Asianet Suvarna News Asianet Suvarna News

ಹೊಸ ಲುಕ್‌ಲ್ಲಿ ಕಾಣಿಸಿಕೊಂಡ ಸುದೀಪ್; ಯಾವ ಸಿನಿಮಾಗೆ? ಇಲ್ಲಿದೆ ಮಾಹಿತಿ

ವಿಕ್ರಾಂತ್ ರೋಣ ರಿಲೀಸ್ ಆಗಿ ಸೂಪರ್ ಸಕ್ಸಸ್ ಆದರೂ ಸಹ ಸುದೀಪ್ ಮುಂದಿನ ಸಿನಿಮಾ ಯಾವುದು ಎಂದು ರಿವೀಲ್ ಮಾಡಿಲ್ಲ. ಆದರೀಗ ಕಿಚ್ಚ ವಿಭಿನ್ನ ಲುಕ್‌ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. 

Kiccha Sudeep New look for Kabza movie photo viral sgk
Author
Bengaluru, First Published Aug 17, 2022, 4:23 PM IST

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ವಿಕ್ರಾಂತ್ ರೋಣ ಸಿನಿಮಾದ ಸಕ್ಸಸ್‌ನ ಖುಷಿಯಲ್ಲಿದ್ದಾರೆ. ಅನೂಪ್ ಭಂಡಾರಿ ಸಾರಥ್ಯದಲ್ಲಿ ಬಂದ‌ ವಿಕ್ರಾಂತ್ ರೋಣ ಸಿನಿಮಾ ಕನ್ನಡ ಸೇರಿದಂತೆ ಸೌತ್ ಇಂಡಿಯಾದ ಎಲ್ಲಾ ಭಾಷೆಗಳು ಹಾಗೂ ಹಿಂದಿಯಲ್ಲೂ ರಿಲೀಸ್ ಆಗಿತ್ತು. ಪ್ಯಾನ್ ಮಟ್ಟದಲ್ಲಿ ಅದ್ದೂರಿಯಾಗಿ ತೆರೆಗೆ ಬಂದ ವಿಕ್ರಾಂತ್ ರೋಣ ಸಿನಿಮಾಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕನ್ನಡ ಮಾತ್ರವಲ್ಲದೆ ಬೇರೆ ಬೇರೆ ಭಾಷೆಯ ಅಭಿಮಾನಿಗಳು ಸಹ ವಿಕ್ರಾಂತ್ ರೋಣನನ್ನು ಮೆಚ್ಚಿಕೊಂಡು ಕಿಚ್ಚನ ಅಭಿನಯಕ್ಕೆ ಫಿದಾ ಆಗಿದ್ದರು. ವಿಕ್ರಾಂತ್ ರೋಣ ಬಳಿಕ ಸುದೀಪ್ ಬಿಗ್ ಬಾಸ್ ಒಟಿಟಿಯಲ್ಲಿ ಬ್ಯುಸಿಯಾಗಿದ್ದಾರೆ. ಮೊದಲ ಬಾರಿಗೆ ಬಿಗ್ ಬಾಸ್ ಒಟಿಟಿ ಆರಂಭವಾಗಿದ್ದು ಸುದೀಪ್ ಅವರೇ ಹೋಸ್ಟ್ ಮಾಡುತ್ತಿದ್ದಾರೆ. ಆದರೆ ಸುದೀಪ್ ಮುಂದಿನ ಸಿನಿಮಾ ಯಾವುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.

ವಿಕ್ರಾಂತ್ ರೋಣ ರಿಲೀಸ್ ಆಗಿ ಸೂಪರ್ ಸಕ್ಸಸ್ ಆದರೂ ಸಹ ಸುದೀಪ್ ಮುಂದಿನ ಸಿನಿಮಾ ಯಾವುದು ಎಂದು ರಿವೀಲ್ ಮಾಡಿಲ್ಲ. ಆದರೀಗ ಕಿಚ್ಚ ವಿಭಿನ್ನ ಲುಕ್‌ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಹೌದು, ಸುದೀಪ್ ಹೊಸ ಲುಕ್ ಸಿಕ್ಕಾಪಟ್ಟೆ ವೈರಲ್ ಆಗಿದೆ. ಸಂಪೂರ್ಣವಾಗಿ ದಾಡಿ ಮತ್ತು ಮೀಸೆ ತೆಗೆದ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಸುದೀಪ್ ಈ ಲುಕ್ ಯಾವ ಸಿನಿಮಾಗೆ ಎನ್ನುವ ಕುತೂಹಲ ಮತ್ತಷ್ಟು ಹೆಚ್ಚಿಸಿದೆ. ಕಿಚ್ಚ ಸೈಲೆಂಟ್ ಆಗಿ ಮುಂದಿನ ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡಿದ್ರಾ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಹೆಚ್ಚಾಗಿದೆ. ಅಭಿಮಾನಿ ಜೊತೆ ಸುದೀಪ್ ಕ್ಯಾಮರಾಗೆ ಪೋಸ್ ನೀಡಿರುವ ಫೋಟೋ ಎಲ್ಲಾ ಕಡೆ ಹರಿದಾಡುತ್ತಿದೆ.

11.45ಕ್ಕೆ ನನಗೆ ಊಟ ಬಡಿಸಿಲ್ಲ ಅಂದರೆ ಕೊಲೆನೂ ಆಗ್ಬಹುದು; ಊಟದ ಸೀಕ್ರೆಟ್ ರಿವೀಲ್ ಮಾಡಿದ ಸುದೀಪ್

ಅಂದಹಾಗೆ ಕಿಚ್ಚನ ಈ ಲುಕ್ ಕಬ್ಜ ಸಿನಿಮಾಗಾಗಿ ಎನ್ನಲಾಗುತ್ತಿದೆ. ರಿಯಲ್ ಸ್ಟಾರ್ ಉಪೇಂದ್ರ ನಟನೆಯ ಕಬ್ಜ ಸಿನಿಮಾದಲ್ಲಿ ಸುದೀಪ್ ವಿಭಿನ್ನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಕಿಚ್ಚನ ಫಸ್ಟ್ ಲುಕ್ ರಿಲೀಸ್ ಆಗಿತ್ತು. ಭಾರ್ಗವ ಭಕ್ಷಿ ಎನ್ನುವ ಪಾತ್ರದಲ್ಲಿ ಕಿಚ್ಚ ನಟಿಸುತ್ತಿದ್ದಾರೆ. ರೆಟ್ರೋ ಶೈಲಿಯಲ್ಲಿ ಮೂಡಿಬರುತ್ತಿರುವ ಈ ಸಿನಿಮಾದಲ್ಲಿ ಕಿಚ್ಚ ಲುಕ್ ಕೂಡ ಅಷ್ಟೆ ಇಂಪ್ರೆಸಿವ್ ಆಗಿದೆ. ಫಸ್ಟ್ ಲುಕ್ ಬಳಿಕ ಕಿಚ್ಚನ ಭಾಗದ ಚಿತ್ರೀಕರಣ ಸಂಪೂರ್ಣವಾಗಿರಲಿಲ್ಲ. ವಿಕ್ರಾಂತ್ ರೋಣ ಚತ್ರದಲ್ಲಿ ಬ್ಯುಸಿಯಾಗಿದ್ದ ಕಿಚ್ಚ ಇದೀಗ ಮತ್ತೆ ಕಬ್ಜ ಸೆಟ್‌ಗೆ ಎಂಟ್ರಿ ಕೊಟ್ಟಿದ್ದಾರೆ. ಕಬ್ಜ ಸಿನಿಮಾದಿಂದ ಸುದೀಪ್ ಹೊರಬಂದಿದ್ದಾರೆ ಎನ್ನುವ ಸುದ್ದಿ ಸಹ ವೈರಲ್ ಆಗಿತ್ತು ಆದರೀಗ ಮತ್ತೆ ಶೂಟಿಂಗ್‌ಗೆ ಹಾಜರಾಗುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. 

ಬಿಗ್ ಬಾಸ್ ಒಟಿಟಿ ಹೋಸ್ಟ್ ಮಾಡಲು ಸುದೀಪ್ ಪಡೆದ ಸಂಭಾವನೆ ಎಷ್ಟು?

ಈ ಸಿನಿಮಾ ಬಳಿಕ ಸುದೀಪ್ ಯಾವ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವುದು ಕುಚೂಹಲ ಮೂಡಿಸಿದೆ. ಬಿಲ್ಲಾ ರಂಗ ಭಾಷ ಪ್ರಾರಂಭ ಮಾಡುತ್ತಾರಾ ಅಥವಾ ಬೇರೆ ಪ್ರಾಜೆಕ್ಟ್‌ ಕೈಗೆತ್ತಿಕೊಳ್ಳುತ್ತಾರಾ ಕಾದುನೋಡಬೇಕು.

Follow Us:
Download App:
  • android
  • ios