ಸ್ಯಾಂಡಲ್ ವುಡ್ ಹಿರಿಯ ನಟ ಲೋಹಿತಾಶ್ವ ಅವರಿಗೆ ಹೃದಯಾಘಾವಾಗಿದ್ದು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ನ ಸಾಗರ್ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ನೀಗಾಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ಸ್ಥಿತಿ ಗಂಭೀರವಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಸ್ಯಾಂಡಲ್ ವುಡ್ ಹಿರಿಯ ನಟ ಲೋಹಿತಾಶ್ವ ಅವರಿಗೆ ಹೃದಯಾಘಾವಾಗಿದ್ದು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ನ ಸಾಗರ್ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ನೀಗಾಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ಸ್ಥಿತಿ ಗಂಭೀರವಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟ ಲೋಹಿತಾಶ್ವ ಅವರಿಗೆ ನಿನ್ನೆ ರಾತ್ರಿ (ಅಕ್ಟೋಬರ್ 9) ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ವೈದ್ಯರು ಚಿಕಿತ್ಸೆ ನೀಡಲಾಗುತ್ತಿದ್ದು ಎರಡು ದಿನ ಏನು ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ನಟ ಲೋಹಿತಾಶ್ವ ಸುಮಾರು 500 ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸಿನಿಮಾ ಮಾತ್ರವಲ್ಲದೇ ನಾಟಕಕಾರ, ರಂಗನಾಟಕ ಮತ್ತು ದೂರದರ್ಶನದ ಧಾರಾವಾಹಿಗಳಲ್ಲೂ ನಟಿಸಿದ್ದಾರೆ. ಇನ್ನು ಇಂಗ್ಲಿಷ್ ಪ್ರಾಧ್ಯಪಕರಾಗಿಯೂ ಸೇವೆ ಸಲ್ಲಿಸಿದ್ದಾರೆ. 80 ವರ್ಷದ ನಟ ಲೋಹಿತಾಶ್ವ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಮತ್ತು ಚಿತ್ರರಂಗದ ಆಪ್ತರು ಪ್ರಾರ್ಥಿಸುತ್ತಿದ್ದಾರೆ.
ವೈಟ್ ರೈಸ್ ತಿನ್ನೋದ್ರಿಂದ ಅಕಾಲಿಕ ಹಾರ್ಟ್ ಅಟ್ಯಾಕ್ ಆಗುತ್ತಾ?
ನಟ ಲೋಹಿತಾಶ್ವ 1971ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಮೂವರು ಮಕ್ಕಳಿದ್ದಾರೆ. ಒಬ್ಬ ಮಗ ಶರತ್ ಲೋಹಿತಾಶ್ವ ಸಿನಿಮಾರಂಗದಲ್ಲಿ ಸಕ್ರೀಯರಾಗಿದ್ದಾರೆ. 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಲೋಹಿತಾಶ್ವ ಅವರು ಇತ್ತೀಚಿನ ವರ್ಷಗಳಲ್ಲಿ ಸಿನಿಮಾರಂಗದಿಂದ ದೂರ ಇದ್ದರು. 2018ರ ಬಳಿಕ ಲೋಹಿತಾಶ್ವ ಮತ್ತೆ ಬಣ್ಣ ಹಚ್ಚಿಲ್ಲ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲೋಹಿತಾಶ್ವ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
