'ದೈವ' ಎಂದ ಕೂಡಲೇ ಇದು ಪೌರಾಣಿಕ ಚಿತ್ರವಲ್ಲ. ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳಿರುವ ಒಂದು ಕಮರ್ಷಿಯಲ್ ಸಿನಿಮಾ. ಈಗಾಗಲೇ ಚಿತ್ರೀಕರಣ ಮುಗಿದಿರುವ ಈ ಚಿತ್ರ ಈಗ ರೀರೆಕಾರ್ಡಿಂಗ್‌ನಿಂದ ಸಿಂಗಾರಗೊಳ್ಳುತ್ತಿದೆ.

ಕಲ್ಪವೃಕ್ಷ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಶ್ರೀಮತಿ ಜಯಮ್ಮ ಪದ್ಮರಾಜ್ ನಿರ್ಮಿಸಿರುವ, ರಾಮಪ್ಪ ಸೋಮಪ್ಪ ಮೇಗಲಮನಿ, ಸೋಮಶೇಖರ್ ಜಿ ಪಟ್ಟಣಶೆಟ್ಟಿ ಅವರ ಸಹ ನಿರ್ಮಾಣವಿರುವ ಹಾಗೂ ಎಂಜೆ ಅವರು ನಿರ್ದೇಶನದ ಜೊತೆಗೆ ನಾಯಕನಾಗಿ ನಟಿಸಿರುವ 'ದೈವ' ಚಿತ್ರದ ಟೀಸರ್ ಬಿಡುಗಡೆ ಆಗಿದೆ. ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕರಾದ ಗುರು ದೇಶಪಾಂಡೆ, ಹರಿ ಸಂತೋಷ್, ಭರ್ಜರಿ ಚೇತನ್, ಜಡೇಶ್ ಕೆ ಹಂಪಿ ಹಾಗೂ ನಿರ್ದೇಶಕರ ಸಂಘದ ಅಧ್ಯಕ್ಷರಾದ ಎನ್ ಆರ್ ಕೆ ವಿಶ್ವನಾಥ್ 'ದೈವ' ಚಿತ್ರದ ಟೀಸರ್ ಅನ್ನು ಅನಾವರಣ ಮಾಡಿ ತಮ್ಮ ಪ್ರೋತ್ಸಾಹದ ನುಡಿಗಳ ಮೂಲಕ ಚಿತ್ರ ಯಶಸ್ವಿಯಾಗಲೆಂದು ಶುಭ ಹಾರೈಸಿದರು.

ಎಂ ಟೆಕ್ ಮುಗಿಸಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಎಂಜೆ ನಾಯಕ ಅಭಿನಯ ಹಾಗೂ ನಿರ್ದೇಶನದ ಈ ಚಿತ್ರದ ಟೀಸರ್ ಶಿಕ್ಷಕರ ದಿನದಂದೇ ಬಿಡುಗಡೆಯಾಯಿತು. ಟೀಸರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ಇದೊಂದು ಪಕ್ಕಾ ದೇಸಿ ಕಥಾಹಂದರ ಹೊಂದಿರುವ ಚಿತ್ರ. 'ದೈವ' ಚಿತ್ರದಲ್ಲಿ ಕಾಲಭೈರವನ ಆರಾಧಕನಾಗಿ ಜೋಗಯ್ಯನ ಪಾತ್ರದಲ್ಲಿ ಎರಡು ಗೆಟಪ್‌ಗಳಲ್ಲಿ ನಾನು ಅಭಿನಯಿಸಿದ್ದೇನೆ.

'ದೈವ' ಎಂದ ಕೂಡಲೇ ಇದು ಪೌರಾಣಿಕ ಚಿತ್ರವಲ್ಲ. ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳಿರುವ ಒಂದು ಕಮರ್ಷಿಯಲ್ ಸಿನಿಮಾ. ಈಗಾಗಲೇ ಚಿತ್ರೀಕರಣ ಮುಗಿದಿರುವ ಈ ಚಿತ್ರ ಈಗ ರೀರೆಕಾರ್ಡಿಂಗ್‌ನಿಂದ ಸಿಂಗಾರಗೊಳ್ಳುತ್ತಿದೆ. ಸದ್ಯದಲ್ಲೇ ಪ್ರಥಮ ಪ್ರತಿ ಸಿದ್ದವಾಗಲಿದೆ‌. ನಮ್ಮ ತಾಯಿ ಜಯಮ್ಮ ಪದ್ಮರಾಜ್ ಅವರು ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಸುರಭಿ, ನೀತು ರಾಯ್, ಬಲ ರಾಜ್ವಾಡಿ, ಮಂಜುರಾಜ್ ಸೂರ್ಯ, ಅರುಣ್ ಬಚ್ಚನ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಕನ್ನಡದ ಐದು ಜನಪ್ರಿಯ ನಿರ್ದೇಶಕರು ನಮ್ಮ 'ದೈವ' ಚಿತ್ರದ ಟೀಸರ್ ಬಿಡುಗಡೆ ಮಾಡಿಕೊಟ್ಟಿದ್ದಾರೆ.


ಅವರಿಗೆ ಹಾಗೂ ಚಿತ್ರರಂಗದ ನನ್ನ ಗುರುಗಳಾದ ರವಿ ಶ್ರೀವತ್ಸ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ನಿರ್ದೇಶಕ ಹಾಗೂ ನಾಯಕ ಎಂಜೆ ನಾಯಕ ಹೇಳಿದರು. ನಾನು ಈ ಚಿತ್ರದಲ್ಲಿ ಎನ್‌ಜಿಓ ಮೂಲಕ ಹಳ್ಳಿ ಮಕ್ಕಳಿಗೆ ವಿಧ್ಯಾಬ್ಯಾಸಕ್ಕೆ ಸಹಾಯ ಮಾಡುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. 'ದೈವ' ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ಪತ್ರಕರ್ತ, ನಟ ಮಂಜುರಾಜ್ ಸೂರ್ಯ (ವಿ.ಸಿ.ಎನ್ ಮಂಜು) ತಿಳಿಸಿದರು. ಇನ್ನು ಸುರಭಿ, ನೀತು ರಾಯ್‌, ಬಲ ರಾಜ್ವಾಡಿ, ಮಂಜುರಾಜ್‌ ಸೂರ್ಯ, ಅರುಣ್‌ ಬಚ್ಚನ್‌ ತಾರಾಬಳಗದಲ್ಲಿದ್ದಾರೆ.