KGF ಹಿಂದಿಕ್ಕಿದ ಕಾಂತಾರ; ಕರ್ನಾಟಕದಲ್ಲಿ ಹೆಚ್ಚು ಜನ ವೀಕ್ಷಿಸಿದ ಚಿತ್ರ ಎಂಬ ಹೆಗ್ಗಳಿಕೆ

 ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿರುವ ಸಿನಿಮಾಗಳಲ್ಲಿಯೇ ಕಾಂತಾರ ಕರ್ನಾಟಕದಲ್ಲಿ ಅತೀ ಹೆಚ್ಚು ಜನ ವೀಕ್ಷಿಸಿದ ಸಿನಿಮಾವಾಗಿ ಹೊರಹೊಮ್ಮಿದೆ. 

Kantara becomes most viewed film in Karnataka sgk

'ಕಾಂತಾರ' ಸಿನಿಮಾದ ಅಬ್ಬರಕ್ಕೆ ಭಾರತೀಯ ಸಿನಿಮಾರಂಗ ದಂಗಾಗಿದೆ. ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ದೊಡ್ಡ ಮಟ್ಟದಲ್ಲಿ ಸಕ್ಸಸ್ ಕಂಡಿದೆ. ಈಗಾಗಲೇ ಸಾಕಷ್ಟು ದಾಖಲೆ ಬರೆದಿರುವ ಕಾಂತಾರ ಯಶಸ್ಸಿಗೆ ಮತ್ತೊಂದು ಗರಿ. ಕನ್ನಡ ಮಾತ್ರವಲ್ಲದೇ ಬೇರೆ ಬೇರೆ ಭಾಷೆಗಳಿಂದನೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವ ಕಾಂತಾರ ಅತೀ ಹೆಚ್ಚು ಜನರು ವೀಕ್ಷಿಸಿದ ಸಿನಿಮಾ ಹೆಗ್ಗಳಿಕೆಗೆ ಪಾತ್ರವಾಗಿದೆ. ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿರುವ ಸಿನಿಮಾಗಳಲ್ಲಿಯೇ ಕಾಂತಾರ ಕರ್ನಾಟಕದಲ್ಲಿ ಅತೀ ಹೆಚ್ಚು ಜನ ವೀಕ್ಷಿಸಿದ ಸಿನಿಮಾವಾಗಿ ಹೊರಹೊಮ್ಮಿದೆ. ಈ ಬ್ಗಗೆ ಹೊಂಬಾಳೆ ಫಿಲ್ಮ್ಸ್ ಟ್ವೀಟ್ ಮೂಲಕ ಮಾಹಿತಿ ಬಹಿರಂಗ ಪಡಿಸಿದೆ. 

ಈಗಾಗಲೇ ಕಾಂತಾರ ಎಲ್ಲಾ ಕಡೆ ಉತ್ತಮ ಪ್ರದರ್ಶನ ಕಾಣುತ್ತಿದೆ. ಅದರಲ್ಲೂ ಕರ್ನಾಟಕದಲ್ಲಿ ಅತೀ ಹೆಚ್ಚು ವೀಕ್ಷಿಸಿರುವುದು ಸಿನಿಮಾತಂಡಕ್ಕೆ ಹೆಮ್ಮೆಯ ವಿಚಾರವಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಹೊಂಬಾಳೆ ಫಿಲ್ಮ್ಸ್, 'ಈವರೆಗೆ ಹೊಂಬಾಳೆ ಫಿಲಮ್ಸ್ ನಿರ್ಮಿಸಿರುವ ಚಲನಚಿತ್ರಗಳ ಪೈಕಿ ಕರ್ನಾಟಕದಲ್ಲಿ ಅತ್ಯಂತ ಹೆಚ್ಚು ಜನ ವೀಕ್ಷಿಸಿದ ಚಿತ್ರ ಎಂಬ ಹೆಗ್ಗಳಿಕೆ. ಇನ್ನಷ್ಟು ಹೊಸ ದಾಖಲೆ ನಿರ್ಮಿಸುವ ಹಾದಿಯಲ್ಲಿ ಕಾಂತಾರ! ನಿಮ್ಮ  ಪ್ರೋತ್ಸಾಹಕ್ಕೆ ನಾವು ಸದಾ ಋಣಿ. ಧನ್ಯವಾದ ಕರ್ನಾಟಕ' ಎಂದು ಬರೆದುಕೊಂಡಿದ್ದಾರೆ. 

ತುಂಬಾ ಹೆಮ್ಮೆಯಾಗುತ್ತಿದೆ; ಕಾಂತಾರ ನೋಡಿ ಹೊಗಳಿದ ನಟಿ ಪೂಜಾ ಹೆಗ್ಡೆ

ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳನ್ನು ದೇಶದಾದ್ಯಂತ ಸದ್ದು ಮಾಡುತ್ತಿರುವ ಹೊಂಬಾಳೆ ಫಿಲ್ಮ್ಸ್ ದೊಡ್ಡ ಮಟ್ಟದಲ್ಲಿ ಬೆಳೆದು ನಿಂತಿದೆ. ಸ್ಯಾಂಡಲ್ ವುಡ್ ಪ್ರತಿಷ್ಠಿತ ಸಿನಿಮಾ ನಿರ್ಮಾಣ ಸಂಸ್ಥೆಯಾಗಿರುವ ಹೊಂಬಾಳೆ ಫಿಲ್ಮ್ಸ್ ಮೇಲೆ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ. ಕೆಜಿಎಫ್ ಸಿನಿಮಾ ಹೊಂಬಾಳೆ ಫಿಲ್ಮ್ಸ್‌ಗೆ ದೊಡ್ಡ ಮಟ್ಟದ ಸಕ್ಸಸ್ ಜೊತೆಗೆ ಜಾಗತಿಕ ಖ್ಯಾತಿ ತಂದುಕೊಟ್ಟಿತು. ಬಳಿಕ ದೇಶದ ಅನೇಕ ಸ್ಟಾರ್ ಕಲಾವಿದರ ಜೊತೆ ಸಿನಿಮಾ ಮಾಡಲು ಮುಂದಾಗಿದೆ. ಕೆಜಿಎಫ್ ಸಕ್ಸಸ್‌ನ ಖುಷಿಯಲ್ಲಿದ್ದ ಹೊಂಬಾಳೆಗೆ  ಅದರ ಬೆನ್ನಲ್ಲೇ ಮತ್ತೊಂದು ದೊಡ್ಡ ಮಟ್ಟದ ಹಿಟ್ ಸಿಕ್ಕಿರುವುದು ಸಂತೋಷಕ್ಕೆ ಪಾರವೇ ಇಲ್ಲವಾಗಿದೆ.

Kanatara; ಗರ್ನಾಲು ಸಾಹೇಬನ ಧರ್ಮ ಕಾಣುತ್ತಿಲ್ಲವೇಕೆ? ನಟ ಕಿಶೋರ್ ಪ್ರಶ್ನೆ

ಅಂದಹಾಗೆ ಕಾಂತಾರ ಕಲೆಕ್ಷನ್ ವಿಚಾರದಲ್ಲೂ ಭರ್ಜರಿ ಕಮಾಯಿ ಮಾಡಿದೆ. ಕರ್ನಾಟಕದ ಕಲೆಕ್ಷನ್ ವಿವರವನ್ನು ಸಿನಿಮಾತಂಡ ಬಹಿರಂಗ ಪಡಿಸಿಲ್ಲ. ಆದರೆ ದೊಡ್ಡ ಮಟ್ಟದ ಕಲೆಕ್ಷನ್ ಆಗಿದೆ. ದೇಶದಾದ್ಯಂತ ಒಟ್ಟು ಈಗಾಗಲೇ 170 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಆಗಿದೆ ಎನ್ನುವ ಮಾಹಿತಿ ಇದೆ. ಹಿಂದಿಯಲ್ಲೇ 20 ಕೋಟಿಗೂ ಅಧಿಕ ಗಳಿಕೆ ಮಾಡಿದೆ. ಇನ್ನು ತಮಿಳು ಮತ್ತು ತೆಲುಗಿನಲ್ಲೂ ಕಾಂತಾರ ಉತ್ತಮ ಹಣ ಗಳಿಸಿದೆ. ಸದ್ಯ ವಿದೇಶಗಳಲ್ಲೂ ಕಾಂತಾರ ಅಬ್ಬರ ಜೋರಾಗಿದೆ. ಎಲ್ಲಾ ಕಡೆಯಿಂದನೂ ಚಿತ್ರಕ್ಕೆ ಮೆಚ್ಚುಗೆಯ ಮಹಾಪೂರ ಹರಿದು ಬರುವ ಜೊತೆಗೆ ಹಣದ ಹೊಳೆಯು ಬರುತ್ತಿದೆ. ಇನ್ನು ಯಾವೆಲ್ಲ ದಾಖಲೆಗಳನ್ನು ಬರೆಯಲಿದೆ ಎಂದು ಕಾದು ನೋಡಬೇಕಿದೆ. 

   

Latest Videos
Follow Us:
Download App:
  • android
  • ios