Asianet Suvarna News Asianet Suvarna News

"ಕಾಂತಾರ" ಫ್ಯಾನ್ ಇಂಡಿಯಾ, ಅಕ್ಟೋಬರ್ 9ರಂದು ಹಿಂದಿ ಟ್ರೈಲರ್ ರಿಲೀಸ್

ಸ್ಯಾಂಡಲ್ ವುಡ್‌ನ ನಿರ್ದೇಶಕ, ನಟ ರಿಷಬ್ ಶೆಟ್ಟಿ ಅವರ ಕಾಂತಾರ ಸಿನಿಮಾ ಫ್ಯಾನ್ ಇಂಡಿಯಾ ಸಿನೆಮಾ ಅಗುವತ್ತ ದಾಪುಗಾಲು ಇಡುತ್ತಿದೆ. ಇದಕ್ಕೆ ಪೂರಕವಾಗಿ ಕಾಂತಾರ ಚಿತ್ರದ ಹಿಂದಿ ಟ್ರೈಲರ್ ಬಿಡುಗಡೆಗೆ ಸಿದ್ದವಾಗಿದೆ.

Kantara in hindi trailer released on october 9th gow
Author
First Published Oct 6, 2022, 11:18 PM IST

ಸ್ಯಾಂಡಲ್ ವುಡ್‌ನ ನಿರ್ದೇಶಕ, ನಟ ರಿಷಬ್ ಶೆಟ್ಟಿ ಅವರ ಕಾಂತಾರ ಸಿನಿಮಾ ಫ್ಯಾನ್ ಇಂಡಿಯಾ ಸಿನೆಮಾ ಅಗುವತ್ತ ದಾಪುಗಾಲು ಇಡುತ್ತಿದೆ. ಇದಕ್ಕೆ ಪೂರಕವಾಗಿ ಕಾಂತಾರ ಚಿತ್ರದ ಹಿಂದಿ ಟ್ರೈಲರ್ ಬಿಡುಗಡೆಗೆ ಸಿದ್ದವಾಗಿದೆ. ಈ ಬಗ್ಗೆ ಹೊಂಬಾಳೆ ಫಿಲ್ಮಂಸ್ ಟ್ವೀಟ್ ಮಾಡಿದ್ದು. ದೈವತ್ವದಿಂದ ಮಂತ್ರಮುಗ್ಧರಾಗಲು ತಯಾರಾಗಿ. ದೈವಿ ಶಕ್ತಿಯನ್ನು ಅನುಭವಿಸಿ ಮತ್ತು  ಸಾಕ್ಷಿಯಾಗಿ "ಕಾಂತಾರ" ಹಿಂದಿ ಟ್ರೈಲರ್   ಅಕ್ಟೋಬರ್ 9 ರಂದು ಬೆಳಿಗ್ಗೆ 9:10 ಕ್ಕೆ ಬಿಡುಗಡೆ ಮಾಡಲಾಗುತ್ತಿದೆ ಎಂದು ಬಹಿರಂಗಪಡಿಸಿದೆ. ಕಾಂತಾರವನ್ನು ಕನ್ನಡ ಮಾತ್ರವಲ್ಲದೆ ಇತರ ಭಾಷೆಯ ಜನ ಕೂಡ ಮೆಚ್ಚಿಕೊಂಡಿದ್ದು, ಈಗಾಗಲೇ ಕನ್ನಡ ಅಲ್ಲದೆ ಇತರ ಭಾಷೆಯ ದಿಗ್ಗಜರು ಕೂಡ ಸಿನೆಮಾಗೆ ಶಬ್ಬಾಸ್ ಗಿರಿ ಕೊಟ್ಟಿದ್ದಾರೆ. ಸೆಪ್ಟೆಂಬರ್ 30ರಂದು ಅದ್ಧೂರಿಯಾಗಿ ಬಿಡುಗಡೆಯಾಗಿದ್ದ ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣ ಮಾಡಿರುವ ಕಾಂತಾರ ಸಿನಿಮಾ ದೇಶದೆಲ್ಲೆಡೆ ಸದ್ದು ಮಾಡುತ್ತಿದೆ. ಸಿನಿಮಾ ನೋಡಿ ಪ್ರೇಕ್ಷಕರು ಉತ್ತಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ರಿಷಬ್ ಶೆಟ್ಟ ಅಭಿನಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.  ಚಿತ್ರ ವೀಕ್ಷಿಸಿದ ಪ್ರೇಕ್ಷಕರು ಸಾಮಾಜಿಕ ಜಾಲತಾಣದಲ್ಲಿ ಚಿತ್ರದ ಬಗ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಿದ್ದಾರೆ. ಸಿನಿಮಾದ ಹಾಡು ಹಾಗೂ ಬ್ಯಾಗ್ರೌಂಡ್ ಮ್ಯೂಸಿಕ್ ಕೂಡ ಪ್ರೇಕ್ಷಕರ ಹೃದಯ ಗೆದ್ದಿದೆ. ಟ್ರೈಲರ್ ಮೂಲಕವೇ ಭಾರಿ ನಿರೀಕ್ಷೆ ಹುಟ್ಟಿಹಾಕಿದ್ದ ಕಾಂತಾರಾ ಸಿನಿಮಾ ಈಗ ಚಿತ್ರಮಂದಿರಗಳಲ್ಲಿ ಅಬ್ಬರಿಸುತ್ತಿದೆ. 

 

ರಿಷಬ್ ಶೆಟ್ಟಿ ಸಿನಿಮಾವನ್ನು ವೀಕ್ಷಿಸಿದ ಪ್ರಭಾಸ್ ಹಾಡಿ ಹೊಗಳಿದ್ದಾರೆ. ಶೆಟ್ರ ನಟನೆಗೆ ಫಿದಾ ಆಗಿದ್ದಾರೆ. ಈ ಬಗ್ಗೆ ಪ್ರಭಾಸ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. 'ಕಾಂತಾರ ಸಿನಿಮಾವನ್ನ ನಾನು ತುಂಬಾ ಎಂಜಾಯ್ ಮಾಡಿದೆ. ಅದರಲ್ಲೂ ಕ್ಲೈಮ್ಯಾಕ್ಸ್' ಎಂದು ಬರೆದುಕೊಂಡಿದ್ದಾರೆ. ಇನ್ನು ಇಡೀ ತಂಡಕ್ಕೆ ನನ್ನ ಅಭಿನಂದನೆ, ಒಳ್ಳೆಯದಾಗಲಿ' ಎಂದು ಹೇಳಿದ್ದಾರೆ. 

 

Follow Us:
Download App:
  • android
  • ios