Asianet Suvarna News Asianet Suvarna News

ಹೊಂಬಾಳೆಯ ಮತ್ತೊಂದು ಸಿನಿಮಾದಲ್ಲಿ ಫಹಾದ್; ಸಿಬಿಐ ಅಧಿಕಾರಿಯಾಗಿ ಕನ್ನಡಿಗರ ಮುಂದೆ 'ಪುಷ್ಪ' ಸ್ಟಾರ್

ಮಲಯಾಳಂ ಖ್ಯಾತ ನಟ ಫಹಾದ್ ಫಾಸಿಲ್ ಹೊಂಬಾಳೆ ಫಿಲ್ಮ್ಸ್‌ನ ಮತ್ತೊಂದು ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ.  

malayalam actor fahad fazil likely to act in SriMurali's Bagheera film sgk
Author
First Published Jan 25, 2023, 4:43 PM IST

ದಕ್ಷಿಣ ಭಾರತೀಯ ಸಿನಿಮಾರಂಗ ಖ್ಯಾತ ನಟ, ದಕ್ಷಿಣದ ಎಲ್ಲಾ ಭಾಷೆಯಲ್ಲೂ ಮಿಂಚಿರುವ ಫಹಾದ್ ಫಾಸಿಲ್ ಕನ್ನಡ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಹೊಂಬಾಳೆ ಫಿಲ್ಮ್ಸ್ ನಿರ್ಮಾಣದಲ್ಲಿ ಬರ್ತಿರುವ ಸಿನಿಮಾದಲ್ಲಿ ಫಹಾದ್ ನಟಿಸುತ್ತಿದ್ದಾರೆ. ಅಂದಹಾಗೆ ಫಹಾದ್ ಈಗಾಗಲೇ ಧೂಮ್ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಬಳಿಕ ಮತ್ತೊಂದು ಹೊಂಬಾಳೆ ಫಿಲ್ಮ್ಸ್ ‌ನಲ್ಲಿ ನಟಿಸುತ್ತಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ಅದು ಮತ್ಯಾವುದು ಅಲ್ಲ ಶ್ರೀಮುರಳಿ ನಟನೆಯ ಬಘೀರ. ಹೌದು ಈ ಸಿನಿಮಾದಲ್ಲಿ ಫಹಾದ್ ಕೂಡ ನಟಿಸುತ್ತಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ. 

ಮೂಲಗಳ ಪ್ರಕಾರ ಫಹಾದ್ ಬಘೀರ ಸಿನಿಮಾದಲ್ಲಿ ಸಿಬಿಐ ಆಫೀಸರ್ ಆಗಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಈ ಬಗ್ಗೆ ಸಿನಿಮಾತಂಡದ ಕಡೆಯಿಂದ ಇನ್ನೂ ಅಧಿಕೃತ ಮಾಹಿತಿ ಬಹಿರಂಗವಾಗಿಲ್ಲ. ಫಹಾದ್ ಆಪಾರ ಸಂಖ್ಯೆಯ ಅಭಿಮಾನಿ ಬಳಗ ಹೊಂದಿದ್ದಾರೆ. ಕನ್ನಡದಲ್ಲಿ ಸಿನಿಮಾ ಮಾಡದಿದ್ದರೂ ಅಭಿಮಾನಿಗಳ ಸಂಖ್ಯೆ ಕಡಿಮೆ ಇಲ್ಲ. ವಿಕ್ರಮ್ ಮತ್ತು ಪುಷ್ಪ ಸಿನಿಮಾ ಮೂಲಕ ಅಭಿಮಾನಿಗಳ ಹೃದಯ ಗೆದ್ದಿರುವ ಫಹಾದ್ ಬೇಡಿಕೆಯನ್ನು ಹೆಚ್ಚಿಸಿಕೊಂಡಿದ್ದಾರೆ. 

ಇದೀಗ ಗಘೀರ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನುವ ಸುದ್ದಿ ಅಭಿಮಾನಿಗಳಿಗೆ ಥ್ರಿಲ್ ನೀಡಿದೆ. ಅಂದಹಾಗೆ  ಶ್ರೀಮುರಳಿ ಸದ್ಯ ಕಾಲಿಗೆ ಏಟುಮಾಡಿಕೊಂಡಿದ್ದು ವಿಶ್ರಾಂತಿ ಪಡೆಯುತ್ತಿದ್ದಾರೆ. ಇತ್ತೀಚಿಗಷ್ಟೆ ಶಸ್ತ್ರ ಚಿಕಿತ್ಸೆ  ಆಗಿದ್ದು ಅನೇಕ ದಿನಗಳು ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ. ವಿಶ್ರಾಂತಿ ಬಳಿಕ ಶ್ರೀಮುರಳಿ ಶೂಟಿಂಗ್‌ಗೆ ಮರಳಲಿದ್ದು ಆಗ ಫಹಾದ್ ಕೂಡ ಚಿತ್ರೀಕರಣ ಸೆಟ್ ಸೇರಲಿದ್ದಾರೆ ಎನ್ನಲಾಗಿದೆ. ಅಂದಹಾಗೆ ಈ ಸಿನಿಮಾದಲ್ಲಿ ಶ್ರೀಮುರಳಿ ಕೂಡ ಪೊಲೀಸ್ ಆಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿಬಿಐ ಅಧಿಕಾರಿಯಾಗಿ ಫಹಾದ್ ಸಾಥ್ ನೀಡಲಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ.

Bagheera; ಶ್ರೀಮುರಳಿ ಹುಟ್ಟುಹಬ್ಬಕ್ಕೆ ಸಿಕ್ತು 'ಬಘೀರ' ಪೋಸ್ಟರ್ ಗಿಫ್ಟ್

ಬಘೀರ ಚಿತ್ರಕ್ಕೆ ಸೂರಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಸಿನಿಮಾಗೆ ಪ್ರಶಾಂತ್ ನೀಲ್ ಕಥೆ ಬೆರಿದ್ದಾರೆ. ಉಗ್ರಂ ಸಿನಿಮಾ ಬಳಿಕ ಪ್ರಶಾಂತ್ ನೀಲ್ ಮತ್ತು ಶ್ರೀಮುರಳಿ ಕಾಂಬಿನೇಷನ್ ನಲ್ಲಿ ಬರ್ತಿರುವ ಸಿನಿಮಾ ಇದಾಗಿದೆ.ಅಂದಹಾಗೆ ಈ ಸಿನಿಮಾದಲ್ಲಿ ಶ್ರೀಮುರಳಿಗೆ ನಾಯಕಿಯಾಗಿ ರುಕ್ಮಿಣಿ ವಸಂತ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ರುಕ್ಮಿಣಿ, ರಕ್ಷಿತ್ ಶೆಟ್ಟಿ ನಟನೆಯ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ರಕ್ಮಿಣಿ ಅವರ ಪೋಸ್ಟರ್ ವೈರಲ್ ಆಗಿತ್ತು. ಇದೀಗ ಬಘೀರ ಸಿನಿಮಾದಲ್ಲಿ ಕಾಣಿಸಿಕೊಳ್ಳುವ ಮೂಲಕ ಶ್ರೀಮುರಳಿ ಜೊತೆ ರೊಮ್ಯಾನ್ಸ್ ಮಾಡುತ್ತಿದ್ದಾರೆ.

ರೋರಿಂಗ್ ಸ್ಟಾರ್ ಶ್ರೀಮುರಳಿ ಕಾಲಿಗೆ ಪೆಟ್ಟು: 'ಬಘೀರ'ನಿಗೆ ಬೇಕು ಮೂರು ತಿಂಗಳು ರೆಸ್ಟ್

ಈಗಾಗಲೇ ಬಘೀರ ಸಿನಿಮಾದಿಂದ ಪೋಸ್ಟರ್ ಮಾತ್ರ ರಿಲೀಸ್ ಆಗಿದೆ. ಶ್ರೀಮುರಳಿ ಮಾಸ್ಕ್ ಧರಿಸಿರುವ ಪೋಸ್ಟರ್ ಮಾತ್ರ ರಿಲೀಸ್ ಆಗಿದೆ. ಈ ಸಿನಿಮಾ ಕೂಡ ಬ್ಲ್ಯಾಕ್ ಶೇಡ್ ನಲ್ಲಿದೆ. ಸದ್ಯ ಎರಡು ಹಂತದ ಚಿತ್ರೀಕರಣ ಮುಗಿಸಿದ್ದು ಶ್ರೀಮುರಳಿ ಚೇತರಿಸಿಕೊಂಡ ಬಳಿಕ ಮತ್ತೆ ಚಿತ್ರೀಕರಣ ಪ್ರಾರಂಭವಾಗಲಿದೆ. 

 

Follow Us:
Download App:
  • android
  • ios