Asianet Suvarna News Asianet Suvarna News

ಬಾಲಿವುಡ್‌ನಲ್ಲಿ ಮುಂದುವರೆದ ಕಾಂತಾರ ಅಬ್ಬರ; 4 ವಾರಕ್ಕೆ ರಿಷಬ್ ಶೆಟ್ಟಿ ಸಿನಿಮಾ ಗಳಿಸಿದೆಷ್ಟು?

ಕಾಂತಾರ ಸಿನಿಮಾ ಕೋಟಿ ಕೋಟಿ ಕಲೆಕ್ಷನ್ ಮಾಡಿದೆ. ಹಿಂದಿಯಲ್ಲಿ ರಿಷಬ್ ಶೆಟ್ಟಿ ಸಿನಿಮಾ ಭರ್ಜರಿ ಕಮಾಯಿ ಮಾಡಿದ್ದು 4 ವಾರಗಳಲ್ಲಿ ಉತ್ತಮ ಗಳಿಕೆ ಮಾಡಿದೆ. 

kantara collection in hindi; rishab shetty film earn 70 crores in 4 weeks sgk
Author
First Published Nov 10, 2022, 1:05 PM IST

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾದ ಹವಾ ಇನ್ನೂ ಕಮ್ಮಿ ಆಗಿಲ್ಲ. ಬಾಕ್ಸ್ ಆಫೀಸ್ ನಲ್ಲೂ ಕಾಂತಾರ ಅಬ್ಬರ ಮುಂದುವರೆದಿದೆ. ಸಿನಿಮಾ ರಿಲೀಸ್ ಆಗಿ ಒಂದೂವರೆ ತಿಂಗಳು ಕಳೆದರೂ ಇನ್ನೂ ಅನೇಕ ಕಡೆ  ಕಾಂತರಾ ಉತ್ತಮ ಪ್ರದರ್ಶನ ಕಾಣುತ್ತಿದೆ. ರಿಷಬ್​ ಶೆಟ್ಟಿ ನಟನೆ ಮತ್ತು ನಿರ್ದೇಶನಕ್ಕೆ ಪ್ರೇಕ್ಷಕರು ಫುಲ್​ ಮಾರ್ಕ್ಸ್​ ನೀಡಿದ್ದಾರೆ. ಈಗಾಗಲೇ ಕೋಟಿ ಕೋಟಿ ಬಾಚಿಕೊಳ್ಳುವ ಮೂಲಕ ಕಾಂತಾರ ಹೊಂಬಾಳೆ ಫಿಲ್ಮ್ಸ್‌ಗೆ ದೊಡ್ಡ ಲಾಭ ತಂದುಕೊಟ್ಟಿದೆ. ಕನ್ನಡ ಮಾತ್ರವಲ್ಲದೆ ಬೇರೆ ಬೇರೆ ಭಾಷೆಯಲ್ಲೂ ಸಿನಿಮಾಗೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಬಾಕ್ಸ್ ನಲ್ಲೂ ಭರ್ಜರಿ ಕಮಾಯಿ ಮಾಡಿದೆ. 

ಹಿಂದಿ ಬೆಲ್ಟ್‌ನಲ್ಲಿ ಕಾಂತಾರ ಚಿತ್ರಕ್ಕೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಜಿಎಫ್ ಸಿನಿಮಾ ಬಳಿಕ ಹಿಂದಿಯಲ್ಲಿ ಭರ್ಜರಿ ಕಮಾಯಿ ಮಾಡಿದ ಎರಡನೇ ಕನ್ನಡ ಸಿನಿಮಾ ಕಾಂತಾರವಾಗಿದೆ. ಕಾಂತಾರ ಈಗಾಗಲೇ 300 ಕೋಟಿಯ ಗಡಿ ದಾಟಿ 350 ಕೋಟಿಯತ್ತಾ ಮುನ್ನುಗ್ಗುತ್ತಿದೆ. ಹಿಂದಿ ಭಾಗದಲ್ಲಿ ಕಾಂತಾರ ಉತ್ತಮ ಕಲೆಕ್ಷನ್ ಮಾಡಿದೆ. ಸಿನಿಮಾ ರಿಲೀಸ್ ಆಗಿ 4 ವಾರಕ್ಕೆ ಹಿಂದಿಯಲ್ಲಿ 70 ಕೋಟಿ ರುಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ ಎಂದು ವರದಿಯಾಗಿದೆ. ವೀಕೆಂಡ್‌ಗೆ ಕಾಂತಾರ 67 ಕೋಟಿ ಬಾಚಿಕೊಂಡಿತ್ತು. ಇದೀಗ ಗಳಿಕೆ 70 ಕೋಟಿ ದಾಟಿದೆ ಎಂದು ಹೇಳಲಾಗುತ್ತಿದೆ. ಹಿಂದಿಯಲ್ಲಿ ಕನ್ನಡದ ಸಿನಿಮಾವೊಂದು ಈ ಪರಿ ಕಲೆಕ್ಷನ್ ಮಾಡಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರವಾಗಿದೆ.

1 ಕೋಟಿ ಟಿಕೆಟ್ ಮಾರಾಟ

ಕರ್ನಾಟಕದಲ್ಲಿ ಕಾಂತಾರ ಸಿನಿಮಾದ 1 ಕೋಟಿ ಟಿಕೆಟ್ ಮಾರಾಟವಾಗಿದೆ. ಈ ಮೂಲಕ ಅತೀ ಹೆಚ್ಚು ಟಿಕೆಟ್ ಮಾರಾಟವಾದ ಸಿನಿಮಾ ಕಾಂತಾರ ಎನ್ನುವ ಹೆಗ್ಗಳಿಕೆ ಗಳಿಸಿದೆ. ಈಗಾಗಲೇ ದೇಶ-ವಿದೇಶಗಳಲ್ಲಿ ಸದ್ದು ಮಾಡುತ್ತಿರುವ ಕಾಂತಾರಗೆ ಈ ದಾಖಲೆ ಮತ್ತಷ್ಟು ಖುಷಿ ತಂದಿದೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದೆ. 

Kantara; ಮತ್ತೊಂದು ದಾಖಲೆ ಬರೆದ ರಿಷಬ್ ಶೆಟ್ಟಿ, ಕರ್ನಾಟಕದಲ್ಲಿ 1 ಕೋಟಿ ಟಿಕೆಟ್ ಮಾರಾಟ

ಕಾಂತಾರ ಸಿನಿಮಾ ಸೆಪ್ಟಂಬರ್ 30ರಂದು ರಿಲೀಸ್ ಆಗಿದೆ. ಕನ್ನಡದಲ್ಲಿ ಮಾತ್ರ ರಿಲೀಸ್ ಆದ ಕಾಂತಾರ ದೊಡ್ಡ ಮಟ್ಟದಲ್ಲಿ ಸಕ್ಸಸ್ ಕಾಣುತ್ತಿದ್ದಂತೆ ಬೇರೆ ಬೇರೆ ಭಾಷೆಗೆ ಡಬ್ ಆಗಿ ರಿಲೀಸ್ ಆಯಿತು. ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿಯಲ್ಲಿ ಕಾಂತಾರ ರಿಲೀಸ್ ಆಗಿದೆ. ಪರಭಾಷೆಯಲ್ಲೂ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಕೇವಲ ಅಭಿಮಾನಿಗಳು ಮಾತ್ರವಲ್ಲದೇ ಸಿನಿಮಾ ಗಣ್ಯರು ಸಹ ಮೆಚ್ಚುಗೆ ವ್ಯಕ್ತಪಡಿಸಿದರು. ಸೂಪರ್ ಸ್ಟಾರ್ ರಜನಿಕಾಂತ್, ಧನುಷ್, ಅನುಷ್ಕಾ ಶೆಟ್ಟಿ, ಪ್ರಭಾಸ್, ಕಾರ್ತಿ, ನಾನಿ, ಕಂಗನಾ ರಣಾವತ್ ಸೇರಿದಂತೆ ಅನೇಕ ಕಲಾವಿದರೂ ಹಾಡಿಹೊಗಳಿದರು. 

Rashmika or Samantha ಸಮಂತಾ ಜೊತೆ ನಟಿಸಲು ಇಷ್ಟ ಯಾವುದೇ ಬ್ಯಾಗೇಜ್ ಇರುವುದಿಲ್ಲ: ರಿಷಬ್ ಶೆಟ್ಟಿ

ಕಾಂತಾರ ಬಗ್ಗೆ, 

ಕಾಂತಾರ ಸಿನಿಮಾದಲ್ಲಿ ರಿಷಬ್ ಶೆಟ್ಟಿ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ನಟ ಕಿಶೋರ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಮಿಂಚಿದ್ದಾರೆ. ಇನ್ನೂ ನಾಯಕಿಯಾಗಿ ಸಪ್ತಮಿ ಗೌಡ ಬಣ್ಣ ಹಣ್ಣ ಹಚ್ಚಿದ್ದಾರೆ. ಅಚ್ಯುತ್ ಕುಮಾರ್ ಗಮನಾರ್ಹ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಅನೇಕ ರಂಗಭೂಮಿ ಕಲಾವಿದರು ನಟಿಸಿದ್ದಾರೆ.  ಪ್ರತಿಯೊಂದು ಪಾತ್ರಗಳು ಸಹ ಪ್ರೇಕ್ಷಕರ ಹೃದಯ ಗೆದ್ದಿವೆ. ಪ್ರತಿಷ್ಠಿತ ಹೊಂಬಾಳೆ ಫಿಲ್ಮ್ಸ್ ಬ್ಯಾನರ್‌ನಲ್ಲಿ ಸಿನಿಮಾ ಮೂಡಿಬಂದಿದೆ.  


 

Follow Us:
Download App:
  • android
  • ios