Asianet Suvarna News Asianet Suvarna News

'ಸಾಮಿ ಸಾಮಿ' ಹಾಡಿಗೆ ಬೊಂಬಾಟ್ ಸ್ಟೆಪ್ಸ್ ಹಾಕಿದ ಅಲ್ಲು-ರಶ್ಮಿಕಾ

'ಪುಷ್ಪ' ಚಿತ್ರದಲ್ಲಿ ಅಲ್ಲು ಅರ್ಜುನ್ ರಕ್ತ ಚಂದನ ಕಳ್ಳಸಾಗಾಣಿಕೆ ಮಾಡುವ ಲಾರಿ ಚಾಲಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಡಿ-ಗ್ಲಾಮರಸ್ ಪಾತ್ರದಲ್ಲಿ ಶ್ರೀವಲ್ಲಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ.

Kannada movie Pushpa saami saami song out starred allu arjun
Author
Bangalore, First Published Oct 28, 2021, 3:32 PM IST

'ಸ್ಟೈಲಿಶ್ ಸ್ಟಾರ್' ಅಲ್ಲು ಅರ್ಜುನ್ (Allu Arjun) ಮತ್ತು ನ್ಯಾಷನಲ್ ಕ್ರಷ್‌ ರಶ್ಮಿಕಾ ಮಂದಣ್ಣ (Rashmika Mandanna) ಅಭಿನಯದ 'ಪುಷ್ಪ' (Pushpa) ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಈಗಾಗಲೇ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಚಿತ್ರತಂಡ ಚಿತ್ರದ ಒಂದೊಂದೇ ಹಾಡನ್ನು ಬಿಡುಗಡೆ ಮಾಡುತ್ತಿದ್ದು, ಇದೀಗ 'ಸಾಮಿ ಸಾಮಿ' (Saami Saami) ಹಾಡನ್ನು ಬಿಡುಗಡೆ ಮಾಡಿದೆ. ಈ ಹಾಡಿನಲ್ಲಿ ರಶ್ಮಿಕಾ ಮತ್ತು ಅಲ್ಲು ಅರ್ಜುನ್​ ಬೊಂಬಾಟ್ ಸ್ಟೆಪ್ಸ್ ಹಾಕಿದ್ದಾರೆ.

'ಮೊಣಕಾಲ್​ ಮೇಲ್​ ಗಂಟಾ, ಪಂಚೆ ನೀ ಕಟ್ಟಿ ನಿಂತ್ರೆ, ಈ ಪಂಚಪ್ರಾಣವೇ ಹೋಗದೆ ಸಾಮಿ' ಎಂಬ ವಿಭಿನ್ನ ಸಾಲುಗಳನ್ನು ಹೊಂದಿರುವ ಈ ಹಾಡಿಗೆ ವರದರಾಜ್​ ಚಿಕ್ಕಬಳ್ಳಾಪುರ ಸಾಹಿತ್ಯ ಬರೆದಿದ್ದು, ಸ್ಟೆಪ್​ಗಳನ್ನು ನೃತ್ಯ ನಿರ್ದೇಶಕ ಶೇಖರ್​ ವಿ.ಜೆ. ಹೇಳಿಕೊಟ್ಟಿದ್ದಾರೆ. ರಶ್ಮಿಕಾ ಅಲ್ಲು ಅರ್ಜುನ್​ ಪಂಚೆ ಹಿಡಿದು ಭರ್ಜರಿಯಾಗಿ ಡ್ಯಾನ್ಸ್​ ಮಾಡಿರುವುದು ಸಿನಿರಸಿಕರ ಗಮನ ಸೆಳೆಯುತ್ತಿವೆ. ಕನ್ನಡದ ಜೊತೆಗೆ ತೆಲುಗು, ಮಲಯಾಳಂ, ತಮಿಳಿನಲ್ಲೂ ಈ ಹಾಡು ಬಿಡುಗಡೆ ಆಗಿದೆ. ಕನ್ನಡ ವರ್ಷನ್​ಗೆ ಅನನ್ಯಾ ಭಟ್​ (Ananya Bhat) ಧ್ವನಿ ನೀಡಿದ್ದಾರೆ. ಈ ಹಾಡಿಗೆ ದೇವಿಶ್ರೀ ಪ್ರಸಾದ್ (Devi Sri Prasad) ಸಂಗೀತ ಸಂಯೋಜಿಸಿದ್ದು, ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.
 

 
'ಪುಷ್ಪ' ಚಿತ್ರದಲ್ಲಿ ಅಲ್ಲು ಅರ್ಜುನ್ ರಕ್ತ ಚಂದನ ಕಳ್ಳಸಾಗಾಣಿಕೆ ಮಾಡುವ ಲಾರಿ ಚಾಲಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಡಿಗ್ಲಾಮರಸ್ ಪಾತ್ರದಲ್ಲಿ ಶ್ರೀವಲ್ಲಿಯಾಗಿ ರಶ್ಮಿಕಾ ನಟಿಸಿದ್ದಾರೆ. ಡಾಲಿ ಧನಂಜಯ್ (Dolly Dhananjay), ಟಾಲಿವುಡ್ ವಿಲನ್ ಜಗಪತಿ ಬಾಬು (Jagapati Babu), ಪ್ರಕಾಶ್ ರಾಜ್ (Prakash Raj), ಸುನೀಲ್, ವೆನ್ನೆಲ್ಲಾ ಕಿಶೋರ್ ಸೇರಿದಂತೆ ಚಿತ್ರದಲ್ಲಿ ದೊಡ್ಡ ತಾರಾಬಳಗವಿದೆ. ಮಲಯಾಳಂ ನಟ ಫಾಹದ್ ಫಾಸಿಲ್ (Fahadh Faasil) ಮುಖ್ಯ ಖಳ ನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಪುಷ್ಪಾದಲ್ಲಿ ಅಲ್ಲು ಜೋಡಿಯಾಗಿ ರಶ್ಮಿಕಾ: ಫಸ್ಟ್‌ ಲುಕ್ ರಿಲೀಸ್

ಮೈತ್ರಿ ಮೂವೀ ಮೇಕರ್ಸ್ ಸಂಸ್ಥೆ (Mythri Movie Makers) ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದು, ಅಲ್ಲು ಅರ್ಜುನ್​ ಗೆಟಪ್​ ಸಂಪೂರ್ಣ ಡಿಫರೆಂಟ್​ ಆಗಿದೆ. ರಶ್ಮಿಕಾ ಕೂಡ ಹಳ್ಳಿ ಹುಡುಗಿ ರೀತಿ ಕಾಣಿಸಿಕೊಂಡಿದ್ದಾರೆ. ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಪಾತ್ರದಿಂದ ಪಾತ್ರಕ್ಕೆ ವಿಭಿನ್ನತೆ ಕಾಯ್ದುಕೊಳ್ಳುತ್ತಿದ್ದಾರೆ. ಇಷ್ಟು ದಿನಗಳ ಕಾಲ ಸ್ಟೈಲಿಶ್ ಅವತಾರಗಳಲ್ಲಿ ಮಿಂಚಿದ್ದ ಅವರು ಈಗ ಶ್ರೀವಲ್ಲಿ ಎಂಬ ಹಳ್ಳಿ ಹುಡುಗಿ ಪಾತ್ರ ಮಾಡುತ್ತಿದ್ದು, ಈಚೆಗೆ ಅದರ ಫಸ್ಟ್ ಲುಕ್ ಕೂಡ ರಿಲೀಸ್ ಆಗಿತ್ತು. 

ಡಿಸೆಂಬರ್‌ನಲ್ಲಿ ರಶ್ಮಿಕಾ ಮಂದಣ್ಣ, ಅಲ್ಲು ಅರ್ಜುನ್ 'ಪುಷ್ಪ' ರಿಲೀಸ್!

ಶ್ರೀವಲ್ಲಿ ಪುಷ್ಪಾ ರಾಜ್ (ಅಲ್ಲು ಅರ್ಜುನ್ ಪಾತ್ರ) ಪ್ರೇಯಸಿ. ಪೋಸ್ಟರ್‌ನಲ್ಲಿ, ಶ್ರೀವಲ್ಲಿ ತನ್ನ ಕಿವಿಯೋಲೆಗಳಲ್ಲಿ ಒಂದನ್ನು ಧರಿಸಿ ಏನಕ್ಕೋ ಸಿದ್ಧವಾಗುತ್ತಿರುವುದನ್ನು ಕಾಣಬಹುದು. 'ಪುಷ್ಪ' ಚಿತ್ರಕ್ಕೆ ತೆಲುಗಿನ ಖ್ಯಾತ ನಿರ್ದೇಶಕ ಸುಕುಮಾರ್ (Sukumar)​ ಆಕ್ಷನ್ ಕಟ್ ಹೇಳಿದ್ದು, ಎರಡು ಭಾಗಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ. 'ಪುಷ್ಪ: ದಿ ರೈಸ್' (Pushpa: The Rise) ಎಂಬ ಶೀರ್ಷಿಕೆಯ ಮೊದಲ ಭಾಗವು ಡಿಸೆಂಬರ್ 17ರಂದು ವಿಶ್ವದಾದ್ಯಂತ ತೆರೆ ಕಾಣಲಿದೆ.

Follow Us:
Download App:
  • android
  • ios