Asianet Suvarna News Asianet Suvarna News

ಡಾ. ರಾಜ್‌ಕುಮಾರ್ ಕುಟುಂಬದವರು ಎಂದಿಗೂ ಕೆಟ್ಟ ಪದ ಬಳಸಿಲ್ಲ: ಸಿಎಂ ಸಿದ್ದರಾಮಯ್ಯ

ಅದ್ಧೂರಿಯಾಗಿ ನಡೆಯಿತ್ತು ಪುನೀತ್ ರಾಜ್‌ಕುಮಾರ್ ಅವರ ಸಂಗ್ರಹಣೀಯ ಶಿಲ್ಪಗಳ ಅನಾವರಣ ಸಮಾರಂಭ. 
 

Karnataka CM Siddaramaiah talks about Dr Rajkumar and Puneeth family in statue inauguration vcs
Author
First Published Oct 17, 2023, 1:32 PM IST

ಪಿಆರ್‌ಕೆ ಸ್ಟುಡಿಯೋ ಮತ್ತು ಎನ್‌3ಕೆ ಡಿಸೈನ್ ಸ್ಟುಡಿಯೋ ವತಿಯಿಂದ ಆಯೋಜಿಸಲಾದ ಕರ್ನಾಟಕ ರತ್ನ ಡಾ. ಪುನೀತ್ ರಾಜ್‌ಕುಮಾರ್ ಸಂಗ್ರಹಣೀಯ ಶಿಲ್ಪಗಳ ಅನಾವರಣ ಕಾರ್ಯಕ್ರಮದಲ್ಲಿ  ಮುಖ್ಯಮಂತ್ರಿ ಸಿದ್ಧರಾಮಯ್ಯರವರು ಭಾಗಿಯಾಗಿದ್ದರು. ಪ್ಯಾಲೆಸ್ ರಸ್ತೆಯ ರಾಡಿಸನ್‌ ಬ್ಲ್ಯೂ- ಏಟ್ರಿಯಾ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ  ಸಿಎಂ ಡಾ.ರಾಜ್‌ಕುಮಾರ ಫ್ಯಾಮಿಲಿ ಮತ್ತು ಪುನೀತ್ ರಾಜ್‌ಕುಮಾರ್ ಬಗ್ಗೆ ಮಾತನಾಡಿದ್ದಾರೆ.

'ಪುನೀತ್ ರಾಜ್‌ಕುಮಾರ್ ಅವರು ನನಗೆ ಬಹಳ ಗೌರವದಿಂದ ಕಾಣುತ್ತಿದ್ದರು. ದೊಡ್ಡವರನ್ನು ಮತ್ತು ಸಹಕಲಾವಿದರನ್ನು ಗೌರವದಿಂದ ಕಾಣುತ್ತಿದ್ದ ಪ್ರವೃತ್ತಿಯನ್ನು ಬೆಳೆಸಿಕೊಂಡಿದ್ದರು. ಕಿರಿಯ ಕಲಾವಿದರಿಗೆ ಪ್ರೋತ್ಸಾಹ ನೀಡುತ್ತಿದ್ದರು. ಅವರನ್ನು ಕಳೆದುಕೊಂಡಿರುವುದು ಇಡೀ ಕರುನಾಡಿಗೆ ಆಗಿರುವ ನಷ್ಟ. ಆ ನಷ್ಟವನ್ನು ತುಂಬಲು ಸಾಧ್ಯವಿಲ್ಲ. ಉತ್ತಮ ನಟ ಹಾಗೂ ಮಾನವೀಯತೆಯುಳ್ಳ ವ್ಯಕ್ತಿಯನ್ನು ನಾಡು ಕಳೆದುಕೊಂಡಿದೆ. ಅವರ ಪ್ರತಿಮೆಯಿಂದ ಪುನೀತ್ ಅವರನ್ನು ಇನ್ನಷ್ಟು ಸ್ಮರಿಸುವ ಕೆಲಸವಾಗಿದೆ'  ಎಂದು ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.

ಸೀರೆಯಲ್ಲಿ ಎಷ್ಟು ಸೌಂದರ್ಯ ಇದೆ ಅಂತ ಅಶ್ವಿನಿ ಮೇಡಂ ನೋಡಿ ಅನ್ಸುತ್ತೆ; ನೆಟ್ಟಿಗರಿಂದ ಮೆಚ್ಚುಗೆ

'ರಾಜ್‌ಕುಮಾರ್ ಕುಟುಂಬದವರು ಎಂದಿಗೂ ಕೆಟ್ಟದನ್ನು ಬಯಸಿಲ್ಲ. ಕೆಟ್ಟ ಪದ ಬಳಸಿಲ್ಲ. ಪುನೀತ್ ರಾಜ್‌ಕುಮಾರ್ ಅವರ ತಂದೆ ರಾಜ್‌ಕುಮಾರ್ ಅವರಿಗಿಂತ ಒಂದು ಹೆಜ್ಜೆ ಮುಂದೆ ಹೋಗಿದ್ದರು. ರಾಜ್‌ ಕುಮಾರ್ ಜನಪ್ರಿಯ ಮೇರು ನಟ. ಪುನೀತ್ ತೀರಿಕೊಂಡಾಗ ಜನರ ಭಾವನೆಗಳನ್ನು ಕಂಡಾಗ ರಾಜ್ಕುಮಾರ್ ಅವರಿಗಿಂತಲೂ ಜನಪ್ರಿಯರಾಗಿದ್ದರು ಎಂಬ ಭಾವನೆ ಬಂದಿತ್ತು. ಪುನೀತ್ ಮರಣ ಹೊಂದಿದಾ ನಮ್ಮ ಮನೆಯಲ್ಲಿಯೇ ಯಾರೋ ಒಬ್ಬರು ತೀರಿಕೊಂಡಿದ್ದಾರೆ ಎಂಬಂತಿತ್ತು. ಎಲ್ಲಾ ಊರುಗಳಲ್ಲಿ ಪ್ರತಿಮೆ ಸ್ಥಾಪಿಸಿ ಕಟೌಟ್ ಹಾಕಿ ಗೋಳಾಡಿದ್ದು ಕಂಡಾಗ ಪುನೀತ್ ಅವರ ಜನ ಪ್ರಿಯತೆ ಅಪಾರ ಅಭಿಮಾನಿಗಳನ್ನು ಪಡೆದಿದ್ದಾರೆ ಎಂದು ತಿಳಿಯುತ್ತದೆ. ಬಹಳ ಬೇಗ ನಮ್ಮನ್ನು ಅಗಲಿದರು. ಬದುಕ್ಕಿದ್ದರೆ ನಾವು ನಿರೀಕ್ಷೆ ಮಾಡದಷ್ಟು ಎತ್ತರಕ್ಕೆ ಬೆಳೆಯುತ್ತಿದ್ದರು' ಎಂದರು ಮುಖ್ಯಮಂತ್ರಿ ಸಿದ್ದರಾಮಯ್ಯ.

ಭಾರತಾಂಬೆ ಮಡಿಲಿನಲ್ಲಿ ಪವರ್; ಮಹಿಳೆ ಮಾತನಾಡುವಾಗ ಹೂ ಕೊಟ್ಟ ಪುನೀತ್ ರಾಜ್‌ಕುಮಾರ್!

'ಕರ್ನಾಟಕ ರತ್ನ ಡಾ.ಪುನೀತ್ ರಾಜ್‌ಕುಮಾರ್ ಅವರ ಪ್ರತಿಮೆಯನ್ನು ಇಂದು ಅನಾವರಣ ಮಾಡಲಾಗಿದೆ.  ಅವರು ಅಪರೂಪದ ವ್ಯಕ್ತಿತ್ವ ಸರಳ ಸಜ್ಜನಿಕೆ ವಿನಯ ಕಾಣುವುದು ವಿರಳ.  ಸಾಮಾನ್ಯ ಜನರು ಸಂಕಷ್ಟದಲ್ಲಿದ್ದವರಿಗೆ ಸ್ಪಂದಿಸುವ ಉದಾತ್ತ ಭಾವನೆಯ ಪುನೀತ್ ಅವರಿಗಿದ್ದ ಅಭಿಮಾನಿ ಬಳಗ ಬಹಳ ದೊಡ್ಡದು. ಇವರು ಅಕಾಲಿಕ ಮರಣಕ್ಕೆ ತುತ್ತಾಗಿದ್ದಾಗ ಜನರು ತಮ್ಮ ಮನೆಯ ಸದಸ್ಯನನ್ನೇ ಕಳೆದುಕೊಂಡಷ್ಟು ದುಃಖಿಸಿದ್ದರು. ರಾಜ್ಯದ ಪ್ರತಿ ಮನೆಯಲ್ಲೂ ಕೂಡ ಪುನೀತ್ ಅವರ ಭಾವಚಿತ್ರವಿದ್ದು ಇಂದಿಗೂ ಜನರು ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿದ್ದಾರೆ. ಬಹುಶಃ ಇನ್ನೊಬ್ಬ ಪುನೀತ್ ಅವರಂಥ ವ್ಯಕ್ತಿಯನ್ನು ಕಾಣುವುದು ಕಷ್ಟ' ಎಂದಿದ್ದಾರೆ ಸಿಎಂ.

Follow Us:
Download App:
  • android
  • ios