Asianet Suvarna News Asianet Suvarna News

KGF ತಾತ ಕೃಷ್ಣ ಜಿ.ರಾವ್ ಆಸ್ಪತ್ರೆಗೆ ದಾಖಲು; ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರಿನ ಖಾಸಗಿ  ಆಸ್ಪತ್ರೆಗೆ ದಾಖಲಾದ ಕೆಜಿಎಫ್ ಖ್ಯಾತಿಯ ಕೃಷ್ಣಿ ಜಿ.ರಾವ್‌. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದೆ...

KGF fame Krishna G Rao hospitalized in Bengaluru vcs
Author
First Published Dec 1, 2022, 12:39 PM IST

ಕನ್ನಡ ಚಿತತ್ರರಂಗದಲ್ಲಿ ಇತಿಹಾಸ ಸೃಷ್ಟಿ ಮಾಡಿದ ಕೆಜಿಎಫ್ ಸಿನಿಮಾದಲ್ಲಿ ಪಂಚ್ ಡೈಲಾಗ್ ಹೊಡೆಯುವ ಮೂಲಕ ವಿಶ್ವಾದ್ಯಂತ ಹೆಸರು ಮಾಡಿರುವ ಕೃಷ್ಣ ಜಿ.ರಾವ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಏಕಾಏಕಿ ಆರೋಗ್ಯದಲ್ಲಿ ಏರುಪೇರು ಕಂಡ ಕಾರಣ ಮಧ್ಯೆರಾತ್ರಿ ಬೆಂಗಳೂರಿನ ಸೀತಾ ಸರ್ಕಲ್ ಬಳಿ ಇರುವ ವಿನಾಯಕ ಆಸ್ಪತ್ರೆಗೆ ದಾಖಲಾಗಿದ್ದಾರೆ. 

ನಿನ್ನೆ ಸಂಬಂಧಿಕರ ಮನೆಗೆ ಹೋಗಿದ್ದ ಕೃಷ್ಣ ಅವರು ಸುಸ್ತಾದ ಕಾರಣ ಮಧ್ಯೆರಾತ್ರಿ ವಿನಾಯಕ ಆಸ್ಪತ್ರೆಗೆ ದಾಖಲಾಗಿದ್ದು ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದಷ್ಟು ಬೇಗ ಗುಣಮುಖರಾಗಿ ಬರಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

KGF fame Krishna G Rao hospitalized in Bengaluru vcs

ಸಿನಿ ನಂಟು:

'ನಿಮಗೊಂದು ಸಲಹೇ ಕೊಡ್ತೀನಿ. ನೀವು ಮಾತ್ರ ಅವನಿಗೆ ಅಡ್ಡ ನಿಲ್ಲೋಕೆ ಹೋಗಬೇಡು ಸರ್.. ' ಕೆಜಿಎಫ್ ಸಿನಿಮಾ ನೋಡಿದವರಿಗೆ ಈ ಡೈಲಾಗ್ ಗೊತ್ತಿರುತ್ತದೆ. ತಾತ ಹೇಳಿರುವ ಈ ಡೈಲಾಗ್ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಕೆಜಿಎಫ್ ಪಾರ್ಟ್-1 ಮತ್ತು ಪಾರ್ಟ್-2ನ್ಲೂ ಕಾಣಿಸಿಕೊಂಡಿರುವ ನಟ ಕೃಷ್ಣ ಜಿ ರಾವ್ ಅವರು ಕೆಜಿಎಫ್ ತಾತ ಅಂತನೆ ಫೇಮಸ್ ಆಗಿದ್ದಾರೆ. ಇದೀಗ ಕೆಜಿಎಫ್ ತಾತ ಹೀರೋ ಆಗಿ ಕನ್ನಡ ಅಭಿಮಾನಿಗಳ ಮುಂದೆ ಬರ್ತಿದ್ದಾರೆ.  ಕೃಷ್ಣ ಜಿ ರಾವ್ ನಟನೆಯ ಹೊಸ ಸಿನಿಮಾ ಈಗಾಗಲೇ ಅನೌನ್ಸ್ ಆಗಿದ್ದು  ರಿಲೀಸ್‌ಗೆ ತಂಡ ಕಾಯುತ್ತಿದೆ. 

ಹತ್ತು ತಲೆಯುಳ್ಳ ರಾವಣನ ಅವತಾರದಲ್ಲಿ ರಿಲೀಸ್ ಆಗಿರುವ ಫಸ್ಟ್ ಲುಕ್ ನಲ್ಲಿ ಕೃಷ್ಣ ಜಿ ರಾವ್ ಕಿರೀಟ, ಗ್ಲಾಸ್ ಹಾಕಿ ಫೋಸ್ ಕೊಟ್ಟಿದ್ದು, ನ್ಯಾನೋ ಕಾರು ಕೂಡ ಹೈಲೇಟ್ ಆಗಿದ್ದು, ಒಂದಷ್ಟು ಪ್ರತಿಭಾನ್ವಿತ ಕಲಾವಿದರು ಪೋಸ್ಟರ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಕಾಕ್ರೋಚ್ ಸುಧಿ, ಗಿರೀಶ್ ಶಿವಣ್ಣ, ಪ್ರಶಾಂತ್ ಸಿದ್ದಿ, ಆನಂತು, ಅಪೂರ್ವ ಸೇರಿದಂತೆ ಹಲವರು ಸಿನಿಮಾದಲ್ಲಿ ನಟಿಸ್ತಿದ್ದಾರೆ. 

Follow Us:
Download App:
  • android
  • ios