ಬೆಂಗಳೂರು(ಜು. 07)  ಕನ್ನಡ ಹಿರಿಯ ನಟಿ ಜಯಂತಿ  ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.  ಸುವರ್ಣ ನ್ಯೂಸ್ ಗೆ ಮಾಹಿತಿ ನೀಡಿರುವ ಜಯಂತಿ ಪುತ್ರ ಕೃಷ್ಣಕುಮಾರ್, ಅಸ್ತಮಾ ಸಮಸ್ಯೆ ಜಯಂತಿ ಅವರನ್ನು ಕಾಡುತ್ತಿದ್ದು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ
 
ಜಯಂತಿ ಅವರು ಹಲವು ದಿನಗಳಿಂದ ಅಸ್ತಮಾ ಸಮಸ್ಯೆಯಿಂದ ಬಳಲುತ್ತಿದ್ದು, ಅವರನ್ನು ಕಳೆದ ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅನಾರೋಗ್ಯದಿಂದ ಬಳಲುತ್ತಿರುವ ಜಯಂತಿ ಅವರಿಗೆ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಲಾಕ್ ಡೌನ್ ವೇಳೆ ಹಂಪಿಯಲ್ಲಿ ಸಿಲುಕಿಕೊಂಡಿದ್ದ ಜಯಂತಿ

ಕೊರೋನಾ ಟೆಸ್ಟ್ ಮಾಡಿಸಲಾಗಿದ್ದು ನೆಗೆಟಿವ್ ಬಂದಿದೆ.  ಹಾಗಾಗಿ ಭಯಪಡುವ ಅಗತ್ಯ ಇಲ್ಲ ಎಂದು ತಿಳಿಸಿದ್ದಾರೆ. ಕನ್ನಡ ಚಿತ್ರರಂಗದ ಮಟ್ಟಿಗೆ ಅಭಿನಯ ಶಾರದೆ ಎಂದು ಕರೆಸಿಕೊಂಡಿರುವ ಜಯಂತಿ ಸಾಹಸಿಂಹ ವಿಷ್ಣುವರ್ಧನ್ ಅವರ ಮೊದಲ ಚಿತ್ರ ನಾಗರಹಾವು ದಲ್ಲಿ ಮಾಡಿದ್ದ ಓನಕೆ ಓಬವ್ವ ಪಾತ್ರ ಇಂದಿಗೂ ಕಣ್ಣಿಗೆ ಕಟ್ಟಿದಂತೆ ಇದೆ.