ಹೃದಯಾಘಾತದಿಂದ ಹಿರಿಯ ನಿರ್ಮಾಪಕ ವಿಜಯ್ ಕುಮಾರ್ ಕೊನೆಯುಸಿರೆಳೆದಿದ್ದಾರೆ.  

ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರೂ ಆಗಿದ್ದ ಬಿ.ವಿಜಯ್‌ ಕುಮಾರ್‌ (63) ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕೆಲ ತಿಂಗಳುಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಭಾನುವಾರ ತಡ ರಾತ್ರಿ ಎದೆ ನೋವು ಕಾಣಿಸಿಕೊಂಡು ನಿಧರಾಗಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

 ಮೃತ ವಿಜಯ್‌ ಕುಮಾರ್‌ ಅವರು ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ವಿಷ್ಣುವರ್ಧನ್‌ ಅಭಿನಯದ ‘ಸಿಂಹಾದ್ರಿಯ ಸಿಂಹ’, ‘ಲಯನ್‌ ಗಜಪತಿ ರಾವ್‌’, ‘ಮೌನಗೀತೆ’, ‘ಅವತಾರ ಪುರುಷ’ ಸೇರಿದಂತೆ ಹಲವು ಚಿತ್ರಗಳನ್ನು ಇವರು ನಿರ್ಮಿಸಿದ್ದಾರೆ. ಇನ್ನೂ ಬಿಡುಗಡೆಯಾಗಬೇಕಿರುವ ಸ್ವಚ್ಛ ಭಾರತ ಹೆಸರಿನ ಚಿತ್ರಕ್ಕೂ ಇವರೇ ನಿರ್ಮಾಪಕರಾಗಿದ್ದಾರೆ. 

3 ಬಾರಿ ರಾಷ್ಟ್ರೀಯ ಪ್ರಶಸ್ತಿ ಗೌರವಕ್ಕೆ ಪಾತ್ರರಾದ ಹಿರಿಯ ನಟಿ ಸುರೇಖಾ ಸಿಕ್ರಿ ಇನ್ನಿಲ್ಲ

ವಿಜಯ್‌ ಕುಮಾರ್‌ ಅವರ ನಿಧನಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ಮಾಪಕರ ಸಂಘ ಸೇರಿದಂತೆ ಚಿತ್ರರಂಗದ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಅಂತ್ಯಕ್ರಿಯೆ ಆ.16ರ ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಟಿ.ಆರ್‌.ಮಿಲ್‌ನಲ್ಲಿ ನಡೆಯಲಿದೆ.