ಜುಲೈ 4 ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬಕ್ಕೆ PD 35 ಚಿತ್ರತಂಡದಿಂದ ಫಸ್ಟ್ ಲುಕ್ ಹಾಗೂ ಶೀರ್ಷಿಕೆ ಅನಾವರಣ ಅನೂಪ್ ಸೀಳಿನ್ ಸಂಗೀತ, ಮಾಸ್ತಿ ಸಂಭಾಷಣೆ

ಜುಲೈ 4 ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬಕ್ಕೆ PD 35 ಚಿತ್ರತಂಡದಿಂದ ಫಸ್ಟ್ ಲುಕ್ ಹಾಗೂ ಶೀರ್ಷಿಕೆ ಅನಾವರಣವಾಗಲಿದೆ. ಜುಲೈ 4 ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬ ಇದೆ.

ಈ‌‌ ಸಂಭ್ರಮದ ಸವಿನೆನಪಿಗಾಗಿ PD35 ಚಿತ್ರತಂಡ ಪ್ರಜ್ವಲ್ ಅವರಿಗೆ ಸರ್ಪ್ರೈಸ್ ಗಿಫ್ಟ್ ನೀಡಲಿದೆ. PD35 ಅಂದರೆ ಪ್ರಜ್ವಲ್ ದೇವರಾಜ್ 35 ಎಂಬ ಅರ್ಥ. ಇದು ಅವರ ಅಭಿನಯದ 35ನೇ ಚಿತ್ರ.

ಜುಲೈನಲ್ಲಿ ಶೂಟಿಂಗ್ ಶುರು, ಹೊಸ ಉತ್ಸಾಹದಲ್ಲಿ ಕಲಾವಿದರು

ಅದೇ ದಿನ ಈ ನೂತನ ಚಿತ್ರದ ಫಸ್ಟ್ ಲುಕ್ ಹಾಗೂ ಶೀರ್ಷಿಕೆ ಅನಾವರಣಗೊಳ್ಳಲಿದೆ. ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ಅವರು ನಿರ್ಮಿಸುತ್ತಿರುವ ಈ‌ ಚಿತ್ರವನ್ನು ಗುರುದತ್ ಗಾಣಿಗ ನಿರ್ದೇಶಿಸುತ್ತಿದ್ದಾರೆ.

ಅನೂಪ್ ಸೀಳಿನ್ ಸಂಗೀತ ನೀಡಲಿದ್ದಾರೆ. ಮಾಸ್ತಿ ಸಂಭಾಷಣೆ ಬರೆಯುತ್ತಿದ್ದಾರೆ‌. ಪ್ರಜ್ವಲ್ ದೇವರಾಜ್ ಅವರಿಗೆ ನಾಯಕಿಯಾಗಿ ಅದಿತಿ‌ ಪ್ರಭುದೇವ ನಟಿಸುತ್ತಿದ್ದಾರೆ.