ಬೆಂಗಳೂರು (ಅ.31): ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕ ಕಮ್ ನಟ ದಿನೇಶ್ ಗಾಂಧಿ ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. 52ರ ದಿನೇಶ್‌ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಕೊರೋನಾದಿಂದ ಚೇತರಿಸಿಕೊಳ್ಳುತ್ತಿದ್ದ ಮಾಜಿ ಸಿಎಂ ನಿಧನ 

ಕಿಚ್ಚ ಸುದೀಪ್ ಅಭಿನಯದ ವೀರ ಮದಕರಿ, ರವಿಚಂದ್ರನ್ ಅವರ ಹೂ ಹಾಗೂ ಮಲ್ಲಿಕಾರ್ಜುನ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಜೊತೆಗೆ ಛತ್ರಪತಿ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ.

ಕುಟುಂಬಸ್ಥರು ಹಾಗೂ ಕಲಾ ಬಂಧುಗಳನ್ನು ಅಗಲಿರುವ ದಿನೇಶ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪಾರ್ಥಿಸೋಣ.