Asianet Suvarna News Asianet Suvarna News

ಹನಿಟ್ರ್ಯಾಪ್ ಆರೋಪ; ಸ್ಯಾಂಡಲ್‌ವುಡ್‌ ನಟ ಯುವ ಅರೆಸ್ಟ್

ಉದ್ಯಮಿಗೆ ಹನಿಟ್ರ್ಯಾಪ್ ಮಾಡಿದ ಆರೋಪದ ಮೇರೆಗೆ ಉದಯೋನ್ಮುಖ ನಟನನ್ನು ಅರೆಸ್ಟ್ ಮಾಡಲಾಗಿದೆ. ಬಂಧಿತ ಆರೋಪಿ ಜೆಪಿ ನಗರ ನಿವಾಸಿ ಯುವರಾಜ್ ಅಲಿಯಾಸ್ ಯುವ. ಪೊಲೀಸರ ಅತಿಥಿಯಾಗಿರುವ ಈ ಆರೋಪಿ ಮಿಸ್ಟರ್ ಭೀಮರಾವ್ ಎಂಬ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು ಎನ್ನಲಾಗಿದೆ. 

Kannada Actor Yuvraj arrested for honeytrap case sgk
Author
Bengaluru, First Published Aug 13, 2022, 10:35 AM IST

ಉದ್ಯಮಿಗೆ ಹನಿಟ್ರ್ಯಾಪ್ ಮಾಡಿದ ಆರೋಪದ ಮೇರೆಗೆ ಉದಯೋನ್ಮುಖ ನಟನನ್ನು ಅರೆಸ್ಟ್ ಮಾಡಲಾಗಿದೆ. ಬಂಧಿತ ಆರೋಪಿ ಜೆಪಿ ನಗರ ನಿವಾಸಿ ಯುವರಾಜ್ ಅಲಿಯಾಸ್ ಯುವ. ಪೊಲೀಸರ ಅತಿಥಿಯಾಗಿರುವ ಈ ಆರೋಪಿ ಮಿಸ್ಟರ್ ಭೀಮರಾವ್ ಎಂಬ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು ಎನ್ನಲಾಗಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಮೂಲದ ಉದ್ಯಮಿಗೆ ಈ ನಟ ಇಬ್ಬರು ಯುವತಿಯರ ಹೆಸರು ಬಳಸಿ ಚಾಟ್ ಮಾಡಿದ್ದ ಎನ್ನಲಾಗುತ್ತಿದೆ. ಇತ್ತೀಚಿಗೆ ಉದ್ಯಮಿಗೆ ಪರಿಚಯ ಆಗಿದ್ದ ಇಬ್ಬರು ಯುವತಿಯರ ಹೆಸರು ಬಳಸಿ ಚಾಟ್ ಮಾಡಿದ್ದ. ಬಳಿಕ ಉದ್ಯಮಿಯನ್ನು ಭೇಟಿಯಾಗಿ ತಾನು ಕ್ರೈಂ ಪೊಲೀಸ್ ಎಂದು ಸುಳ್ಳು ಹೇಳಿ ಹೆದರಿಸಿದ್ದ. ಇಬ್ಬರು ಯುವತಿಯರ ಜೊತೆಗೆ ಅಶ್ಲೀಲ ಮೆಸೇಜ್ ಮಾಡಿದ್ದ ಪರಿಣಾಮ ಕೇಸ್ ದಾಖಲಾಗಿದೆ ಎಂದು ಉದ್ಯಮಿಗೆ ಹೆದರಿಸಿದ್ದ.

ಅಷ್ಟೆಯಲ್ಲದೆ ಈ ಕೇಸನ್ನು ಇಲ್ಲಿದೆ ನಿಲ್ಲಿಸುತ್ತೇವೆ ಎಂದು ಹೇಳಿ ಹಣ ವಸೂಲಿಗೆ ಮುಂದಾಗಿದ್ದ ಎನ್ನುವ ಆರೋಪ ಕೇಳಿಬಂದಿದೆ. ಯುವರಾಜ್ ಬೆದರಿಕೆಗೆ ಹೆದರಿ ಉದ್ಯಮಿ ಮೊದಲು ಐವತ್ತು ಸಾವಿರ, ನಂತರ ಮೂರು ಲಕ್ಷ ರೂಪಾಯಿ ಹೀಗೆ ಹಂತ ಹಂತವಾಗಿ ಒಟ್ಟು ಹದಿನಾಲ್ಕು ಲಕ್ಷಕ್ಕೂ ಹೆಚ್ಚಿನ ಹಣ ಕೊಟ್ಟಿದ್ದಾರೆ. ಉದ್ಯಮಿಗೆ ಅನುಮಾನ ಬಂದ ನಂತರ ಹಲಸೂರು ಗೇಟ್ ಠಾಣೆಗೆ ದೂರು ನೀಡಿದ್ದರು. ದೂರಿನನ್ವಯ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ. 

ಮಿಸ್ಟರ್ ಭೀಮರಾವ್ ಸಿನಿಮಾ ಬಗ್ಗೆ, 

ಇತ್ತೀಚಿಗಷ್ಟೆ ಮಿಸ್ಟರ್ ಭೀಮರಾವ್ ಸಿನಿಮಾದ ಟೈಟಲ್ ಪೋಸ್ಟರ್ ರಿಲೀಸ್ ಮಾಡಲಾಗಿತ್ತು. 'ಯು ಟರ್ನ್ 2' ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಚಂದ್ರು ಓಬಯ್ಯ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಕನ್ನಡ, ತೆಲುಗು, ತಮಿಳು ಸೇರಿ 4 ಭಾಷೆಗಳಲ್ಲಿ ಈ ಸಿನಿಮಾ ನಿರ್ಮಾಣಮಾಡಲು ಪ್ಲಾನ್ ಮಾಡಲಾಗಿತ್ತು. ಇತ್ತೀಚಿಗಷ್ಟೆ ರಿಲೀಸ್ ಆದ ಸಿನಿಮಾದ ಟೈಟಲ್ ಪೋಸ್ಟರ್ ಅನ್ನು ಖ್ಯಾತ ನಟ ಆ ದಿನಗಳು ಚೇತನ್ ರಿಲೀಸ್ ಮಾಡಿ ಸಿನಿಮಾತಂಡಕ್ಕೆ ಶುಭಹಾರೈಸಿದ್ದರು. ಈ ಸಿನಿಮಾದಲ್ಲಿ ಸದ್ಯ ಹನಿಟ್ರ್ಯಾಪ್ ಪ್ರಕರಣದಲ್ಲಿ ಆರೋಪಿಯಾಗಿರುವ ಯುವ  ಮತ್ತು ದುಷ್ಯಂತ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. 

Follow Us:
Download App:
  • android
  • ios