Asianet Suvarna News Asianet Suvarna News

Avatara Purusha: ಶರಣ್ ಸಿನಿಮಾ ಬಿಡುಗಡೆ ಕುರಿತು ನಿರ್ದೇಶಕ ಸಿಂಪಲ್ ಸುನಿ ಟ್ವೀಟ್

ಕಾಮಿಡಿ ಕಿಂಗ್ ಅಧ್ಯಕ್ಷ ಶರಣ್ ಹಾಗೂ ಆಶಿಕಾ ರಂಗನಾಥ್ ಅಭಿನಯದ 'ಅವತಾರ ಪುರುಷ' ಚಿತ್ರದ ಬಿಡುಗಡೆ ದಿನಾಂಕ ಮುಂದೂಡಿಕೆ ಬಗ್ಗೆ ನಿರ್ದೇಶಕ ಸಿಂಪಲ್ ಸುನಿ ತಮ್ಮ ಟ್ವೀಟರ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಶೇರ್ ಮಾಡಿಕೊಂಡಿದ್ದಾರೆ.
 

kannada director simple suni tweet about sharan avatara purusha film gvd
Author
Bangalore, First Published Dec 11, 2021, 3:28 PM IST
  • Facebook
  • Twitter
  • Whatsapp

ಸಿಂಪಲ್ ಸುನಿ (Simple Suni) ನಿರ್ದೇಶನದ ಕಾಮಿಡಿ ಕಿಂಗ್ ಅಧ್ಯಕ್ಷ ಶರಣ್ (Sharan) ಅಭಿನಯದ 'ಅವತಾರ ಪುರುಷ' (Avatar Purusha) ಚಿತ್ರದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. ಈ ಚಿತ್ರದ ಪ್ರಚಾರ ಕೆಲಸಗಳು ಭರ್ಜರಿಯಾಗಿ ನಡೆದಿತ್ತು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಡಿಸೆಂಬರ್ 10ರಂದು 'ಅವತಾರ ಪುರುಷ' ಚಿತ್ರವು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ತೆರೆ ಕಾಣಬೇಕಿತ್ತು. ಆದರೆ ಕಾರಣಾಂತರಗಳಿಂದ ಚಿತ್ರದ ಬಿಡುಗಡೆಯನ್ನು ಮುಂದೂಡಿರುವುದಾಗಿ ಚಿತ್ರತಂಡ ತಿಳಿಸಿದೆ. ಈ ಬಗ್ಗೆ ಚಿತ್ರದ ನಿರ್ದೇಶಕ ಸಿಂಪಲ್ ಸುನಿ ತಮ್ಮ ಟ್ವೀಟರ್‌ (Twitter) ಖಾತೆಯಲ್ಲಿ ಪೋಸ್ಟ್‌ವೊಂದನ್ನು ಶೇರ್ ಮಾಡಿಕೊಂಡಿದ್ದಾರೆ.

ಕಾರಾಣಾಂತರಗಳಿಂದ 'ಅವತಾರ ಪುರುಷ 1' ಚಿತ್ರದ ಬಿಡುಗಡೆಯನ್ನು ಮುಂದೂಡಿದ್ದೇವೆ. ಚಿತ್ರತಂಡಕ್ಕೆ ಸಂಕ್ರಾಂತಿ ಹಬ್ಬದಂದು ತೆರೆಗಪ್ಪಳಿಸಲು ಬಯಕೆ ಇದೆ. ಆದರೆ ಅದೇ ಸಮಯದಲ್ಲಿ ಬೇರೆ ಭಾಷೆಯ ದೊಡ್ಡ ಚಿತ್ರಗಳ ಬಿಡುಗಡೆ ಇರುವುದರಿಂದ ನಮ್ಮ ಚಿತ್ರದ ಬಿಡುಗಡೆ, ಚಿತ್ರಮಂದಿರಗಳ ಲಭ್ಯತೆ ಮೇಲೆ ಅವಲಂಬಿತವಾಗಿದೆ ಎಂದು ಸಿಂಪಲ್ ಸುನಿ ಟ್ವೀಟ್ (Tweet) ಮಾಡಿದ್ದಾರೆ. ಈ ಹಿಂದೆ ಚಿತ್ರದ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ (Pushkara Mallikarjunaiah) ಒಮಿಕ್ರಾನ್ (omicron) ತಳಿಯ ಕೊರೋನಾ ಭಯ ಶುರುವಾಗಿದೆ. ಇದರಿಂದ ಜನ ಮತ್ತೆ ಚಿತ್ರಮಂದಿರಗಳಿಗೆ ಬರಲು ಹಿಂದೆ ಮುಂದೆ ನೋಡುತ್ತಿದ್ದಾರೆ. ಹಾಗೂ ರಾಜ್ಯ ಸರ್ಕಾರ ಜನರ ಆರೋಗ್ಯದ (Health) ದೃಷ್ಟಿಯಿಂದ ಈ ಹೊಸ ರೂಲ್ಸ್‌ಗಳನ್ನು ಜಾರಿ ಮಾಡಿದೆ. ಈ ಹೊತ್ತಿನಲ್ಲಿ ನಾವು ಸಿನಿಮಾ ಬಿಡುಗಡೆ ಮಾಡುವುದು ಎಷ್ಟು ಸೂಕ್ತ ಅನಿಸಿದ್ದು, ಸದ್ಯಕ್ಕೆ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಿದ್ದೇವೆ ಎಂದು ತಿಳಿಸಿದ್ದರು.

Avatara Purusha Postponed:ಶರಣ್ ಸಿನಿಮಾ ಮುಂದೂಡಿಕೆ, ರಿಲೀಸ್ ಯಾವಾಗ?

ಇತ್ತೀಚೆಗೆ ಚಿತ್ರದ  'ಲಡ್ಡೂ ಬಂದು ಬಾಯಿಗೆ ಬಿತ್ತಾ' (Laddoo) ಹಾಡು ಬಿಡುಗಡೆಯಾಗಿದೆ. ಶರಣ್ ಹಾಗೂ ಆಶಿಕಾ ಕಾಂಬಿನೇಷನ್‌ ಕೆಮಿಸ್ಟ್ರಿ ಹಾಡಿನಲ್ಲಿ ಸಖತ್ ವರ್ಕೌಟ್ ಆಗಿದ್ದು, ಸಿನಿರಸಿಕರಿಂದ ಒಳ್ಳೆಯ ಪ್ರತಿಕ್ರಿಯೆಯನ್ನು ಪಡೆದಿದೆ. 'ಅವತಾರ ಪುರುಷ' ಚಿತ್ರದ ಟೀಸರ್‌ ಹಾಗೂ ಟ್ರೇಲರ್‌ನಿಂದ ಈಗಾಗಲೇ ಸಾಕಷ್ಟು ಗಮನ ಸೆಳೆದಿದೆ. ಸಸ್ಪೆನ್ಸ್ ಥ್ರಿಲ್ಲಿಂಗ್ ಇರುವ ಚಿತ್ರದಲ್ಲಿ ಶರಣ್ ಅವರನ್ನು ಹಿಂದೆಂದೂ ಕಾಣದ ರೀತಿಯಲ್ಲಿ ಮತ್ತು ಹೊಸ ಅವತಾರದಲ್ಲಿ ಕಾಣಬಹುದಾಗಿದೆ. ಮುಖ್ಯವಾಗಿ ಸಿಕ್ಕಾಪಟ್ಟೆ ಶಾಕ್‌ನೊಂದಿಗೆ ಭಯಮೂಡಿಸುವಂತಹ ಬ್ಲ್ಯಾಕ್ ಮ್ಯಾಜಿಕ್ (Black Maagic) ಚಿತ್ರಕಥೆ ಈ ಚಿತ್ರದಲ್ಲಿದೆ. ಇದೊಂದು ಬ್ಲಾಕ್‌ ಮ್ಯಾಜಿಕ್‌ ಕತೆ. ಕಾಮಿಡಿ, ಬ್ಲಾಕ್‌ ಮ್ಯಾಜಿಕ್‌ ಅಂಶಗಳ ಸುತ್ತ ಈ ಸಿನಿಮಾ ಸಾಗುತ್ತದೆ. ಮುಖ್ಯವಾಗಿ ಶರಣ್‌ಗೆ ಜೋಡಿಯಾಗಿ ಚುಟು ಚುಟು ಹುಡುಗಿ ಆಶಿಕಾ ರಂಗನಾಥ್ (Ashika Ranganath) ನಟಿಸಿದ್ದಾರೆ.

Avatar Purusha: ಆಶಿಕಾ ರಂಗನಾಥ್ ಹಾಕಿದ 'ಲಡ್ಡೂ' ಬಂದು ಶರಣ್ ಬಾಯಿಗೆ ಬಿತ್ತು

ಇನ್ನು ಈ ಚಿತ್ರವು ಪುಷ್ಕರ್ ಫಿಲಂಸ್ ಬ್ಯಾನರ್‌ನಡಿ ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತ ಚಿತ್ರಕ್ಕಿದ್ದು, ರಾಷ್ಟ್ರ ಪ್ರಶಸ್ತಿ ವಿಜೇತ ವಿಕ್ರಮ್ ಮೊರ್ ಅವರು ಚಿತ್ರಕ್ಕೆ ನೃತ್ಯ ಸಂಯೋಜನೆ ಮಾಡಿದ್ದಾರೆ. ವಿಲಿಯಮ್ ಡೇವಿಡ್ ಛಾಯಾಗ್ರಹಣದಲ್ಲಿ 'ಅವತಾರ ಪುರುಷ'  ಚಿತ್ರ ಮೂಡಿ ಬಂದಿದೆ. ಇನ್ನು ಈ ಚಿತ್ರದಲ್ಲಿ ಸಾಯಿಕುಮಾರ್‌, ಶ್ರೀನಗರ ಕಿಟ್ಟಿ,  ಸುಧಾರಾಣಿ, ಸಾಧುಕೋಕಿಲ, ಭವ್ಯ, ಅಯ್ಯಪ್ಪ ಸೇರಿದಂತೆ ಮುಂತಾದವರ ತಾರಬಳಗವಿದೆ. ವಿಶೇಷವಾಗಿ ಅವತಾರಪುರುಷ' ಚಿತ್ರ ಎರಡು ಭಾಗಗಳಲ್ಲಿ ತೆರೆಗೆ ಬರಲಿದೆ. 'ಅವತಾರ ಪುರುಷ 1' ಮತ್ತು 'ಅವತಾರ ಪುರುಷ 2' ಹೆಸರಿನಲ್ಲಿ ಸಿನಿಮಾ ಬಿಡುಗಡೆಯಾಗುತ್ತಿದೆ. ಆದರೆ, ಚಿತ್ರದ ಟ್ಯಾಗ್‌ಲೈನ್  ಮಾತ್ರ ಬೇರೆ ಬೇರೆ ಇಡಲಾಗುತ್ತಿದೆ. ಮೊದಲ ಭಾಗಕ್ಕೆ ಅಷ್ಟದಿಗ್ಬಂಧನ ಮಂಡಲಕ ಹಾಗೂ ಎರಡನೇ ಪಾರ್ಟ್‌ಗೆ  ತ್ರಿಶಂಕು ಎನ್ನುವ ಟ್ಯಾಗ್‌ಲೈನ್ ಇಡಲಾಗಿದೆ. 
 

Follow Us:
Download App:
  • android
  • ios