ನಟ ಚಿರಂಜೀವಿ ಇಲ್ಲದೆ ಒಂದು ವರ್ಷ ಕಳೆದ ಸರ್ಜಾ ಹಾಗೂ ಸುಂದರ್ ರಾಜ್‌ ಕುಟುಂಬ. ಪತ್ರ ಬರೆದ ಮಡದಿ ಮೇಘನಾ.....

ಕನ್ನಡ ಚಿತ್ರರಂಗದ ಯುವ ಸಾಮ್ರಾಟ್ ಚಿರಂಜೀವಿ ಸರ್ಜಾ ಅಗಲಿ ಇಂದಿಗೆ (ಜೂನ್ 7) ಒಂದು ವರ್ಷ. ಕನಕಪುರ ರಸ್ತೆ ನೆಲಗುಳಿ ಬಳಿ ಇರುವ ಬೃಂದಾವನ ಫಾರ್ಮ್ ಹೌಸ್‌ನಲ್ಲಿ ಇಂದು ಕುಟುಂಬಸ್ಥರು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. 

Add Asianetnews Kannada as a Preferred SourcegooglePreferred

ಮೇಘನಾ ಮಾತು: 
'ನೀನು ದೇವರ ಮನೆಗೆ ಹೋಗಿ ವರ್ಷವಾಯಿತು. ಎಷ್ಟು ಬೇಗ ಒಂದು ವರ್ಷ! ಈ 365 ದಿನಗಳಲ್ಲಿ ನಿನ್ನ ನೆನೆಯದ ದಿನಗಳೇ ಇಲ್ಲ. ಕನಸಿನಲ್ಲಿ ನಿನ್ನ ಕಾಣದ ರಾತ್ರಿಗಳೇ ಇಲ್ಲ. ಮರೆಯಲಾಗದ ಚಿರು ನೆನಪುಗಳು. ಕುಟುಂಬದ ಮೇಲೆ ನಿನಗಿದ್ದ ಅಪಾರ ಗೌರವ. ಜನನಗಳಿಗೆ ನೀನು ತೋರಿಸುತ್ತಿದ್ದ ಪ್ರೀತಿ, ಪ್ರೇಮ, ಸ್ನೇಹ, ಉದಾರಗುಣ ಮತ್ತು ಅಜಾತ ಶಶ್ರುಗಿದ್ದ ನಿನ್ನ ನೆನಪುಗಳೇ ಈಗ ನಮ್ಮ ಕರಗಲಾರದ ಆಸ್ತಿ. ನೀನೆಲ್ಲಿದ್ದರೂ ಅಲ್ಲಿ ನಗು ತುಂಬಿರಬೇಕು. ನಿನ್ನ ಆತ್ಮ ಸದಾ ಶಾಂತಿಯಿಂದಿರಬೇಕು. ಆ ಪ್ರಾರ್ಥನೆಯಲ್ಲೇ ಎಂದೆಂದೂ ನಿನ್ನ ನೆನಪಿನಲ್ಲೇ,' ಎಂದು ಮೇಘನಾ ಬರೆದುಕೊಂಡಿದ್ದಾರೆ.

ಜೂ. ಚಿರುಗೆ 7ನೇ ತಿಂಗಳು: ಫ್ಯಾನ್ಸ್ ಸೃಷ್ಟಿಸಿದ ಫೋಟೋ ವೈರಲ್! 

ಚಿರು ಜೊತೆಗಿರುವ ಕ್ಯಾಂಡಿಡ್ ಫೋಟೋ ಹಂಚಿಕೊಂಡಿರುವ ಮೇಘನಾ 'Us Mine' ಎಂದು ಬರೆದುಕೊಂಡಿದ್ದಾರೆ. ಫೋಟೋದಲ್ಲಿ ಚಿರು ಮೇಘನಾ ನೋಡಿ ನಗುತ್ತಿದ್ದಾರೆ. ಇವರಿಬ್ಬರೂ ಎಷ್ಟು ಪ್ರೀತಿಸುತ್ತಿದ್ದರೆಂದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.

View post on Instagram