ಚಾಲೆಂಜಿಂಗ್ ಸ್ಟಾರ್ ದರ್ಶನ್ 50ನೇ ಸಿನಿಮಾ ಕುರುಕ್ಷೇತ್ರ ಬಿಡುಗಡೆಗೆ ಸಿದ್ಧವಾಗಿದೆ. ಆದರೆ ಮುಹೂರ್ತವಿನ್ನೂ ಕೂಡಿ ಬಂದಿಲ್ಲ. ಚುನಾವಣೆ ಬಳಿಕ ರಿಲೀಸ್ ಮಾಡಲಾಗುತ್ತದೆ ಎನ್ನಲಾಗುತ್ತಿದೆ. 


ಕುರುಕ್ಷೇತ್ರ ಸಿನಿಮಾ ಸದ್ಯಕ್ಯೆ ಕುರುಕ್ಷೇತ್ರದ ಕನ್ನಡ, ತೆಲುಗು, ತಮಿಳು, ಮಲಯಾಳಂ ನಾಲ್ಕೂ ಭಾಷೆಯ ಪೋಸ್ಟರ್ ರಿಲೀಸ್ ಮಾಡಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗ್ತಿದೆ.

 

ಕುರುಕ್ಷೇತ್ರ ಪೌರಾಣಿಕ ಸಿನಿಮಾವನ್ನು ನಾಗಣ್ಣ ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ಅಂಬರೀಶ್, ರವಿಚಂದ್ರನ್, ಅರ್ಜುನ್ ಸರ್ಜಾ, ಶಶಿಕುಮಾರ್, ನಿಖಿಲ್ ಕುಮಾರಸ್ವಾಮಿ. ಮೇಘನಾ ರಾಜ್, ಹರಿಪ್ರಿಯಾ ಸೇರಿದಂತೆ ಸಾಕಷ್ಟು ಕಲಾವಿದರು ನಟಿಸಿದ್ದಾರೆ.