Asianet Suvarna News Asianet Suvarna News

ಸಿಟ್ಟನ್ನ ಸ್ಕ್ರಿಪ್ಟ್ ಮಾಡಬೇಕು, ದ್ವೇಷವನ್ನ ಕ್ಯಾರೆಕ್ಟರ್ ಮಾಡಬೇಕು: ದರ್ಶನ್‌ಗೆ ಹಂಸಲೇಖ ಕಿವಿಮಾತು

ಕನ್ನಡದ ಸ್ಟಾರ್ ನಟ ದರ್ಶನ್ ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣವಾಗಿ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನ ಕಂಬಿ ಹಿಂದಿದ್ದಾರೆ. ಈ ಪ್ರಕರಣದ ವಿಚಾರವಾಗಿ ಸುದೀಪ್, ಶಿವಣ್ಣ, ಜಗ್ಗೇಶ್ ಬಳಿಕ ಇದೀಗ ಸಂಗೀತ ನಿರ್ದೇಶಕ ಹಂಸಲೇಖ ಪ್ರತಿಕ್ರಿಯೆ ನೀಡಿದ್ದಾರೆ. 
 

music director hamsalekha talks over darshan over renukaswamy murder case at mandya gvd
Author
First Published Jun 30, 2024, 7:52 PM IST

ಮಂಡ್ಯ (ಜೂ.30): ಕನ್ನಡದ ಸ್ಟಾರ್ ನಟ ದರ್ಶನ್ ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣವಾಗಿ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನ ಕಂಬಿ ಹಿಂದಿದ್ದಾರೆ. ಈ ಪ್ರಕರಣದ ವಿಚಾರವಾಗಿ ಸುದೀಪ್, ಶಿವಣ್ಣ, ಜಗ್ಗೇಶ್ ಬಳಿಕ ಇದೀಗ ಸಂಗೀತ ನಿರ್ದೇಶಕ ಹಂಸಲೇಖ ಪ್ರತಿಕ್ರಿಯೆ ನೀಡಿದ್ದಾರೆ. ದರ್ಶನ್ ಪ್ರಕರಣದಿಂದ ಸ್ಯಾಂಡಲ್‌ವುಡ್‌ಗೆ ಕಳಂಕ ವಿಚಾರವಾಗಿ ಮಾತನಾಡಿದ ಅವರು, ಅತ್ಯುನ್ನತ ಸ್ಥಾನಕ್ಕೆ ಏರಿದವನು ಮತ್ತೆ ಕೆಳಗೆ ಬೀಳೋದು ಬೇಡ. ಕೇರಳ ಚಿತ್ರೋದ್ಯಮ ಹೀಗೇ ಆಗಿತ್ತು. ಅದೀಗ ಉತ್ತುಂಗದಲ್ಲಿದೆ. ಕೆಳಗೆ ಬಿದ್ದು ಮತ್ತೆ ಮೇಲೆ ಎದ್ದಿದೆ. ನಮ್ಮದು ಚಂದನವನ ಕಣಯ್ಯ. ಒಂದು ಮಳೆಗೆ ಮರ ಒಣಗಿದರೇನಂತೆ. ಇನ್ನೊಂದು ಮಳೆಗೆ ಕಾಡು ಬೆಳೆದೇ ಬೆಳೆಯುತ್ತೆ ಎಂದರು.

ನಿಜ ಜೀವನದಲ್ಲಿ ಸ್ಕ್ರಿಪ್ಟನ್ನ ತರಬಾರದು: ಸಿನಿಮಾ ಕಲಾವಿದರಾದವರು ಸಣ್ಣದಾಗಿ ಯೋಚನೆ ಮಾಡಬೇಕು. ಸಿಟ್ಟನ್ನ ಸ್ಕ್ರಿಪ್ಟ್ ಮಾಡಬೇಕು, ದ್ವೇಷವನ್ನ ಕ್ಯಾರೆಕ್ಟರ್ ಮಾಡಬೇಕು. ನಾವು ಆ ರೀತಿ ಸಿನಿಮಾದಲ್ಲಿ ತೋರಿಸಬೇಕು ಅಷ್ಟೇ. ನಿಜ ಜೀವನದಲ್ಲಿ ಸ್ಕ್ರಿಪ್ಟನ್ನ ತರಬಾರದು. ನಿಜ ಜೀವನದಲ್ಲಿ ಕ್ಯಾರೆಕ್ಟರ್ ಆಗಬಾರದು. ಇದು ಕಲಾವಿದರ ಕರ್ತವ್ಯ ಎಂದು ದರ್ಶನ್‌ಗೆ ಹಂಸಲೇಖ ಕಿವಿಮಾತು ಹೇಳಿದರು.  

ಆ ಮಗು ಕೂಡ ಅಷ್ಟೇ ನೋವು ತಿಂತಿರುತ್ತೆ: ದರ್ಶನ್ ನನ್ನ ಮಗು ಅಂತಾ ತಿಳಿದುಕೊಳ್ಳಿ. ಮಗು ತಪ್ಪು ಮಾಡಿದ್ರೆ ತಂದೆ ಎಷ್ಟು ನೋವು ತಿಂತಾನೋ, ನಾನು ಅಷ್ಟೇ ನೋವು ತಿಂತಿದ್ದೀನಿ. ಆ ಮಗು ಕೂಡ ಅಷ್ಟೇ ನೋವು ತಿಂತಿರುತ್ತೆ. ನಾವು ಆತ ಕೊಟ್ಟಿರುವ ಕೊಡುಗೆ ಇದೆಯಲ್ಲ. ಆತ ಕೊಟ್ಟಿರುವ ಕೊಡುಗೆ ಕಡೆ ಗಮನ ಕೊಡೋಣ ಎಂದು ಹಂಸಲೇಖ ತಿಳಿಸಿದರು.

ಚಿನ್ನ ಕುದಿವ ಕುಲುಮೆಯಲ್ಲಿದೆ, ಅಪರಂಜಿ ಆಗಿ ಬರಲು ಸಮಯ ಬೇಕು: ದರ್ಶನ್​​ ಬಗ್ಗೆ ಗಾಯಕಿ ಶಮಿತಾ ಮಲ್ನಾಡ್ ಪೋಸ್ಟ್‌!

ಪ್ರಶಸ್ತಿ ಪ್ರಧಾನ: ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ನಾದಬ್ರಹ್ಮ ಸಂಗೀತ ಮಾಂತ್ರಿಕ ಹಂಸಲೇಖರವರಿಗೆ ಸಕ್ಕರೆ ನಾಡಿನಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಶಾಸಕ ಪಿ ರವಿಕುಮಾರ್ ಗೌಡ ಗಣಿಗ ರವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನೆರವೇರಿದ್ದು, ಕರ್ನಾಟಕ ಸಂಘದ ವತಿಯಿಂದ ಪ್ರಶಸ್ತಿಯನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವ ಎನ್.ಚೆಲುವರಾಯಸ್ವಾಮಿ, ಬೆಂಗಳೂರು ದಕ್ಷಿಣ ವಲಯದ ಐ ಜಿ ರವಿಕಾಂತೇಗೌಡ, ಮಾಜಿ ಸಚಿವ ಸಿ ಎಸ್ ಪುಟ್ಟರಾಜು ಹಾಗೂ ಇತರೆ ಗಣ್ಯರು ಭಾಗಿಯಾಗಿದ್ದರು.

Latest Videos
Follow Us:
Download App:
  • android
  • ios