Asianet Suvarna News Asianet Suvarna News

ನನ್ನ ಪಂಪನಾಣೆ, ನನ್ನ ಪದ ಬಳಕೆ ಉದ್ದೇಶ ಪೂರಿತವಲ್ಲ: ಕ್ಷಮೆ ಯಾಚಿಸಿದ ಹಂಸಲೇಖ

ತ್ಯಾಗ, ಸಹನೆಯ ಸಂಸ್ಕೃತಿಯನ್ನು ಜಗತ್ತಿಗೆ ನೀಡಿದ ಜೈನ ಸುಮುದಾಯಕ್ಕೆ ಶಿರವಾಗಿ ಕ್ಷಮೆ ಕೋರುತ್ತೇನೆ ಎಂದು ಹಂಸಲೇಖ ಹೇಳಿದ್ದಾರೆ. 

Music Director Hamsalekha apologizes for controversial comment about jain community mrq
Author
First Published Jul 20, 2024, 9:25 AM IST | Last Updated Jul 21, 2024, 10:44 AM IST

ಬೆಂಗಳೂರು: ಜೈನ ಸಮುದಾಯದ ಕುರಿತು ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಸಂಗೀತ ನಿರ್ದೇಶಕ ಹಂಸಲೇಖ ಕ್ಷಮೆ ಕೇಳಿದ್ದಾರೆ. ಈ ಸಂಬಂಧ ಲಿಖಿತ ಹಾಗೂ ವಿಡಿಯೋ ಮೂಲಕ ತಮ್ಮ ಹೇಳಿಕೆಯನ್ನು ಹಂಸಲೇಖ ಬಿಡುಗಡೆಗೊಳಿಸಿದ್ದಾರೆ. ಸೋಮವಾರ ಗೌರಿ ಚಿತ್ರದ ಸಾಂಗ್ ಲಾಂಚ್ ಕಾರ್ಯಕ್ರಮದ ವೇಳೆ ಮಾತನಾಡಿದ್ದ ಹಂಸಲೇಖ, ಜೈನರ ಫಿಲಾಸಫಿಯಲ್ಲಿ 24 ಜನ್ಮಗಳಿವೆ ಅಂತಾರೆ ಅದೆಲ್ಲ ಬುಲ್ ಶಿಟ್ ಎಂಬ ಪದ ಬಳಸಿದ್ದರು. ಈ ಹೇಳಿಕೆ ಜೈನ ಸಮುದಾಯದ ಜನತೆಯ ಕೆಂಗಣ್ಣಿಗೆ ಗುರಿಯಾಗಿತ್ತು. ಇದರಿಂದ ಎಚ್ಚೆತ್ತ ಹಂಸಲೇಖ ಜೈನ ಸಮುದಾಯದ ಜನತೆ ಬಳಿ ಕ್ಷಮೆ ಯಾಚಿಸಿದ್ದಾರೆ. 

ಕ್ಷಮೆಯಿರಲಿ, ಹಂಸಲೇಖ ಹೇಳಿಕೆ ಹೀಗಿದೆ…

ನನ್ನ ಪಂಪನಾಣೆ, ನನ್ನ ಪದ ಬಳಕೆ ಉದ್ದೇಶ ಪೂರಿತವಲ್ಲ. ಗಲಾಟೆ, ಒತ್ತಡದ ಆ ಕ್ಯಾಮೆರಾಗಳ ಗುಂಪಿನಲ್ಲಿ ಆ ಮಾತು ತೂರಿ ಬಂದಿದೆ.  ತ್ಯಾಗ, ಸಹನೆಯ ಸಂಸ್ಕೃತಿಯನ್ನು ಜಗತ್ತಿಗೆ ನೀಡಿದ ಜೈನ ಸುಮುದಾಯಕ್ಕೆ ಶಿರವಾಗಿ ಕ್ಷಮೆ ಕೋರುತ್ತೇನೆ ಎಂದು ಹಂಸಲೇಖ ಹೇಳಿದ್ದಾರೆ. 

ಸಿಟ್ಟನ್ನ ಸ್ಕ್ರಿಪ್ಟ್ ಮಾಡಬೇಕು, ದ್ವೇಷವನ್ನ ಕ್ಯಾರೆಕ್ಟರ್ ಮಾಡಬೇಕು: ದರ್ಶನ್‌ಗೆ ಹಂಸಲೇಖ ಕಿವಿಮಾತು

ಪ್ರಿಯ ಮಾಧ್ಯಮಗಳೇ,  ದಯಮಾಡಿ, ನಾನು ದುಡುಕಿ ಮಾತಾಡಿದ ಆ Bullshit ಪದವನ್ನು Delete ಮಾಡಿ. ಕನ್ನಡದ ಕಾವ್ಯಪರಂಪರೆಯ ಬೇರು ಕಾಂಡಗಳಾಗಿರುವ ಜೈನಕವಿ ಮುನಿ ಪರಂಪರೆಗೆ ಆಗಿರುವ ಗಾಯವನ್ನು ವಾಸಿ ಮಾಡಲು ಈ ಮೂಲಕ ಕೋರುತ್ತಿದ್ದೇನೆ. ಆಡು ಮಾತುಗಳನ್ನು COIN ಮಾಡುವ ನನ್ನಂತ ಸಿನಿಮಾ ರೈಟರ್‌ಗಳಿಗೆ ಇದು ಶಾಸ್ತಿ ಮತ್ತು ಶಾಪ ಎಂದು ನಾನು ಭಾವಿಸಿದ್ದೇನೆ. ಆ ಮಾತು ನನ್ನ ಬಾಯಿಂದ ಅಲ್ಲಿ ಹೊರಟ ಹಿನ್ನೆಲೆ ಹೀಗಿದೆ. 

ಆ ಕಾರ್ಯಕ್ರಮ ಮುಗಿಸಿ ಹೊರ ಬರುವಾಗ ಚಾನೆಲ್ ಅವರು Individual Biteಗಾಗಿ ಕೈ ಹಿಡಿದು ಎಳೆದಾಡಿದರು. ಆಗ ಸಿಟ್ಟು ತಡೆದುಕೊಂಡು ಹೊರ ಬಂದೆ. ನನ್ನ ಸಹಾಯಕ , ನನ್ನನ್ನ ಹೊಗಳಿದ. ಸಿಟ್ಟು ತಡೆಯಲಾಗಲಿಲ್ಲ ಆದರೂಈ ತಡೆದುಕೊಂಡಿದ್ದು ಒಳ್ಳೆದಾಯ್ತು ಸಾರ್ ಎಚಿದ. ಆಗ ನಾನು ಆತನಿಗೆ ಸಿಟ್ಟು ಹೋಗಿ ಬರೋ ಬುಲೆಟ್ಟು ಎಂದು ನಗಿಸಿದೆ. ನಾನು ಇನ್ನೂ ಮುಂದುವರೆದು, ಸಿಟ್ಟು ಒಂದು ಬುಲ್ಶಿಟ್ಟು ಎಂದೆ. ಆದರೆ ಆ ಪದ ಅಲ್ಲಿ ಬರಬಾರದಿತ್ತು. ಇಷ್ಟೆ ನಡೆದಿದ್ದು. ದಯವಿಷ್ಟು ಕ್ಷಮಿಸಿ ಎಂದು ಹಂಸಲೇಖ ಕೇಳಿಕೊಂಡಿದ್ದಾರೆ.

ಪ್ಯಾನ್ ಇಂಡಿಯಾದಿಂದ ದೇಹ, ದಾಡಿ ಬೆಳೆಸ್ತಿದ್ದಾರೆ ನಟರು, ಇದೊಂದು ಹುಚ್ಚು: ಕಲಾವಿದರಿಗೆ ಹಂಸಲೇಖ ಮಾತಿನೇಟು

Latest Videos
Follow Us:
Download App:
  • android
  • ios