ಲೂಸ್ ಮಾದ ಯೋಗೇಶ್ 'ಒಂಬತ್ತನೇ ದಿಕ್ಕು' ಟ್ರೇಲರ್ ರಿಲೀಸ್: ಪುನೀತ್‌ಗೆ ಅರ್ಪಣೆ
ನಮಗೆ ಸಿಗುವುದಿಲ್ಲ ಎಂದು ಗೊತ್ತಿದರೂ ನಾವು ಮತ್ತೊಂದು ದಾರಿಯಲ್ಲಿ ಏನನ್ನೋ ಹುಡುಕುತ್ತಾ ಹೋಗುತ್ತೇವೆ. ಅದು ಮತ್ತೊಂದು ಕಡೆ ಸಿಗುತ್ತದೆ. ಹೀಗೆ ಇಲ್ಲದ ಕಡೆ ಹುಡುಕುತ್ತಾ ಸಾಗುತ್ತೇವೆ. ಇದು ಚಿತ್ರದಲ್ಲಿರುವ ಸಾರಾಂಶ.
ನಟ ಲೂಸ್ ಮಾದ ಯೋಗೇಶ್ (Yogesh) ಅಭಿನಯದ 'ಒಂಬತ್ತನೇ ದಿಕ್ಕು' (Ombatthane Dikku) ಚಿತ್ರದ ಟ್ರೇಲರ್ (Trailer) ಬಿಡುಗಡೆಯಾಗಿದೆ. ಚಿತ್ರವನ್ನು ಇತ್ತೀಚೆಗೆ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ (Puneeth Rajkumar) ಅವರಿಗೆ ಅರ್ಪಿಸಿದ್ದು, ಜೊತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯವನ್ನು ಚಿತ್ರತಂಡ ತಿಳಿಸಿದೆ. ಸಿನಿಮಾದಲ್ಲಿ ಎರಡು ಕಥಾಹಂದರ ಜೊತೆಯಾಗಿ ಸಾಗುತ್ತದೆ. ಸಸ್ಪೆನ್ಸ್, ಥ್ರಿಲ್ಲರ್ ಕತೆಯನ್ನು ಒಳಗೊಂಡಿರುವ ಸಿನಿಮಾ ಇದಾಗಿದ್ದು, ಪುರಾತನ ದೇವಾಲಯ, ವಿಗ್ರಹ ಕಳವು. ಇದು ಚಿತ್ರದ ಎರಡು ಮುಖ್ಯ ತಿರುವುಗಳು. ಚಿತ್ರದಲ್ಲಿ ಯೋಗಿಗೆ ನಾಯಕಿಯಾಗಿ ಅದಿತಿ ಪ್ರಭುದೇವ (Aditi Prabhudeva) ಕಾಣಿಸಿಕೊಂಡಿದ್ದಾರೆ.
ಕನ್ನಡದಲ್ಲಿ ತಮ್ಮದೇ ಆದ ವಿಶಿಷ್ಟ ರೀತಿಯ ಚಿತ್ರಗಳನ್ನು ನಿರ್ದೇಶಿಸಿ ಹೆಸರಾದ ದಯಾಳ್ ಪದ್ಮನಾಭನ್ (Dayal Padmanabhan) 'ಒಂಬತ್ತನೇ ದಿಕ್ಕು' ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, 9ಕೆ ಸ್ಟುಡಿಯೋಸ್ ಹಾಗೂ ನಿರ್ದೇಶಕ ಗುರು ದೇಶಪಾಂಡೆ ಅವರ ಜಿ ಸಿನಿಮಾಸ್ ಬ್ಯಾನರ್‌ನಲ್ಲಿ ಈ ಚಿತ್ರ ನಿರ್ಮಾಣ ಆಗಿದೆ. ದಯಾಳ್ ನಿರ್ದೇಶನದ ಹತ್ತೊಂಭತ್ತನೆಯ ಆಕ್ಷನ್ ಥ್ರಿಲ್ಲರ್ ಚಿತ್ರ 'ಒಂಬತ್ತನೇ ದಿಕ್ಕು'. ಈ ಹಿಂದೆ 'ಹಗ್ಗದ ಕೊನೆ', 'ಆ ಕರಾಳ ರಾತ್ರಿ', 'ರಂಗನಾಯಕಿ'ಯಂತಹ ವಿಭಿನ್ನ ಚಿತ್ರಗಳನ್ನು ಡೈರೆಕ್ಟ್ ಮಾಡಿದ್ದಾರೆ.
'ಲಂಕೆ'ಯಲ್ಲಿ ರಾಮ, ರಾವಣ ಎರಡೂ ಆಗಲಿದ್ದಾರೆ ಲೂಸ್ ಮಾದ ಯೋಗಿ!
ಈ ಚಿತ್ರದ ಕಥೆ ಎರಡು ಟೈಮ್ ಲೈನ್‌ನಲ್ಲಿ ಸಾಗುತ್ತದೆ. ನಮಗೆ ಸಿಗುವುದಿಲ್ಲ ಎಂದು ಗೊತ್ತಿದರೂ ನಾವು ಮತ್ತೊಂದು ದಾರಿಯಲ್ಲಿ ಏನನ್ನೋ ಹುಡುಕುತ್ತಾ ಹೋಗುತ್ತೇವೆ. ಅದು ಮತ್ತೊಂದು ಕಡೆ ಸಿಗುತ್ತದೆ. ಹೀಗೆ ಇಲ್ಲದ ಕಡೆ ಹುಡುಕುತ್ತಾ ಸಾಗುತ್ತೇವೆ. ಇದು ಚಿತ್ರದಲ್ಲಿರುವ ಸಾರಾಂಶ. ಚಿತ್ರದಲ್ಲಿ ಯೋಗಿ ಇಲ್ಲಿಯವರೆಗೂ ಮಾಡದ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅಪ್ಪನ ಪಾತ್ರದಲ್ಲಿ ಹಿರಿಯ ನಟ ಅಶೋಕ್ ನಟಿಸಿದ್ದಾರೆ.
ಅವಿನಾಶ್ ಯು ಶೆಟ್ಟಿ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು. ನಿತಿನ್ ಅವರು ಬರೆದಿರುವ ಕಥೆಗೆ ವೆಂಕಟ್ ದೇವ್, ಅಭಿಷೇಕ್.ಎಸ್.ಎನ್ ಹಾಗೂ ದಯಾಳ್ ಪದ್ಮನಾಭನ್ ಸಂಭಾಷಣೆಯಿದೆ. ರಾಕೇಶ್ ಕ್ಯಾಮರಾ ಕೈಚಳಕವಿರುವ ಈ ಚಿತ್ರಕ್ಕೆ ಮಣಿಕಾಂತ್ ಕದ್ರಿ ಅವರ ಸಂಗೀತ ನಿರ್ದೇಶನವಿದೆ. ಪ್ರೀತಿ ಮೋಹನ್ ಸಂಕಲನ, ವಿಕ್ರಂ ಮೋರ್ ಸಾಹಸ ಹಾಗೂ ಮುರಳಿ ಅವರ ನೃತ್ಯ ಈ ಚಿತ್ರಕ್ಕಿದೆ. ಸಾಯಿಕುಮಾರ್, ಹಿರಿಯನಟ ಅಶೋಕ್, ಸುಂದರ್, ರಮೇಶ್ ಭಟ್, ಶೃತಿ ನಾಯಕ್, ಪ್ರಶಾಂತ್ ಸಿದ್ದಿ, ಸಂಪತ್ ಕುಮಾರ್, ಮುನಿ ಸೇರಿದಂತೆ ಮುಂತಾದವರ ತಾರಾಬಳಗ ಚಿತ್ರಕ್ಕಿದೆ.
ಧನಂಜಯ್ 'ಹೆಡ್‌ಬುಷ್' ಚಿತ್ರಕ್ಕೆ ಲೂಸ್‌ಮಾದ ಯೋಗೀಶ್ ಎಂಟ್ರಿ!
ಇನ್ನು ನಟ ಯೋಗಿ ಅಭಿನಯದ 'ಲಂಕೆ' (Lanke) ಚಿತ್ರ ಕೆಲ ತಿಂಗಳ ಹಿಂದಷ್ಟೇ ಬಿಡುಗಡೆಯಾಗಿ ಸಿನಿರಸಿಕರಿಂದ ಒಳ್ಳೆಯ ಪ್ರತಿಕ್ರಿಯೆಯನ್ನು ಪಡೆದಿತ್ತು. ರಾಮನ ತೇಜಸ್ಸು, ರಾವಣನ ವರ್ಚಸ್ಸು ಎಂಬ ಟ್ಯಾಗ್‌ಲೈನ್ ಇರುವ ಈ ಚಿತ್ರದಲ್ಲಿ ಕೃಷಿ ತಾಪಂಡ, ಕಾವ್ಯಾ ಶೆಟ್ಟಿ, ಎಸ್ಟರ್ ನರೋನ್ಹಾ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದರು. ರಾಮ್ ಪ್ರಸಾದ್ ನಿರ್ದೇಶನ ಈ ಚಿತ್ರಕ್ಕಿದ್ದು, ಕಾರ್ತಿಕ್ ಶರ್ಮಾ ಸಂಗೀತ ಸಂಯೋಜನೆ, ರಮೇಶ್ ಬಾಬು ಕ್ಯಾಮೆರಾ ಕೈಚಳಕವಿದೆ. ದಿ ಗ್ರೇಟ್ ಎಂಟಟೈನರ್ಸ್ ಬ್ಯಾನರ್ ನಡಿ ಪಟೇಲ್ ಶ್ರೀನಿವಾಸ್, ಸುರೇಖಾ ರಾಮ್ ಪ್ರಸಾದ್ ಚಿತ್ರವನ್ನು ನಿರ್ಮಾಣ ಮಾಡಿದ್ದರು. ಇತ್ತೀಚೆಗೆ ನಿಧನರಾದ ಸಂಚಾರಿ ವಿಜಯ್ (Sanchari Vijay) ಸಹ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಜೊತೆಗೆ ಶರತ್ ಲೋಹಿತಾಶ್ವ, ಸುಚೇಂದ್ರ ಪ್ರಸಾದ್, ಶೋಭ್ ರಾಜ್,ಡ್ಯಾನಿ ಕುಟ್ಟಪ್ಪ, ವಾಣಿಶ್ರೀ ಹಾಗೂ ಇನ್ನಿತರ ಸ್ಟಾರ್ ಕಲಾವಿದರ ದಂಡು ಚಿತ್ರದಲ್ಲಿತ್ತು.