ಕನ್ನಡ ಚಿತ್ರರಂಗದ ಸಂಗೀತ ಮಾಂತ್ರಿಕ, ಮ್ಯಾಜಿಕಲ್ ಮ್ಯೂಸಿಕ್ ಕಂಪೋಸರ್‌ ಅರ್ಜುನ್ ಜನ್ಯ ಅವರಿಗೆ ಕೊರೋನಾ ಪಾಸಿಟಿವ್ ಎಂದು ತಿಳಿದು ಬಂದ ಕಾರಣ ಬೆಂಗಳೂರಿನ ಆಸ್ಪತ್ರೆವೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಬಾಲಿವುಡ್ ನಟಿ ಆಲಿಯಾ ಭಟ್‌ಗೆ ಕೊರೋನಾ ಪಾಸಿಟಿವ್! 

ಸಿನಿಮಾಗಳಿಗೆ ಸಂಗೀತ ನಿರ್ದೇಶನ ಮಾಡುವುದರ ಜೊತೆಗೆ ಕಿರುತೆರೆ ಕ್ಷೇತ್ರದಲ್ಲಿ ತುಂಬಾನೇ ಬ್ಯುಸಿಯಾಗಿದ್ದರು. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್' ರಿಯಾಲಿಟಿ ಶೋ ತೀರ್ಪುಗಾರರಾಗಿದ್ದಾರೆ. ಜನ್ಯ ಕೊರೋನಾ ಬಗ್ಗೆ ಎಲ್ಲಿಯೂ ಸೋಷಿಯಲ್ ಮೀಡಿಯಾದಲ್ಲಿ ಬಹಿರಂಗ ಪಡಿಸಿಲ್ಲ, ಖಾಸಗಿ ವೆಬ್‌ಸೈಟ್‌ವೊಂದು ಈ ಸುದ್ದಿಯನ್ನು ಪ್ರಕಟಿಸಿದೆ.

ನಟಿ ಭೂಮಿ ಪಡ್ನೆಕರ್‌, ನಟ ವಿಕ್ಕಿ ಕೌಶಲ್‌ಗೆ ಕೊರೋನಾ ಪಾಸಿಟಿವ್! 

ಕಳೆದ ವರ್ಷ ಲಾಕ್‌ಡೌನ್‌ ಸಮಯದಲ್ಲಿ ಅರ್ಜುನ್‌ ಜನ್ಯ ಅರವರಿಗೆ ಲಘು ಹೃದಯಾಘಾತವಾಗಿತ್ತು. ಮೈಸೂರಿನಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 'ತಡವಾಗಿ ಕೊರೋನಾ ಲಕ್ಷಣಗಳು ಕಾಣಿಸಿಕೊಂಡಿತ್ತು. ನಂತರ ಕೊರೋನಾ ಪರೀಕ್ಷೆ ಮಾಡಿಸಿದಾಗ ವರದಿ ಪಾಸಿಟಿವ್ ಬಂದಿದೆ. ತಕ್ಷಣವೇ ಆಸ್ಪತ್ರೆಗೆ ದಾಖಲಾಗಿರುವೆ,' ಎಂದು ಅರ್ಜುನ್ ಜನ್ಯ ಹೇಳಿದ್ದಾರೆ.  ಅರ್ಜುನ್ ಆದಷ್ಟು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ.