ವೈಭೋಗ ಟೈಟಲ್ ಲಾಂಚ್, ಮತ್ತೆ ಬಂದ 'ಯು ಟರ್ನ್-2' ಚಂದ್ರು ಓಬಯ್ಯ!

ವರ್ಷಕ್ಕೆ ನಾಲ್ಕೈದು ಸಿನಿಮಾ ಮಾಡಿದರೆ ಒಂದಷ್ಟು ಜನರಿಗೆ ಉದ್ಯೋಗ ಸಿಗಲಿದೆ, ವಿಜಯದಶಮಿ ಹಬ್ಬಕ್ಕೆ  ಮತ್ತೊಂದು ಚಿತ್ರ ಆರಂಭಿಸಲಾಗುವುದು. ಆದಾದ ನಂತರ ಒಂದು ವರ್ಷ ಯಾವುದೇ ಸಿನಿಮಾ ಕೈಗೆತ್ತಿಕೊಳ್ಳುವುದಿಲ್ಲ..

Karimani Malika movie chandru obayya comes with vaibhoga srb

ಯೂ ಟರ್ನ್-2, ರಾಮು ಅಂಡ್ ರಾಮು ಹಾಗೂ ಕರಿಮಣಿ ಮಾಲೀಕ ಚಿತ್ರಗಳ ನಂತರ ನಿರ್ದೇಶಕ  ಚಂದ್ರು ಓಬಯ್ಯ ಇದೀಗ ನಾಲ್ಕನೇ ಚಿತ್ರವನ್ನು  ಕೈಗೆತ್ತಿಕೊಂಡಿದ್ದಾರೆ. ಅದುವೇ 'ವೈಭೋಗ'. ಚಿತ್ರದ ಶೀರ್ಷಿಕೆ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. 'ಯೌವ್ವನದಲ್ಲಿ ಹುಟ್ಟೋ ಪ್ರೀತಿಗೋಸ್ಕರ ಹೆತ್ತವರನ್ನು ಮರೀಬೇಡ' ಎಂಬ ಟ್ಯಾಗ್ ಲೈನ್ ಹೊಂದಿರುವ ಈ ಚಿತ್ರವನ್ನು ಡಾ.ಚೇತನ್ ನಿಂಗೇಗೌಡ ಅವರು ನಿರ್ಮಿಸುತ್ತಿದ್ದಾರೆ. 

ಈ ಸಂದರ್ಭದಲ್ಲಿ ಮಾತನಾಡಿದ ಚಂದ್ರು ಓಬಯ್ಯ, ವೈಭೋಗ, ಒಂದು ಕಮರ್ಷಿಯಲ್ ಸಿನಿಮಾ, ಯೌವ್ವನಲ್ಲಿ ಹುಟ್ಟುವ ಪ್ರೀತಿಗೋಸ್ಕರ ಹೆತ್ತವರ ಮರಿಬೇಡ,  ಪ್ರೀತಿಯ ಜೊತೆಗೆ ಹೆತ್ತವರನ್ನು ಕಾಪಾಡಬೇಕು ಎಂದು ಚಿತ್ರದ ಮೂಲಕ ಹೇಳುವ ಪ್ರಯತ್ನ ಮಾಡುತ್ತಿದ್ದೇವೆ.  ನಿರ್ಮಾಪಕ  ಡಾ.ಚೇತನ್ ಅವರು ಕಥೆಯನ್ನು ಇಷ್ಟಪಟ್ಟು ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಶ್ರೇಯಸ್ ಮತ್ತು ಸಂಜನಾ ಕದಂ ನಾಯಕ,  ನಾಯಕಿಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ರೋಡಲ್ಲಿ ಆಟೋ ಓಡಿಸುತ್ತಿರುವ ರಾಧಿಕಾ ಕುಮಾರಸ್ವಾಮಿ ನೋಡಿ ಕಂಗಾಲಾದ ಜನರು!

ಈ ತಿಂಗಳ 20ರಿಂದ ಶೂಟಿಂಗ್ ಪ್ರಾರಂಭಿಸಿ ಚನ್ನಪಟ್ಟಣ, ಮೈಸೂರು ಸುತ್ತಮುತ್ತ 30 ದಿನಗಳ‌ ಕಾಲ‌ ಟಾಕಿ ಭಾಗ, ಅಲ್ಲದೆ  ಮಂಗಳೂರು ಸುತ್ತಮುತ್ತ 10 ದಿನದಲ್ಲಿ ಹಾಡು, ಪೈಟ್‍ಗಳನ್ನು ಚಿತ್ರೀಕರಣ ಮಾಡುವ ಉದ್ದೇಶವಿದೆ. ಈಗಾಗಲೇ  ರಾಮು ಅಂಡ್ ರಾಮು ಚಿತ್ರ ಸೆನ್ಸಾರ್ ಆಗಿದೆ. ಇನ್ನು 'ಕರೀಮಣಿ ಮಾಲಿಕ'ಚಿತ್ರದ  ಚಿತ್ರೀಕರಣ ಮುಗಿದಿದೆ' ಎಂದು ವಿವರಿಸಿದರು.

ವರ್ಷಕ್ಕೆ ನಾಲ್ಕೈದು ಸಿನಿಮಾ ಮಾಡಿದರೆ ಒಂದಷ್ಟು ಜನರಿಗೆ ಉದ್ಯೋಗ ಸಿಗಲಿದೆ, ವಿಜಯದಶಮಿ ಹಬ್ಬಕ್ಕೆ  ಮತ್ತೊಂದು ಚಿತ್ರ ಆರಂಭಿಸಲಾಗುವುದು. ಆದಾದ ನಂತರ ಒಂದು ವರ್ಷ ಯಾವುದೇ ಸಿನಿಮಾ ಕೈಗೆತ್ತಿಕೊಳ್ಳುವುದಿಲ್ಲ, ಮಾಡುತ್ತಿರುವ ಚಿತ್ರಗಳನ್ನು ಪೂರ್ಣಗೊಳಿಸುವ ಕಡೆಗೆ ಗಮನ ನೀಡಲಾಗುವುದು' ಎಂದೂ ಅವರು ಹೇಳಿಕೊಂಡರು. 

ಬ್ಯೂಟಿ ಸೀಕ್ರೆಟ್ ಬಿಚ್ಚಿಟ್ಟ ಕನ್ನಡದ ಸ್ವೀಟಿ, ಅಂತೂ ಇಂತೂ ಬಾಯ್ಬಿಟ್ರು ರಾಧಿಕಾ ಕುಮಾರಸ್ವಾಮಿ!
  
ನಾಯಕ ಶ್ರೇಯಸ್ 'ಇದೇ ಮೊದಲ ಬಾರಿಗೆ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದೇನೆ. ನಿರ್ದೇಶಕ ಓಬಯ್ಯ ಅವರು ನನಗಿನ್ನೂ  ಕಥೆ ಹೇಳಿಲ್ಲ. ಒಳ್ಳೆಯ ಚಿತ್ರವಾಗುವ ವಿಶ್ವಾಸವಿದೆ' ಎಂದು ಹೇಳಿದರು. ನಾಯಕಿ ಸಂಜನಾ ಕದಂ 'ನಾನು ರಂಗಭೂಮಿ‌ ಕಲಾವಿದೆ. ಮೈಸೂರಿನ ಹುಡುಗಿ, ಮಂಡ್ಯ ರಮೇಶ್ ಅವರ  ನಟನಾದಲ್ಲಿ ಅಭಿನಯ ಕಲಿತಿದ್ದೇನೆ.  ಮೊದಲ ಬಾರಿಗೆ ನಾಯಕಿಯಾಗುವ ಅವಕಾಶ ಸಿಕ್ಕಿದೆ. ಅದನ್ನು ಸದುಪಯೋಗಪಡಿಸಿಕೊಳ್ಳುತ್ತೇನೆ' ಎಂದರು.

ಹಿರಿಯ ಕಲಾವಿದ ನಾಗೇಂದ್ರ ಅರಸ್ 'ಕಿರಿತೆರೆಯಲ್ಲಿ ಬರುತ್ತಿರುವ ಬ್ರಹ್ಮಗಂಟು ಧಾರಾವಾಹಿಯಲ್ಲಿ ನಾಯಕಿಯ ಅಪ್ಪನ ಪಾತ್ರ ಮಾಡಿದ್ದೆ. ಈ ಚಿತ್ರದಲ್ಲಿ ನಾಯಕನ ಅಪ್ಪನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಒಳ್ಳೆಯ ಪಾತ್ರ, ಚಿತ್ರದಲ್ಲಿ ನಟಿಸಲು ಎದುರು ನೋಡುತ್ತಿದ್ದೇನೆ. ಚಂದ್ರು ಓಬಯ್ಯ ಅವರ ಜೊತೆ ಈ ಹಿಂದೆಯೂ ಕೆಲಸ ಮಾಡಿದ್ದೆ' ಎಂದರು.

ನಿರ್ಮಾಪಕ ಡಾ. ಚೇತನ್ ನಿಂಗೇಗೌಡ ಮಾತನಾಡಿ ಒಳ್ಳೆಯ ಕಥೆಯನ್ನು ಚಂದ್ರು ಓಬಯ್ಯ ತಂದಿದ್ದರು.  'ಅಪ್ಪ, ಅಮ್ಮ, ಅಲ್ಲದೆ ಅವಿಭಕ್ತ ಕುಟುಂಬದ ಮಹತ್ವ ಹೇಳುವ ಪ್ರಯತ್ನ ನಮ್ಮ ಚಿತ್ರದಲ್ಲಿದೆ' ಎಂದು ತಿಳಿಸಿದರು. ಹಿರಿಯ ಕಲಾವಿದ ಮೂಗು ಸುರೇಶ್ ಮಾತನಾಡಿ, 'ನಿರ್ದೇಶಕರು ಹಿರಿಯರಾಗಿರಲಿ, ಕಿರಿಯರಾಗಿರಲಿ ಕ್ಯಾಮರಾ ಮುಂದೆ ನಿಂತಾಗ ನಾನೊಬ್ಬ ಕಲಾವಿದ. 

ಸೈಮಾ ಅವಾರ್ಡ್ ಕನ್ನಡ-2024 ವಿಜೇತರು ಯಾರು? ಕುತೂಹಲಕ್ಕೆ ಉತ್ತರ ಇಲ್ಲಿದೆ!

ಅವರು ಹೇಳಿದಂತೆ ಮಾಡುವುದು ನನ್ನ ಕೆಲಸ. ನಿರ್ದೇಶಕರ ವಿಷಯದಲ್ಲಿ ಮೂಗು ತೂರಿಸಲ್ಲ. ಚಂದ್ರು ಓಬಯ್ಯ ಅವರ ಹಿಂದಿನ ಚಿತ್ರದಲ್ಲಿಯೂ ನಟಿಸಿದ್ದೇನೆ. ಅದರಲ್ಲಿ ನನ್ನ ಮತ್ತು ರೇಖಾದಾಸ್ ಕಾಂಬಿನೇಷನ್ ಇತ್ತು' ಎಂದರು. ಛಾಯಾಗ್ರಾಹಕ ನಿರಂಜನ್ ಬೋಪಣ್ಣ  ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ಒಟ್ಟಿನಲ್ಲಿ, ಸಿನಿಮಾ ಪ್ರೀತಿಯಿಂದ ಬಂದಿರುವ ಚಂದ್ರು ಓಬಯ್ಯ ಅವರು, ಒಂದಾದ ಮೇಲೆ ಮತ್ತೊಂದು ಚಿತ್ರ ಮಾಡುತ್ತಿದ್ದಾರೆ.

Latest Videos
Follow Us:
Download App:
  • android
  • ios