Asianet Suvarna News Asianet Suvarna News

ಪುನೀತ್‌ಗೆ ಕರ್ನಾಟಕ ರತ್ನ; ರಜನಿಕಾಂತ್ ಸೇರಿ ಯಾರೆಲ್ಲ ಭಾಗಿಯಾಗುತ್ತಿದ್ದಾರೆ? ಇಲ್ಲಿದೆ ಅತಿಥಿಗಳ ಲಿಸ್ಟ್

ನವೆಂಬರ್ 1 ಸಂಜೆ 4 ಗಂಟೆಗೆ ವಿಧಾನ ಸೌಧದ ಮುಂಭಾಗದಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ  ಸಮಾರಂಭ  ನಡೆಯುತ್ತಿದೆ. ಈ ಸಮಾರಂಭದಲ್ಲಿ ಯಾರೆಲ್ಲ ಭಾಗಿಯಾಗಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇತ್ತು. ಇದೀಗ ಈ ಕುತೂಹಲಕ್ಕೆ ತೆರೆಬಿದ್ದಿದೆ.

Karnataka Ratna for Puneeth Rajkumar; here is the full guest list incuding Rajinikanth and Jr NTR sgk
Author
First Published Oct 31, 2022, 1:21 PM IST

ನವೆಂಬರ್ 1 ಕನ್ನಡ ರಾಜ್ಯೋತ್ಸವದ ದಿನ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಈ ಬಗ್ಗೆ ಈಗಾಗಲೇ ಸಿಎಂ ಬಸವರಾಜ್ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ನವೆಂಬರ್ 1 ಸಂಜೆ 4 ಗಂಟೆಗೆ ವಿಧಾನ ಸೌಧದ ಮುಂಭಾಗದಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ  ಸಮಾರಂಭ  ನಡೆಯುತ್ತಿದೆ. ಈ ಸಮಾರಂಭದಲ್ಲಿ ಯಾರೆಲ್ಲ ಭಾಗಿಯಾಗಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇತ್ತು. ಈ ವಿಶೇಷ ಸಮಾರಂಭಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ತೆಲುಗು ಸ್ಟಾರ್, ಅಪ್ಪು ಗೆಳೆಯ ಜೂ.ಎನ್ ಟಿ ಆರ್ ವಿಶೇಷ ಅತಿಥಿಗಳಾಗಿ ಆಗಮಿಸಲಿದ್ದಾರೆ ಎನ್ನುವ ಮಾಹಿತಿ ಬಹಿರಂಗವಾಗಿತ್ತು. ಇದೀಗ ಈ ಸುಂದರ ಸಮಾರಂಭದ ಅತಿಥಿಗಳ ಲಿಸ್ಟ್ ರಿವೀಲ್ ಆಗಿದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಸುವರ್ಣ ನ್ಯೂಸ್ ವೆಬ್‌ಗೆ ಸಿಕ್ಕಿದೆ. 

ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ  ಸಮಾರಂಭದಲ್ಲಿ ಅನೇಕ ಸಿನಿಮಾ ಗಣ್ಯರು ಹಾಗೂ ರಾಜಕೀಯ ಗಣ್ಯರು ಹಾಜರಾಗುತ್ತಿರುವುದು ಖಚಿತವಾಗಿದೆ. ವಿಶೇಷ ಆಹ್ವಾನಿತರಾಗಿ ಸೂಪರ್ ಸ್ಟಾರ್ ರಜನಿಕಾಂತ್, ತೆಲುಗು ಸ್ಟಾರ್ ಜೂ.ಎನ್ ಟಿ ಆರ್ ಹಾಗೂ ಸುಧಾ ಮೂರ್ತಿ ಭಾಗಿಯಾಗುತ್ತಿದ್ದಾರೆ. ಇನ್ನು ಉಳಿದಂತೆ ರಾಜಕೀಯ ಗಣ್ಯರು ಹಾಜರಿರಲಿದ್ದಾರೆ. ವಿಶ್ವೇಶ್ವರ ಹೆಗಡೆ ಕಾಗೇರಿ, ಕಂದಾಯ ಸಚಿವರಾದ ಆರ್ ಅಶೋಕ್, ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಸುನಿಲ್ ಕುಮಾರ್, ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಸೇರಿದಂತೆ ಇನ್ನು ಅನೇಕ ಗಣ್ಯರು ಅಪ್ಪುಗೆ ಕರ್ನಾಟಕ ರತ್ನ ಪ್ರದಾನ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. 

Puneeth Rajkumar; Jr NTR ಮನೆಯಲ್ಲಿ ಅಪ್ಪು ಫೋಟೋ, ಗೆಳೆಯನಿಗೆ ತೆಲುಗು ಸ್ಟಾರ್ ವಿಶೇಷ ಗೌರವ

ನವೆಂಬರ್ 1 ಸಂಜೆ 4 ಗಂಟೆಗೆ ವಿಧಾನಸೌಧದ ಮುಂಭಾಗ ಪ್ರಶಸ್ತಿ ಸಮಾರಂಭ ನಡೆಯುತ್ತಿದೆ. ಬಳಿಕ 5.30ರಿಂದ 6.30ರವರೆಗೆ ಸಾಂಸ್ಕೃತಿ ಕಾರ್ಯಕ್ರಮಗಳು ನಡೆಯಲಿದೆ. ಈಗಾಗಲೇ ಕಾರ್ಯಕ್ರಮಕ್ಕೆ ಬಿಗಿ ಪೋಲೀಸ್ ಬಂದೋಬಸ್ತ್ ಮಾಡಲಾಗಿದೆ.

APPUಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಮುಖ್ಯ ಅತಿಥಿಗಳಾಗಿ ಬರಲಿದ್ದಾರೆ ರಜನಿಕಾಂತ್‌, ಜೂನಿಯರ್‌ ಎನ್‌ಟಿಆರ್‌

 Karnataka Ratna for Puneeth Rajkumar; here is the full guest list incuding Rajinikanth and Jr NTR sgk

ಇನ್ನು ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಕೂಡ ನವೆಂಬರ್ 1ರಂದು ನಡೆಯುತ್ತಿದೆ. ರವೀಂದ್ರ ಕಲಾಕ್ಷೇತ್ರದಲ್ಲಿ ಈ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಸಂಜೆ 6 ಗಂಟೆಗೆ ನಡೆಯುವ ಸಮಾರಂಭದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೇ ಸಚಿವರಾದ ವಿ ಸುನಿಲ್ ಕುಮಾರ್ ಅವರು ಅದ್ಘಾಟನೆ ಮಾಡುತ್ತಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದರಾದ ತೇಜಸ್ವಿ ಸೂರ್ಯ ಭಾಗಿಯಾಗುತ್ತಿದ್ದಾರೆ. 

Follow Us:
Download App:
  • android
  • ios