Asianet Suvarna News Asianet Suvarna News

Mafia: ಪ್ರಜ್ವಲ್ ದೇವರಾಜ್-ಅದಿತಿ ಪ್ರಭುದೇವ ಹೊಸ ಚಿತ್ರಕ್ಕೆ ಮುಹೂರ್ತ

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ 'ಮಾಫಿಯಾ' ಚಿತ್ರದ ಮುಹೂರ್ತ ಇತ್ತೀಚೆಗೆ ನೆರವೇರಿದೆ. ಬೆಂಗಳೂರಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ನಡೆದ ಮುಹೂರ್ತ ಸಮಾರಂಭದಲ್ಲಿ ಹಲವು ಗಣ್ಯರು ಪಾಲ್ಗೊಂಡು ಚಿತ್ರಕ್ಕೆ ಶುಭಕೋರಿದರು. 

Mafia Kannada Movie Muhuratha Starrer Prajwal Devaraj Aditi Prabhudeva gvd
Author
Bangalore, First Published Dec 4, 2021, 9:55 PM IST

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Prajwal Devaraj) ಅಭಿನಯದ 'ಮಾಫಿಯಾ' (Mafia) ಚಿತ್ರದ ಮುಹೂರ್ತ ಇತ್ತೀಚೆಗೆ ನೆರವೇರಿದೆ. ಬೆಂಗಳೂರಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ನಡೆದ ಮುಹೂರ್ತ ಸಮಾರಂಭದಲ್ಲಿ ಹಲವು ಗಣ್ಯರು ಪಾಲ್ಗೊಂಡು ಚಿತ್ರಕ್ಕೆ ಶುಭಕೋರಿದರು. ವಿಶೇಷವಾಗಿ ಪ್ರಜ್ವಲ್ ಅಭಿನಯದ 35 ನೇ ಚಿತ್ರವಾಗಿದೆ. ಈ ಚಿತ್ರದಲ್ಲಿ ಪ್ರಜ್ವಲ್ ಹೊಸ ಗೆಟಪ್‌ನಲ್ಲಿ ಮಿಂಚಲಿದ್ದಾರೆ. ಈಗಾಗಲೇ ಈ ಚಿತ್ರಕ್ಕಾಗಿ ಅವರು ಹೊಸ ಶೈಲಿಯಲ್ಲಿ ಹೇರ್‌ಸ್ಟೈಲ್‌ ಮಾಡಿಸಿಕೊಂಡಿದ್ದು, ವಿಭಿನ್ನವಾಗಿ ಕಾಣಿಸಿಕೊಂಡಿದ್ದಾರೆ. ಆ ಕೂದಲನ್ನು ಕ್ಯಾನ್ಸರ್‌ನಿಂದ ಕೂದಲು ಕಳೆದುಕೊಂಡ ರೋಗಿಗಳಿಗೆ ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.

'ಮಾಫಿಯಾ' ಚಿತ್ರದ ಶೀರ್ಷಿಕೆಯೇ ಹೇಳುವಂತೆ, ಇದು ಆಕ್ಷನ್ ಪ್ರಧಾನ ಕಥೆಯ ಚಿತ್ರವಾಗಿದೆ. ಅಂಡರ್‌ವರ್ಲ್ಡ್ ಸ್ಟೋರಿಯೂ ಚಿತ್ರದಲ್ಲಿದೆ. ಈ 'ಮಮ್ಮಿ' ಮತ್ತು 'ದೇವಕಿ' ಚಿತ್ರಗಳನ್ನು ನಿರ್ದೇಶಿಸಿ ಜನಪ್ರಿಯವಾಗಿರುವ ಲೋಹಿತ್ (Lohith) ನಿರ್ದೇಶನದಲ್ಲಿ ಈ ಚಿತ್ರ ಮೂಡಿಬರುತ್ತಿದೆ. 'ಇದು ಔಟ್‌ ಅಂಡ್‌ ಔಟ್‌ ಕಮರ್ಷಿಯಲ್‌ ಎಂಟರ್‌ಟೈನರ್‌. ಆರಂಭದಲ್ಲಿ ಪ್ರಜ್ವಲ್‌ ಅವರನ್ನು ಕಂಡರೆ ಭಯವಿತ್ತು. ಈಗ ಒಳ್ಳೆಯ ಸ್ನೇಹವಿದೆ. ಮೊದಲ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯಲಿದೆ. ಆ ನಂತರ ರಾಮೋಜಿ ರಾವ್‌ ಫಿಲಂ ಸಿಟಿಯಲ್ಲಿ ಪ್ಲ್ಯಾನ್‌ ಮಾಡಿದ್ದೇವೆ' ಎಂದು ಚಿತ್ರದ ಬಗ್ಗೆ ನಿರ್ದೇಶಕ ಲೋಹಿತ್ ಹೇಳಿದರು.

Arjun Gowda: ಬೆಳ್ಳಿಪರದೆ ಮೇಲೆ ಎಂಟ್ರಿ ಕೊಡಲು ಸಜ್ಜಾದ ಪ್ರಜ್ವಲ್ ದೇವರಾಜ್

ನಾನು ಈ ಹಿಂದೆ ಲೋಹಿತ್‌ ಮಾಡಿರುವ ಚಿತ್ರಗಳನ್ನು ನೋಡಿದ್ದೇನೆ. ಸಾಕಷ್ಟು ಅಧ್ಯಯನ ಮಾಡಿಯೇ ಅವರು ಸ್ಕ್ರಿಪ್ಟ್ ಮಾಡಿದ್ದಾರೆ. 'ಮಾಫಿಯಾ' ಅಂದಾಗ ಕೇವಲ ಹೊಡೆದಾಟ ಬಡಿದಾಟದ ಸಿನಿಮಾನಾ ಎಂಬ ಭಾವನೆ ಬರಬಹುದು. ಖಂಡಿತಾ ಅಲ್ಲ, ಸಾಕಷ್ಟು ಹೊಸ ವಿಚಾರಗಳನ್ನು ಹೇಳಿದ್ದಾರೆ. ಇದು ಬೇರೆ ತರಹದ ಮಾಫಿಯಾ ಎಂದು ಪ್ರಜ್ವಲ್‌ ದೇವರಾಜ್‌ ಹೇಳಿದರು. ನಟಿ ಅದಿತಿ ಪ್ರಭುದೇವ (Aditi Prabhudeva) ಇದೇ ಮೊದಲ ಬಾರಿಗೆ ಪ್ರಜ್ವಲ್‌ ದೇವರಾಜ್‌ಗೆ ನಾಯಕಿಯಾಗಿ ಚಿತ್ರದಲ್ಲಿ ನಟಿಸುತ್ತಿರುವ ಖುಷಿಯನ್ನು ಹಂಚಿಕೊಂಡರು. 'ಜಂಟಲ್​ಮ್ಯಾನ್' ಚಿತ್ರಕ್ಕೆ ಸಂಭಾಷಣೆ ಬರೆದಿದ್ದ ಮಾಸ್ತಿ 'ಮಾಫಿಯಾ' ಚಿತ್ರಕ್ಕೂ ಸಂಭಾಷಣೆ ಬರೆಯುತ್ತಿದ್ದಾರೆ.

Mafia Kannada Movie Muhuratha Starrer Prajwal Devaraj Aditi Prabhudeva gvd

ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್. ಬಿ ನಿರ್ಮಾಣ ಮಾಡುತ್ತಿರುವ ಈ ಚಿತ್ರಕ್ಕೆ ಡಿಫ‌ರೆಂಟ್‌ ಡ್ಯಾನಿ ಸಾಹಸ ನಿರ್ದೇಶನ,  ಅನೂಪ್ ಸೀಳಿನ್ ಸಂಗೀತ ಸಂಯೋಜನೆ ಹಾಗೂ ತರುಣ್‌ ಕ್ಯಾಮೆರಾ ಕೈಚಳಕವಿದೆ. ಚಿತ್ರದ ಮುಹೂರ್ತ ಸಮಾರಂಭಕ್ಕೆ ದುನಿಯಾ ವಿಜಯ್‌ (Duniya Vijay) ಹಾಗೂ ಪ್ರಿಯಾಂಕಾ ಉಪೇಂದ್ರ (Priyanka Upendra) ಹಾಗೂ ನಿರ್ಮಾಪಕ ಕೆ.ಪಿ.ಶ್ರೀಕಾಂತ್ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ಡಿಸೆಂಬರ್ 6ರಿಂದ ಚಿತ್ರೀಕರಣ ಆರಂಭಿಸಲು ತಯಾರಿ ಮಾಡಿಕೊಂಡಿದ್ದೇನೆ. ಬೆಂಗಳೂರು, ಮೈಸೂರು ಮತ್ತು ರಾಮೋಜಿ ಫಿಲ್ಮ್ ಸಿಟಿಯಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ನಿರ್ದೇಶಕ ಲೋಹಿತ್ ತಿಳಿಸಿದ್ದಾರೆ. 

Mafia: ಹೊಸ ಲುಕ್‌ನಲ್ಲಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್

ಇನ್ನು ಖದರ್‌ ಕುಮಾರ್‌ ನಿರ್ದೇಶನದ 'ವೀರಂ' (Veeram) ಸಿನಿಮಾದಲ್ಲಿ ಪ್ರಜ್ವಲ್​ ದೇವರಾಜ್ ನಟಿಸುತ್ತಿದ್ದು, ಪ್ರಜ್ವಲ್‌ಗೆ ನಾಯಕಿಯಾಗಿ ಡಿಂಪಲ್ ಕ್ಚೀನ್ ರಚಿತಾ ರಾಮ್‌ (Rachita Ram) ನಟಿಸುತ್ತಿದ್ದಾರೆ. ಹಾಗೂ ಪ್ರಿಯಾಂಕಾ ತಿಮ್ಮೇಶ್ (Priyanka Thimmesh) ಜೊತೆಯಾಗಿ ನಟಿಸಿರುವ 'ಅರ್ಜುನ್ ಗೌಡ' (Arjun Gowda) ಚಿತ್ರವು ಇದೇ ಡಿಸೆಂಬರ್‌ನಲ್ಲಿ ತೆರೆ ಕಾಣಲಿದ್ದು, ನಿರ್ದೇಶಕ ಶಂಕರ್ (Shankar) ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಅದ್ಧೂರಿ ಚಿತ್ರಗಳನ್ನು ನಿರ್ಮಿಸಿ ಹೆಸರಾದ ರಾಮು ಫಿಲಂಸ್ ಸಂಸ್ಥೆಯ ಕೋಟಿ ನಿರ್ಮಾಪಕ ಎಂದೇ ಹೆಸರುವಾಸಿಯಾದ ರಾಮು (Ramu) ಅವರು ಬಂಡವಾಳ ಹೂಡಿದ್ದಾರೆ.

Follow Us:
Download App:
  • android
  • ios