ರಂಗಭೂಮಿ ಮತ್ತು ಸಾಹಿತ್ಯ ವಲಯದ ದಿಗ್ಗಜರು, ಹಿರಿ-ಕಿರಿಯರ ಸಮಾಗಮದೊಂದಿಗೆ ಅನೇಕ ದಿಕ್ಕುಗಳಲ್ಲಿ ಯೋಗ್ಯ ಚರ್ಚೆಗಳು ನಡೆಯಲಿವೆ. ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು ಹಾಗೂ ತೇಜಸ್ವಿನಿ ಅನಂತಕುಮಾರ್ ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಹಿರಿಯ ನಟ ದೊಡ್ಡಣ್ಣ, ಡಾ. ದೀಪಕ್ ಪರಮಶಿವನ್, ಹಿಂದುಸ್ತಾನಿ ಸಂಗೀತಗಾರ ಪ್ರಸನ್ನ ವೈದ್ಯ, ನಟ-ಸಾಹಿತಿ ಲಕ್ಷ್ಮಣ್ ಶಿವಶಂಕರ್, ಮಾನಸಾ ಜೋಶಿ, ಲಹರಿ ವೇಲು, ಸಂಗೀತಾ ಕಟ್ಟಿ, ಡಾ. ಗೌರಿ ಸುಬ್ರಹ್ಮಣ್ಯ, ಹಿರಿಯ ರಂಗಕರ್ಮಿ ಬಸವಲಿಂಗಯ್ಯ, ಸಂಗೀತ ನಿರ್ದೇಶಕ ವಿ.ಮನೋಹರ್, ದಾಕ್ಷಾಯಿಣಿ ಭಟ್ ಮುಂತಾದವರು ಈ ಸಮಾಗಮದಲ್ಲಿ ಪಾಲ್ಗೊಳ್ಳಲಿದ್ದಾರೆ. 

ಅಕ್ಷಯ ತೃತೀಯದಂದೇ 'ಟೈಮ್‌ ಪಾಸ್' ಮಾಡ್ತಿರೋದು ಯಾಕೆ? ಏನ್ ತಮಾಷೆ ಮಾಡ್ತಿಲ್ಲ ತಾನೆ?

ಅವರೆಲ್ಲರೂ ಗಹನವಾದ ವಿಚಾರದ ಬಗ್ಗೆ ಚಿಂತನ ಮಂಥನ ನಡೆಸಲಿದ್ದಾರೆ. ವಿಶೇಷವೆಂದರೆ, ಇದೀಗ ಬಿಡುಗಡೆಗೆ ಸಜ್ಜಾಗಿರುವ ಸುಚೇಂದ್ರ ಪ್ರಸಾದ್ ನಿರ್ದೇಶನದ 'ಪದ್ಮಗಂಧಿ' ಚಿತ್ರದ ಟ್ರೈಲರ್ ಕೂಡಾ ಇದೇ ವೇದಿಕೆಯಲ್ಲಿ ಲೋಕಾರ್ಪಣೆಗೊಳ್ಳಲಿದೆ. ಇದೇ ಸಂದರ್ಭದಲ್ಲಿ ಸಂಸ್ಕೃತ ಭಾಷೆ ಇಂದು ಯಾವ ಹಂತದಲ್ಲಿದೆ ಎಂಬ ವಿಚಾರದ ಸುತ್ತ ಗಂಭೀರವಾದ ಚರ್ಚೆಗಳು ನಡೆಯಲಿವೆ. 

ಸಂಸ್ಕೃತದ ಅನೇಕ ವಿದ್ವಾಂಸರು ಅದರಲ್ಲಿ ಭಾಗಿಯಾಗಲಿದ್ದಾರೆ. ಮಲ್ಲೇಪುರಂ ವೆಂಕಟೇಶ್, ಪ್ರೊ.ಎಸ್.ಆರ್ ಲೀಲಾ, ಡಾ.ಗಣಪತಿ ಹೆಗಡೆ, ಅರ್ಜುನ್ ಭಾರದ್ವಾಜ್, ವಿಜಯ ಸಿಂಹ, ರೋಹಿತ್ ಚಕ್ರತೀರ್ಥ ಮುಂತಾದವರೂ ಪಾಲ್ಗೊಳ್ಳಲಿದ್ದಾರೆ. ಇನ್ನುಳಿದಂತೆ ಸಿನಿಮಾ ಮತ್ತು ಸಾಹಿತ್ಯ ಲೋಕದ ದಿಗ್ಗಜರ ಸಮಾಗಮವೂ ಸಂಭವಿಸಲಿದೆ. ಪಿಇಎಸ್, ಬಿಎನ್‌ಎಂ ಐಟಿ, ಎಪಿಎಸ್, ಬಿಎಂಎಸ್, ವಿಜಯ ಕಾಲೇಜುಗಳ ವಿದ್ಯಾರ್ಥಿಗಳೂ ಈ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ..

ಮಂತ್ರಾಲಯದ ಗರ್ಭಗುಡಿಯಲ್ಲಿ ಮಲಗಿದ್ರು ಡಾ ರಾಜ್‌ಕುಮಾರ್?.. ಆ ಬಳಿಕ ಏನಾಯ್ತು?

ಒಂದು ಹೊಸ ಸಿನಿಮಾ ತೆರೆಗೆ ಬರುತ್ತಿದೆ ಎಂಬ ಸುಳಿವು ಸಿಕ್ಕಾ ತಕ್ಷಣವೇ ಅದರಲ್ಲಿ ಅಡಕವಾಗಿರಬಹುದಾದ ಕಥೆಯ ಬಗ್ಗೆ ಕುತೂಹಲವೊಂದು ಮೂಡಲು ಆರಂಭಿಸುತ್ತದೆ. ಸಾಮಾನ್ಯವಾಗಿ, ಇಂಥಾ ಕಲ್ಪನೆಗಳೆಲ್ಲವೂ ಮಾಮೂಲು ಶೈಲಿಯ ಬಿಂದುವಿನಲ್ಲಿಯೇ ಗಿರಕಿ ಹೊಡೆಯುತ್ತವೆ. ಆದರೆ, ನಮ್ಮೆಲ್ಲರ ಪಾಲಿಗೆ ಚಿರಪರಿಚಿತವಾಗಿರುವ, ದೈವೀಕ ಗಂಧ ಮೆತ್ತಿಕೊಂಡಿರುವ ಕಮಲದ ಹೂವಿನ ಬಗ್ಗೆಯೇ ಒಂದು ಸಿನಿಮಾ ರೂಪುಗೊಳ್ಳುತ್ತದೆ ಎಂದರೆ ಸಹಜವಾಗಿಯೇ ಅಚ್ಚರಿ ಮೂಡಿಕೊಳ್ಳುತ್ತೆ. ಅಂಥಾದ್ದೊಂದು ಕುತೂಹಲ ತಾನೇತಾನಾಗಿ ಸೃಷ್ಟಿಯಾಗಿರುವುದು 'ಪದ್ಮಗಂಧಿ' ಎಂಬ ಸಿನಿಮಾದ ಬಗ್ಗೆ! 

ಅದರಲ್ಲೂ ಈ ಸಿನಿಮಾವನ್ನು ಮಾಡುತ್ತಿರುವುದು ಕನ್ನಡದ ಅಪ್ಪಟ ಅಭಿಮಾನಿ ಸುಚೇಂದ್ರ ಪ್ರಸಾದ್ ಅವರು! ಕನ್ನಡ, ಸಂಸ್ಕೃತ ಮತ್ತು ಹಿಂದಿ ಭಾಷೆಗಳಲ್ಲಿ ರೂಪುಗೊಳ್ಳುತ್ತಿರುವ ಈ ಚಿತ್ರವನ್ನು ಸುಚೇಂದ್ರ ಪ್ರಸಾದ್ ನಿರ್ದೇಶನ ಮಾಡುತ್ತಿದ್ದಾರೆ. ಮಾಜಿ ಎಂಎಲ್‌ಸಿ, ಪ್ರಸಿದ್ಧ ಅಂಕಣಕಾರ್ತಿ, ಸಂಸ್ಕೃತದ ಭೂಮಿಕೆಯಲ್ಲಿ ನಾನಾ ದಿಕ್ಕಿನ ಅಧ್ಯಯನ, ಪಾಂಡಿತ್ಯದ ಮೂಲಕ ಹೆಸರಾಗಿರುವ ಎಸ್.ಆರ್ ಲೀಲಾ ಈ ಚಿತ್ರಕ್ಕೆ ಕಥೆ ಸಿದ್ಧಪಡಿಸಿ ನಿರ್ಮಾಪಕಿಯಾಗಿಯೂ ಜೊತೆಯಾಗಿದ್ದಾರೆ. 

ಹೊಸ ಆಟ ಶುರು ಮಾಡಿದ ಚಕ್ರವರ್ತಿ ಚಂದ್ರಚೂಡ್; ಜೊತೆಯಾಗಿದ್ದು ರಾಜವರ್ಧನ್!

ನಮ್ಮಲ್ಲಿ ದೈವೀಕ ಅನುಭೂತಿ ಸ್ಫುರಿಸುವ ಕಮಲ ಪುಷ್ಪದ ಬಗ್ಗೆ ಆಳವಾಗಿ ಅರಿವಿನ ಪರಿಧಿಯನ್ನು ವಿಸ್ತರಿಸಿಕೊಳ್ಳುತ್ತಾ ಸಾಗಿದ್ದ ಲೀಲಾ ಅವರ ಪಾಲಿಗೆ, ಅದರ ಅಗಾಧತೆ ಮೊಗೆದರೂ ಮುಗಿಯದ ಅಕ್ಷಯ ಪಾತ್ರೆಯಂತೆ ಭಾಸವಾಗಲಾರಂಭಿಸಿತ್ತು. ಕಡೆಗೂ ಕಮಲ ಪುಷ್ಪದ ಬಗ್ಗೆ ನಿರಂತರವಾಗಿ ಆರೇಳು ವರ್ಷ ಅಧ್ಯಯನ ನಡೆಸಿದ್ದ ಅವರು ಕಡೆಗೂ ಅಪರೂಪದ ಕಥೆಯೊಂದನ್ನು ಸಿದ್ಧಪಡಿಸಿ, ನಂತರ ಸುಚೇಂದ್ರ ಪ್ರಸಾದ್ ನಿರ್ದೇಶನದ ಜವಾಬ್ದಾರಿ ವಹಿಸಿಕೊಂಡಿದ್ದರು. 

ಸಸ್ಯ ಶಾಸ್ತ್ರದ ಪ್ರಕಾರ, ಏಷ್ಯಾ ಖಂಡದ ದೇಸೀ ಪುಷ್ಪವಾಗಿರುವ ಕಮಲ, ಪುರಾಣ ಕಾಲದಿಂದಲೂ ಶ್ರೇಷ್ಠ ಪುಷ್ಪವಾಗಿ ಘನತೆ ಪಡೆದುಕೊಂಡಿದೆ. ಪ್ರಾಚೀನ ಕಾಲದಿಂದ ಆರಂಭವಾಗಿ ಅರ್ವಾಚೀನ ಕಾಲದವರೆಗೂ ಅದೇ ಪ್ರಭೆಯನ್ನು ಉಳಿಸಿಕೊಂಡಿರುವ ಕಮಲ ವಿಶಾಲವಾದ ಹರವುಳ್ಳ ಅಪರೂಪದ ಪುಷ್ಪ. ಕೆದಕುತ್ತಾ ಹೋದರೆ ಈಜಿಪ್ಟ್ ನಾಗರೀಕತೆಯವರೆಗೂ ಕೂಡಾ ಇದರ ಪ್ರಭಾವಳಿ ಹಬ್ಬಿಕೊಂಡಿರುವ ಅಚ್ಚರಿಯೊಂದು ಎದುರಾಗುತ್ತದ. 

ಸಿನಿಮಾವನ್ನೇ ನೋಡದ ಆಂಧ್ರದ ಅಭಿಮಾನಿಯೊಬ್ಬ ಪುನೀತ್ ಹೆಸರಲ್ಲಿ ಮಾಡ್ತಿರೋದೇನು?

ಸಾವಿರಾರು ವರ್ಷದ ಹಿಂದಿನ ಬೀಜವನ್ನು ಇಂದು ಬಿತ್ತಿದರೂ ಸಲೀಸಾಗಿ ಚಿಗುರೊಡೆದು, ಗಿಡವಾಗಿ, ಹೂವಾಗಿ ನಗುವ ಶಕ್ತಿ ಈ ಜಗತ್ತಿನಲ್ಲಿ ಯಾವುದಾದರೂ ಪುಷ್ಪಕ್ಕಿದೆ ಎಂದರೆ ಅದು ಕಮಲಕ್ಕೆ ಮಾತ್ರ. ಸಮರ ಕಲೆಗಳಲ್ಲಿಯೂ ಈ ಹೂವಿನ ಐತಿಹ್ಯವಿದೆ. ಮಹಾಭಾರತದಲ್ಲಿ ಘಟಿಸುವ ಯುದ್ಧದಲ್ಲಿ ನಾನಾ ವ್ಯೂಹಗಳು ರಚನೆಯಾದದ್ದು ಗೊತ್ತೇ ಇದೆ. ಚಕ್ರವ್ಯೂಹ, ಗರುಡ ವ್ಯೂಹದಂಥವುಗಳು ನಮ್ಮೆಲ್ಲರಿಗೆ ಪರಿಚಿತ. ವಿಶೇಷವೆಂದರೆ, ಅದರಲ್ಲಿ ಪದ್ಮವ್ಯೂಹವೂ ಸೇರಿಕೊಂಡಿದೆ.

ಪ್ರಾಧ್ಯಾಪಕಿಯಾಗಿ, ಲೇಖಕಿಯಾಗಿ, ಸಂಶೋಧಕಿಯಾಗಿ ಸದಾ ಹೊಸ ಅರಿವು ಸೃಷ್ಟಿಯತ್ತ ತುಡಿಯುವ ಮನಃಸ್ಥಿತಿ ಹೊಂದಿರುವ ಎಸ್.ಆರ್ ಲೀಲಾ ಸಿನಿಮಾ ರಂಗಕ್ಕೇನು ಅಪರಿಚಿತರಲ್ಲ. ಅಂಥಾ ಅಗಾಧ ತಿಳಿವಳಿಕೆ, ಭಿನ್ನ ಗ್ರಹಿಕೆಗಳ ಭೂಮಿಕೆಯಲ್ಲಿಯೇ ಅವರು ಪದ್ಮಗಂಧಿಯ ಕಥನವನನು ಕಟ್ಟಿಕೊಟ್ಟಿದ್ದಾರೆ. ಸುಚೇಂದ್ರ ಪ್ರಸಾದ್ ಸಮರ್ಥ ಸಾರಥ್ಯದಲ್ಲಿ, ಪ್ರತಿಭಾನ್ವಿತರ ತಂಡದ ಮೂಲಕ ಪದ್ಮಗಂಧಿ ಅಂತಿಮ ಘಟ್ಟ ತಲುಪಿಕೊಂಡಿದೆ. 

ಉಳಿದ ಒಂದಷ್ಟು ಕೆಲಸ ಕಾರ್ಯಗಳನ್ನು ಮುಗಿಸಿಕೊಂಡು ಪದ್ಮಗಂಧಿಯ ಬಗ್ಗೆ ಮತ್ತೊಂದಷ್ಟು ಕೌತುಕದ ವಿಚಾರಗಳನ್ನು ಚಿತ್ರತಂಡ ಪ್ರೇಕ್ಷಕರ ಮುಂದೆ ತೆರೆದಿಡಲಿದೆ. ಇದೇ ಮೇ ತಿಂಗಳ ನಂತರ ಕನ್ನಡ, ಸಂಸ್ಕೃತ ಮತ್ತು ಹಿಂದಿ ಭಾಷೆಗಳಲ್ಲಿ ತಯಾರಾಗಿರುವ ಪದ್ಮಗಂಧಿ ಬಿಡುಗಡೆ ದಿನಾಂಕ ಘೋಷಣೆಯಾಗಲಿದೆ. ಈ ಚಿತ್ರದ ಬಗ್ಗೆ ಬಹಳಷ್ಟು ನಿರೀಕ್ಷೆ ಮನೆಮಾಡಿದೆ.

ಬಾಹುಬಲಿ ನಟಿ ಜೊತೆಗೂ ತೆರೆ ಹಂಚಿಕೊಂಡಿದ್ದ ಅಪ್ಪು; ಸರ್‌ಪ್ರೈಸ್‌ ಆದ್ರೂ ಸತ್ಯ ಕಣ್ರೀ!

ಅಂದಹಾಗೆ, ಈ ಸಿನಿಮಾ ಮಕ್ಕಳ ಚಿತ್ರದ ಆವರಣದಲ್ಲಿ ಅಣಿಗೊಳ್ಳುತ್ತಿದೆ. ಗುರುಕುಲದ ಹಿನ್ನೆಲೆಯಿಂದ ಗರಿಬಿಚ್ಚಿಕೊಳ್ಳುವ ಪದ್ಮಗಂಧಿ ಎಸ್.ಆರ್ ಲೀಲಾ ಅವರ ಕನಸಿನ ಕೂಸು. ಪರಿಕಲ್ಪನೆ, ನಿರ್ಮಾಣ ಡಾ. ಎಸ್.ಆರ್ ಲೀಲಾ, ಚಿತ್ರಕಥೆ-ಸಂಭಾಷಣೆ-ನಿರ್ದೇಶನ ಕ. ಸುಚೇಂದ್ರ ಪ್ರಸಾದ, ಡಾ. ದೀಪಕ್ ಪರಮಶಿವನ್ ಸಂಗೀತ, ಎನ್. ನಾಗೇಶ್ ನಾರಾಯಣಪ್ಪ ಸಂಕಲನ, ಮನು ಯಾಪ್ಲಾರ್ ಮತ್ತು ನಾಗರಾಜ್ ಅದ್ವಾನಿ ಛಾಯಾಗ್ರಹಣವಿರುವ ಈ ಚಿತ್ರ ಮಹಾಪದ್ಮ, ಮೃತ್ಯುಂಜಯ ಶಾಸ್ತ್ರಿ , ಪಂಡಿತ ಪ್ರಸನ್ನ ವೈದ್ಯ, ಡಾ. ದೀಪಕ್ ಪರಮಶಿವನ್, ಹೇಮಂತ ಕುಮಾರ ಜಿ, ಪರಿಪೂರ್ಣ, ಮುಂತಾದವರ ತಾರಾಗಣದೊಂದಿಗೆ ಕಳೆಗಟ್ಟಿಕೊಂಡಿದೆ.