Asianet Suvarna News Asianet Suvarna News

ನನ್ನ ದಾರಿಗೆ ಏನೇ ಎದುರಾದರೂ ಹೆದರುವುದಿಲ್ಲ; ಯುವರಾಜ್‌ಕುಮಾರ್‌ ಆರೋಪಕ್ಕೆ ತಿರುಗಿಬಿದ್ದ ಶ್ರೀದೇವಿ, ಪೋಸ್ಟ್‌ ವೈರಲ್!

ಬೆಂಗಳೂರಿನಲ್ಲಿದ್ದ ಶ್ರೀದೇವಿ ಬೈರಪ್ಪ.  ಕಳೆದ 15 ದಿನಗಳಲ್ಲಿ ಆದ ಬೆಳವಣಿಗೆಗಳನ್ನು ಸಾಮಾಜಿಕ ಜಾಲತಾಣದ ಮೂಲಕ ಜನರಿಗೆ ತಿಳಿಸಿದ ಸುಂದರಿ..... 

Kannada actor Yuva rajkumar wife Sridevi byrappa returns to America clarification post viral vcs
Author
First Published Jul 4, 2024, 9:22 AM IST

ನಟ ಯುವ ರಾಜ್‌ಕುಮಾರ್ ಮತ್ತು ಪತ್ನಿ ಶ್ರೀದೇವಿ ಬೈರಪ್ಪ ವೈಯಕ್ತಿಕ ವಿಚಾರ ರಸ್ತೆಗೆ ಬಂದು ನಿಂತಿದೆ. ಹೆಂತಿಯ ಮೇಲೆ ಗಂಡನ ಆಪಾದನೆ, ಗಂಡ ಮೇಲೆ ಹೆಂಡತಿಯ ಆಪಾದನೆ ಇದು ಆಗಿದ್ದು ಖ್ಯಾತ ನಟಿ ಎಂಟ್ರಿ ಕೊಟ್ಟ ಮೇಲೆ. ವಿದೇಶದಲ್ಲಿ ಓದುತ್ತಿರುವ ಶ್ರೀದೇವಿ ಬೈರಪ್ಪ ಕೆಲವು ದಿನಗಳ ಕಾಲ ಬೆಂಗಳೂರಿನಲ್ಲಿ ಇದ್ದರು. ಇಲ್ಲಿದ್ದಾಗ ಏನೆಲ್ಲಾ ಆಯ್ತು ಎಂದು ಪೋಸ್ಟ್‌ ಮೂಲಕ ಹಂಚಿಕೊಂಡಿದ್ದಾರೆ. 

ಶ್ರೀದೇವಿ ಪೋಸ್ಟ್‌:

'ಕಳೆದ 15 ದಿನದಿಂದ ನಾನು ಕರ್ನಾಟಕದಲ್ಲಿ ನನ್ನ ಕುಟುಂಬದ ಜೊತೆ ಇದ್ದಾಗ, ನನ್ನ ಖಾಸಗಿ ಬದುಕನ್ನು ಗೌರವಿಸಿದ ನನ್ನ ಘನತೆಯನ್ನು ಕಾಪಾಡುವಲ್ಲಿ ಅತ್ಯಂತ ಸೂಕ್ಷ್ಮ ಮತ್ತು ಜವಾಬ್ದಾರಿಯುತ ನಡೆ ತೋರಿದ ಮಾಧ್ಯಮದ ಪ್ರತಿಯೊಬ್ಬರಿಗೂ ನಾನು ಪ್ರಾಮಾಣಿಕವಾಗಿ ನನ್ನ ಹೃದಾಯಾಂತರಾಳದಿಂದ ಧನ್ಯವಾದ ಹೇಳಲು ಬಯಸುತ್ತೇನೆ.

ಮದ್ವೆಯಲ್ಲಿ ಖುಷಿಯಾಗಿರುವ ಶ್ರೀದೇವಿ ಫೋಟೋ ವೈರಲ್; ನಗುನೇ ಕಿತ್ಕೊಂಡು ಬಿಟ್ರು ಎಂದು ನೆಟ್ಟಿಗರು ಗರಂ

ಕಳೆದ ದಶಕಗಳಿಂದ ನನ್ನ ಜೊತೆಯಾಗಿದ್ದ ನನ್ನ ಸ್ನೇಹಿತರ ಬಳಗ, ಕೆಲವು ದಿನಗಳ ಹಿಂದೆ ಸುಳ್ಳಿನ ಸರಮಾಲೆಗೆ ಬಲಿಯಾದದ್ದು ತೀತ ದುರದೃಷ್ಟಕರ. ಆದರೂ ಸಹ ನಿಮ್ಮ ತಾಳ್ಮೆಗೆ ಸತ್ಯದ ಪರ ಧೃತಿಗೆಡದೆ ನಿಲ್ಲುವ ನಿಮ್ಮ ಹಾಗೂ ನಿಮ್ಮ ಕುಟುಂಬದ ಸ್ಥೈರ್ಯಕ್ಕೆ ಸಹಕಾರಕ್ಕೆ ನಾನು ಆಭಾರಿಯಾಗಿದ್ದೇನೆ. ಈ ವಿಚಾರದಲ್ಲಿ ನಿಮಗಾದ ನೋವಿಗೆ ನಾನು ವಿನಮ್ರತೆಯಿಂದ ಕ್ಷೆಮೆಯಾಚಿಸುತ್ತೇನೆ. ಎಲ್ಲರಿಗೂ ನಿಮ್ಮಂಥ ಸಹೃದಯಿ ಸ್ನೇಹ ಬಳಗ ಸಿಗುವ ಅದೃಷ್ಟ ಸಿಗಲಿ ಎಂದು ಹಾರೈಸುತ್ತೇನೆ.

ಯುವ ರಾಜ್‌ಕುಮಾರ್ ಅಸ್ತಿ ಹಣ ಏನೂ ಬೇಡ, ನಟಿಯ ಜೊತೆ ಸಿಕ್ಕಿಬಿದ್ದ ಸಾಕ್ಷಿ ಇದೆ: ಶ್ರೀದೇವಿ ಲಾಯರ್

ಕಳೆದ ಏಳು ತಿಂಗಳುಗಳ ತ್ರೀವ ಒತ್ತಡ ಮತ್ತು ಆಘಾತದಿಂದ ಕೂಡಿದ್ದವು. ನನ್ನೊಂದಿಗೆ ಶಕ್ತಿಯಾಗಿ ನಿಂತ ನನ್ನ ಕುಟುಂಬ, ಸ್ನೇಹಿತರು, ಚಲನಚಿತ್ರರಂಗದ ಬಂಧುಗಳು, ಅನ್ಯಾಯದ ವಿರುದ್ಧ ದನಿಯೆತ್ತಿ ನನ್ನ ಪತ ನಿಂತ ಪ್ರತಿಯೊಬ್ಬರಿಗೂ ವಿಶೇಷವಾಗಿ ನನ್ನೊಂದಿಗೆ ದುಃಖಿಸಿ ಸಾಂತ್ವಾನ ಹೇಳಿದ ನನ್ನ ವಿದ್ಯಾರ್ಥಿಗಳಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ನನ್ನ ಶಕ್ತಿಯನ್ನು ಮರಳಿ ಪಡೆಯಲು ಮತ್ತು ನ್ಯಾಯದ ಪರ ಹೋರಾಡಲು ನೀವೆಲ್ಲರೂ ನನಗೆ ಸಹಾಯ ಮಾಡಿದ್ದೀರಿ. ನಿಮ್ಮ ಪ್ರೀತಿ, ದಯೆಯ ಋಣ ತೀರಿಸುವ ಅವಕಾಶ ನನಗೆ ಸಿಗಲಿ ಎಂದು ನಾನು ಆ ದೇವರಲ್ಲಿ ಪಾರ್ಥಿಸುತ್ತೇನೆ.

ಸತ್ಯ ಮತ್ತು ನ್ಯಾಯ ಮೇಲುಗೈ ಸಾಧಿಸುತ್ತದೆ ಎಂದು ನಾನು ನಂಬಿದ್ದೇನೆ ಹಾಗೂ ಅದಕ್ಕಾಗಿ ಹೋರಾಡುತ್ತೇನೆ ಎಂದು ನಾನು ಪುನರುಚ್ಚರಿಸುತ್ತೇನೆ. ನನ್ನ ಮೇಲೆ ಮಾಡಿರುವ ಪ್ರತಿಯಿಂದು ಸುಳ್ಳು ಅರೋಪದಿಂದ ಮುಕ್ತಳಾಗುವವರೆಗೆ ನನ್ನ ದಾರಿಗೆ ಏನೇ ಎದುರಾದರೂ ಹೆದರುವುದಿಲ್ಲ.

ಹಾರ್ವರ್ಡ್‌ನಲ್ಲಿ ನಾನೊಂದು ಶೈಕ್ಷಣಿಕ ಯೋಜನೆಯನ್ನು ಶುರು ಮಾಡಿದ್ದು, ಆ ಕಾರ್ಯಕವನ್ನು ಮುಂದುವರೆಸಲು ನಾನು ಅಮೆರಿಕಾಗೆ ಹಿಂತಿರುಗುತ್ತಿದ್ದೇನೆ. ಈ ಸಮಯವು ನನಗೆ ಇನ್ನಷ್ಟು ಕಲಿಯಲು ಬೆಳೆಯಲು ಮತ್ತು ಎಲ್ಲಾ ಆಘಾತಗಳಿಂದ ಗುಣಮುಖಳಾಗಲು ಸಹಾಯ ಮಾಡುತ್ತದೆ ಎಂದು ನಾನು ನಂಬಿದ್ದೇನೆ. ಸರಿಯಾದ ಸಮಯ ಬಂದಾಗ ನಾನು ಹಿಂದಿರುತ್ತೇನೆ ಮತ್ತು ಇಲ್ಲಿನ ಕೆಲಸಗಳನ್ನು ಮುಂದುವರಿಸುತ್ತೇನೆ. 

ದೇವರ ಆಶೀರ್ವಾದ ಸದಾ ಎಲ್ಲರ ಮೇಲೆ ಇರಲಿ

Kannada actor Yuva rajkumar wife Sridevi byrappa returns to America clarification post viral vcs

Latest Videos
Follow Us:
Download App:
  • android
  • ios