ಹೊಂಬಾಳೆ ಜೊತೆ ಮಾನುಷಿ ಚಿಲ್ಲರ್ ಸಿನಿಮಾ; ಪೃಥ್ವಿರಾಜ್‌ಗೆ ಜೋಡಿಯಾಗ್ತಾರಾ ವಿಶ್ವ ಸುಂದರಿ?
ನಿರ್ಮಾಪಕ ವಿಜಯ್ ಕಿರಗಂದೂರು ಇತ್ತೀಚಿಗೆ ವಿಶ್ವ ಸುಂದರಿ, ಬಾಲಿವುಡ್ ನಟಿ ಮಾನುಷಿ ಚಿಲ್ಲರ್ ಭೇಟಿಯಾಗಿದ್ದಾರೆ. ಇಬ್ಬರ ಭೇಟಿಯ ಫೋಟೋವನ್ನು ಹೊಂಬಾಳೆ ಫಿಲ್ಮ್ಸ್ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದೆ. ಈ ಫೋಟೋ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಸ್ಯಾಂಡಲ್‌ವುಡ್‌ನ ಪ್ರತಿಷ್ಠಿತ ಹೊಂಬಾಳೆ ಫಿಲ್ಮ್ಸ್ (Hombale Films) ಸಾಲು ಸಾಲು ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದ್ದಾರೆ. ವಿಜಯ್ ಕಿರಗಂದೂರು ಒಡೆತನದ ಹೊಂಬಾಳೆ ಫಿಲ್ಮ್ಸ್ ಈಗಾಗಲೇ ಅನೇಕ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದೆ. ಕೆಜಿಎಫ್ ಸಿನಿಮಾ ಮೂಲಕ ದೇಶ-ವಿದೇಶಗಳಲ್ಲಿ ಪ್ರಸಿದ್ಧಿ ಪಡೆದಿರುವ ಹೊಂಬಾಳೆ ಫಿಲ್ಮ್ಸ್ ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು ಹಾಗೂ ಮಲಯಾಳಂ ಸಿನಿಮಾ ಸ್ಟಾರ್‌ಗಳ ಜೊತೆಯೂ ಸಿನಿಮಾ ಮಾಡುತ್ತಿದೆ. ಕೆಜಿಎಫ್ (KGF) ಮೂಲಕ ದೇಶದ ಗಮನ ಸೆಳೆದಿರುವ ಹೊಂಬಾಳೆ ಫಿಲ್ಮ್ಸ್ ಸಿನಿಮಾಗಳ ಮೇಲೆ ನಿರೀಕ್ಷೆ ಕೂಡ ದುಪ್ಪಟ್ಟಾಗಿದೆ. ದಕ್ಷಿಣ ಭಾರತದ ಎಲ್ಲಾ ಭಾಷೆಯರ ಜೊತೆ ಸಿನಿಮಾ ಮಾಡುತ್ತಿರುವ ಹೊಂಬಾಳೆ ಫಿಲ್ಮ್ಸ್ ಹಿಂದಿಯಲ್ಲಿ ಸಿನಿಮಾ ಯಾವಾಗ, ಯಾರ ಜೊತೆ ಸಿನಿಮಾ ಮಾಡಲಿದ್ದಾರೆ ಎಂದು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಈ ನಡುವೆ ಹೊಂಬಾಳೆ ಫಿಲ್ಮ್ಸ್ ಅಭಿಮಾನಿಗಳಿಗೆ ಕುತೂಹಲ ಹೆಚ್ಚಿಸುವ ಫೋಟೋ ಶೇರ್ ಮಾಡಿದೆ.
ಹೌದು, ನಿರ್ಮಾಪಕ ವಿಜಯ್ ಕಿರಗಂದೂರು (Vijay Kiragandur) ಇತ್ತೀಚಿಗೆ ವಿಶ್ವ ಸುಂದರಿ, ಬಾಲಿವುಡ್ ನಟಿ ಮಾನುಷಿ ಚಿಲ್ಲರ್ (Manushi Chillar) ಭೇಟಿಯಾಗಿದ್ದಾರೆ. ಇಬ್ಬರ ಭೇಟಿಯ ಫೋಟೋವನ್ನು ಹೊಂಬಾಳೆ ಫಿಲ್ಮ್ಸ್ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದೆ. ಈ ಫೋಟೋ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಂದಹಾಗೆ ಮಾನುಷಿ ಬೆಂಗಳೂರಿನ ಹೊಂಬಾಳೆ ಕಚೇರಿಗೆ ಆಗಮಿಸಿದ್ದರು. ಈ ಫೋಟೋ ಶೇರ್ ಮಾಡುತ್ತಿದ್ದಂತೆ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ. ಮಾನುಷಿ ಜೊತೆ ಯಾವ ಸಿನಿಮಾ ಮಾಡಲಿದ್ದಾರೆ ಎಂದು ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರೆ.
'ನಮ್ಮ ವಿಶ್ವ ಸುಂದರಿ ಮಾನುಷಿ ಜೊತೆ ಒಂದು ಕ್ವಿಕ್ ಮೀಟಿಂಗ್. ಹೊಂಬಾಳೆ ಕಚೇರಿಯಲ್ಲಿ ವಿಶ್ವ ಸುಂದರಿ ಮಾನುಷಿ ಚಿಲ್ಲರ್' ಎಂದು ಬರೆದುಕೊಂಡಿದ್ದಾರೆ. ಅಂದಹಾಗೆ ಹೊಂಬಾಳೆ ಫಿಲ್ಮ್ಸ್ ಬ್ಯಾನರ್‌ನಲ್ಲಿ ಈಗಾಗಲೇ ಸಾಲು ಸಾಲು ಸಿನಿಮಾಗಳು ಬರ್ತಿವೆ. ಮುಂದಿನ ಯಾವ ಸಿನಿಮಾದಲ್ಲಿ ಮಾನುಷಿ ನಟಿಸಲಿದ್ದಾರೆ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಕಾಡುತ್ತಿದೆ.
'ಟೈಸನ್' ಆ್ಯಕ್ಷನ್ ಪ್ಯಾಕ್ಡ್ ಸೋಶಿಯೋ ಥ್ರಿಲ್ಲರ್ ಸಿನಿಮಾ: ಇಂಟ್ರಸ್ಟಿಂಗ್ ಮಾಹಿತಿ ಬಿಚ್ಚಿಟ್ಟ ನಟ ಪೃಥ್ವಿರಾಜ್
ಪೃಥ್ವಿರಾಜ್ ಸಿನಿಮಾದಲ್ಲಿ ಮಾನುಷಿ?
ಸದ್ಯ ಹರಿದಾಡುತ್ತಿರುವ ಮಾಹಿತಿ ಪ್ರಕಾರ ಹೊಂಬಾಳೆ ಫಿಲ್ಮ್ಸ್‌ನಲ್ಲಿ ಬರ್ತಿರುವ ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್ (Prithviraj Sukumaran) ಅವರ ಟೈಸನ್ (Tyson) ಸಿನಿಮಾದಲ್ಲಿ ಮಾನುಷಿ ನಟಿಸುತ್ತಾರಾ ಎನ್ನಲಾಗಿದೆ. ಪೃಥ್ವಿರಾಜ್ ಕೂಡ ಇತ್ತೀಚಿಗಷ್ಟೆ ಬೆಂಗಳೂರಿಗೆ ಆಗಮಿಸಿದ್ದರು. ಸಿನಿಮಾ ಪ್ರಮೋಷನ್‌ಗೆ ಎಂದು ಪೃಥ್ವಿರಾಜ್ ಬೆಂಗಳೂರಿಗೆ ಬಂದಿದ್ದರು. ಅದೇ ಸಮಯದಲ್ಲಿ ಮಾನುಷಿ ಕೂಡ ಬೆಂಗಳೂರಿಗೆ ಬಂದಿರುವುದು ಈ ಅನುಮಾನಕ್ಕೆ ಕಾರಣವಾಗಿದೆ.
ಮಾನುಷಿ ಈಗಾಗಲೇ ಒಂದು ಸಿನಿಮಾದಲ್ಲಿ ಮಿಂಚಿದ್ದಾರೆ. ಅಕ್ಷಯ್ ಕುಮಾರ್ ನಟನೆಯ ಪೃಥ್ವಿರಾಜ್ ಸಿನಿಮಾ ಮೂಲಕ ಮಾನುಷಿ ಮೊದಲ ಬಾರಿಗೆ ಸಿನಿಮಾದಲ್ಲಿ ಬಣ್ಣಹಚ್ಚಿದರು. ಈ ಸಿನಿಮಾದಲ್ಲಿ ರಾಣಿಯಾಗಿ ಮಾನುಷಿ ಮಿಂಚಿದ್ದರು. ಆದರೆ ಈ ಸಿನಿಮಾ ಹೇಳಿಕೊಳ್ಳುವಷ್ಟು ಯಶಸ್ಸು ಕಂಡಿಲ್ಲ. ಬಾಕ್ಸ್ ಆಫೀಸ್‌ನಲ್ಲೂ ಈ ಸಿನಿಮಾ ನೆಲಕಚ್ಚಿದೆ.
ಮಾನುಷಿ ಚಿಲ್ಲರ್ 2017ರಲ್ಲಿ ಫೆಮಿನಾ ಮಿಸ್ ಇಂಡಿಯಾ ಾದರು. ಬಲಿಕ 2017ರಲ್ಲೇ ಮಿಸ್ ವರ್ಲ್ಡ್ ಕಿರೀಟ ಮುಡಿಗೇರಿಸಿಕೊಂಡರು. ಬಳಿಕ ವಿಶ್ವ ಮಟ್ಟದಲ್ಲಿ ಖ್ಯಾತಿಗಳಿಸಿದರು. ಸ್ಟಾರ್ ಆಗಿ ಹೊರಹೊಮ್ಮಿದ ಮಾನುಷಿ 4 ವರ್ಷಗಳ ಬಳಿಕ ಸಿನಿಮಾದಲ್ಲಿ ಕಾಣಿಸಿಕೊಂಡರು. ಇದೀಗ ಕನ್ನಡದ ಹೊಂಬಾಳೆ ಫಿಲ್ಮ್ಸ್ ಆಫೀಸ್‌ನಲ್ಲಿ ಕಾಣಿಸಿಕೊಂಡಿರುವುದು ಅಚ್ಚರಿ ಮೂಡಿಸಿದೆ.
ಆ. 5ಕ್ಕೆ ಜಗ್ಗೇಶ್ ನಟನೆಯ ರಾಘವೇಂದ್ರ ಸ್ಟೋರ್ಸ್ ರಿಲೀಸ್!
ಹೊಂಬಾಳೆ ಫಿಲ್ಮ್ಸ್‌ನಲ್ಲಿ ಸದ್ಯ ರಿಷಬ್ ಶೆಟ್ಟಿ ಅವರ ಕಾಂತಾರ, ಜಗ್ಗೇಶ್ ಮತ್ತು ಸಂತೋಷ್ ಆನಂದ್ ರಾಮ್ ಕಾಂಬಿನೇಷನ್‌ನ ರಾಘವೇಂದ್ರ ಸ್ಟೋರ್, ಪ್ರಭಾಸ್ ಜೊತೆ ಸಲಾರ್, ಶ್ರೀಮುರಳಿ ಅವರ ಬಘೀರ, ಪೃಥ್ವಿರಾಜ್ ಜೊತೆ ಟೈಸನ್, ರಕ್ಷಿತ್ ಶೆಟ್ಟಿ ಜೊತೆ ರಿಚರ್ಡ್ ಆಟಂನಿ ಹಾಗೂ ತಮಿಳು ನಿರ್ದೇಶಕಿ ಸುಧಾ ಕೊಂಗಾರ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಮಾನುಷಿ ಯಾವ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.