Asianet Suvarna News Asianet Suvarna News

ಕನ್ನಡ ಚಿತ್ರರಂಗಕ್ಕೆ ಆಘಾತ, ಹಿರಿಯ ನಟಿ ಲೀಲಾವತಿ ನಿಧನ!

ಕನ್ನಡದ ಹಿರಿಯ ನಟಿ ಲೀಲಾವತಿ ನಿಧನ ಹೊಂದಿದ್ದಾರೆ. ಬಹುಭಾಷಾ ನಟಿಯಾಗಿದ್ದ ಲೀಲಾವತಿಯವರು ಕನ್ನಡ, ತಮಿಳು, ತೆಲುಗು, ಮಲಯಾಳಂ ಹಾಗೂ  ತುಳು ಚಿತ್ರಗಳಲ್ಲಿ ನಟಿಸಿದ್ದರು. ಬರೋಬ್ಬರಿ 5 ಭಾಷೆಗಳಲ್ಲಿ ನಟಿ ಲೀಲಾವತಿ ನಟಿಸಿ ಎಲ್ಲರ ಮೆಚ್ಚುಗೆ ಗಳಿಸಿದ್ದರು.

Kannada actress Leelavathi Passes away srb
Author
First Published Dec 8, 2023, 6:04 PM IST

ಬೆಂಗಳೂರು(ಡಿ.08) ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗ ಹಿರಿಯ ನಟಿ ಲೀಲಾವತಿ ಇಂದು ನಿಧನರಾಗಿದ್ದಾರೆ. ಲೀಲಾವತಿ ಆರೋಗ್ಯ ಕ್ಷೀಣಿಸುತ್ತಿದ್ದಂತೆ ಚಿತ್ರರಂಗದ ಗಣ್ಯರು, ಸಿಎಂ ಸಿದ್ದರಾಮಯ್ಯ ಸೇರಿ ಹಲವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಆದರೆ ಇಂದು ಆರೋಗ್ಯ ಮತ್ತಷ್ಟು ಕ್ಷೀಣಿಸಿತ್ತು. ಹೀಗಾಗಿ ನೆಲಮಂಗಲ ಆಸ್ಪತ್ರೆ ದಾಖಲಿಸಲಾಗಿತ್ತು. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಲೀಲಾವತಿ ಇಂದು,  08 ಡಿಸೆಂಬರ್ 2023ರಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

ಕನ್ನಡ ಚಿತ್ರರಂಗದ ಹಿರಿಯ ನಟಿ, ಇತ್ತೀಚೆಗಷ್ಟೇ ಜೀವಮಾನದ ಸಾಧನೆಗಾಗಿ ನಂದಿ ಪ್ರಶಸ್ತಿಗೆ ಭಾಜನರಾಗಿದ್ದ ನಟಿ ಲೀಲಾವತಿ ಅವರು ಇಂದು ನಮ್ಮನ್ನು ಅಗಲಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಇತ್ತೀಚೆಗೆ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ. ಇಂದು ನಟಿ ಲೀಲಾವತಿಯವರು ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಹಿರಿಯ ನಟಿ ಲೀಲಾವತಿ ಅವರು ಐದು ಭಾಷೆಗಳಲ್ಲಿ ನಟಿಸಿ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಇಂದು ಇಹಲೋಕ ತ್ಯಜಿಸಿರುವ ನಟಿ ಲೀಲಾವತಿ ಪಾರ್ಥಿವ ಶರೀರವನ್ನು ನೋಡಲು ಕನ್ನಡ ಚಿತ್ರರಂಗದ ದಿಗ್ಗಜರು ಸೇರಿದಂತೆ ಹಲವು ಹಿರಿಕಿರಿಯ ನಟನಟಿಯರು ಹೋಗುತ್ತಿದ್ದಾರೆ. ಬೆಂಗಳೂರಿನ ನೆಲಮಂಗಲದ ಸಮೀಪ ಇರುವ ಸೋಲದೇವನಹಳ್ಳಿಯಲ್ಲಿ ಲೀಲಾವತಿ ಅವರ ನಿವಾಸವಿದೆ. 

ನೆಲಮಂಗಲದ ಬಳಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಟಿ ಲೀಲಾವತಿಗೆ ಅಂತಿಮ ನಮನ ಸಲ್ಲಿಸಲು ಚಿತ್ರರಂಗದ ಹಲವಾರು ತಾರೆಗಳು ಈಗಾಗಲೇ ಅವರ ಮನೆ ಕಡೆ ಧಾವಿಸಿ ಹೋಗುತ್ತಿದ್ದಾರೆ. ಲೀಲಾವತಿ ನಿಧನಕ್ಕೆ ಅರ್ಜುನ್ ಸರ್ಜಾ, ಸುಧಾರಾಣಿ, ಸುಂದರ್‌ ರಾಜ್ ಮುಂತಾದವರು ಸಂತಾಪ ಸೂಚಿಸಿದ್ದಾರೆ.

 

 

Follow Us:
Download App:
  • android
  • ios