ಸ್ಯಾಂಡಲ್‌ವುಡ್‌ನ ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ. ಎದೆ ನೋವು ಕಾಣಿಸಿಕೊಂಡ ಕಾರಣ ಹಂಸಲೇಖ ಅವರನ್ನು ತಕ್ಷಣ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಸ್ಯಾಂಡಲ್‌ವುಡ್‌ನ ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ. ಎದೆ ನೋವು ಕಾಣಿಸಿಕೊಂಡ ಕಾರಣ ಹಂಸಲೇಖ ಅವರನ್ನು ತಕ್ಷಣ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಂಸಲೇಖ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಅವರ ಅಭಿಮಾನಿಗಳಲ್ಲಿ ಮತ್ತು ಆಪ್ತ ವಲಯದಲ್ಲಿ ಆತಂಕ ಮನೆ ಮಾಡಿದೆ. ಆದರೆ ಏನು ತೊಂದರೆ ಇಲ್ಲ, ಆತಂಕ ಪಡಬೇಕಾಗಿಲ್ಲ ಎಂದು ವೈದ್ಯರು ಸೂಚಿಸಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.

Hamsalekha: ಶೂದ್ರ ಪದವನ್ನು ಎಲ್ಲ ನಿಘಂಟುಗಳಿಂದ ತೆಗೆದು ಹಾಕಿ

Add Asianetnews Kannada as a Preferred SourcegooglePreferred

ಗ್ಯಾಸ್ಟ್ರಿಕ್ ಸಮಸ್ಯೆಯಿಂದಾಗಿ ಹಂಸಲೇಖ ಅವರಿಗೆ ಎದೆನೋವು ಕಾಣಿಸಿಕೊಂಡಿದೆ ಎನ್ನಲಾಗಿದೆ. ಆದರೆ ಈ ಹಿಂದೆ ಹಂಸಲೇಖ ಒಪನ್ ಹಾರ್ಟ್ ಸರ್ಜರಿ ಮಾಡಿಸಿಕೊಂಡಿದ್ದರು. ಹಾಗಾಗಿ ಎದೆ ನೋವು ಕಾಣಿಸಿಕೊಂಡ ತಕ್ಷಣ ಆತಂಕ ಮನೆ ಮಾಡಿತ್ತು. ಸದ್ಯ ರಾಜಾಜಿನಗರ ಫಸ್ಟ್ ಬ್ಲಾಕ್ ಅಪೋಲೊ ಆಸ್ಪತ್ರೆಯಲ್ಲಿ ಹಂಸಲೇಖ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯವಾಗಿದ್ದಾರೆ ಗಾಬರಿ ಪಡಬೇಕಾಗಿಲ್ಲ ಎಂದು ವೈದ್ಯರು ಸೂಚಿಸಿದ್ದಾರೆ.

ಅಂದು ಗೋಕಾಕ್‌ ಚಳುವಳಿ, ಇಂದು ಕುಪ್ಪಳಿ ಕಹಳೆ: ಹಂಸಲೇಖ

ಸದ್ಯ ಆಸ್ಪತ್ರೆಯ ಜನರಲ್ ವಾರ್ಡ್ ನಲ್ಲೇ ಒಂದು ದಿನ ರೆಸ್ಟ್ ಮಾಡುವಂತೆ ವೈದ್ಯರು ಸಲಹೆ ಕೊಟ್ಟಿದ್ದಾರೆ. ವೈದ್ಯರ ಸಲಹೆ ಮೇರೆಗೆ ಒಂದು ದಿನದ ಮಟ್ಟಿಗೆ ಹಂಸಲೇಖ ಅವರು ಆಸ್ಪತ್ರೆಯಲ್ಲಿ ಉಳಿಯಲಿದ್ದಾರೆ.