Asianet Suvarna News Asianet Suvarna News

ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ನಟ-ರಾಜಕಾರಣಿ ನಿಖಿಲ್ ಕುಮಾರಸ್ವಾಮಿಗೆ ಆಹ್ವಾನ

ನಟ ನಿಖಿಲ್ ಕುಮಾರಸ್ವಾಮಿ ಹಾಗೂ ಇಡೀ ಕುಟುಂಬಕ್ಕೆ ರಾಮ ಜನ್ಮಭೂಮಿ ಟ್ರಸ್ಟ್ ವತಿಯಿಂದ ಆಹ್ವಾನ ಪತ್ರಿಕೆ ನೀಡಿದ್ದು, ಜನವರಿ 22ರಂದು ನಡೆಯಲಿರುವ ಶ್ರೀರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಕುಟುಂಬಸ್ಥರು ಭಾಗಿಯಾಗಲಿದ್ದಾರೆ. 

Nikhil Kumaraswamy received invitation for ram mandir inauguration srb
Author
First Published Jan 10, 2024, 1:34 PM IST

ಜನವರಿ 22 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಗಣ್ಯರು, ರಾಜಕಾರಣಿಗಳು ಸೇರಿದಂತೆ ಚಿತ್ರರಂಗದವರು ಭಾಗಿಯಾಗಲಿದ್ದಾರೆ. ದಕ್ಷಿಣದ ಕೆಲವೇ ಕೆಲವು ನಟರಿಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ ಸಿಕ್ಕಿದೆ. ಈಗಾಗಲೇ ಸಾಕಷ್ಟು ನಟರಿಗೆ ಆಹ್ವಾನ ಸಿಕ್ಕಿದೆ ಅನ್ನೋ ಸುದ್ದಿ ಕೇಳಿ ಬರ್ತಿದೆ ಆದರೆ ಇಂದು ನಟ ನಿಖಿಲ್ ಕುಮಾರ್ ಅವ್ರಿಗೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಅಧಿಕೃತ ಆಹ್ವಾನ ಸಿಕ್ಕಿದೆ.

ನಟ ನಿಖಿಲ್ ಕುಮಾರಸ್ವಾಮಿ ಹಾಗೂ ಇಡೀ ಕುಟುಂಬಕ್ಕೆ ರಾಮ ಜನ್ಮಭೂಮಿ ಟ್ರಸ್ಟ್ ವತಿಯಿಂದ ಆಹ್ವಾನ ಪತ್ರಿಕೆ ನೀಡಿದ್ದು, ಜನವರಿ 22ರಂದು ನಡೆಯಲಿರುವ ಶ್ರೀರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಕುಟುಂಬಸ್ಥರು ಭಾಗಿಯಾಗಲಿದ್ದಾರೆ. ಇನ್ನು ವಿಶೇಷ ಅಂದ್ರೆ ಜನವರಿ 22 ರಂದು ನಟ ನಿಖಿಲ್ ಕುಮಾರಸ್ವಾಮಿ ತಮ್ಮ ಹುಟ್ಟುಹಬ್ಬವನ್ನು ಕೂಡ ಆಚರಣೆ ಮಾಡಿಕೊಳ್ಳಲಿದ್ದಾರೆ.

ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ; ಕನ್ನಡ ಹನುಮಾನ ಚಾಲೀಸ ಉಡುಗೊರೆ!

ಹಾಗಾಗಿ ಈ ಬಾರಿಯ ಹುಟ್ಟುಹಬ್ಬ ಮತ್ತಷ್ಟು ವಿಶೇಷವಾಗಲಿದ್ದು ಅಯೋಧ್ಯೆಯ ಶ್ರೀ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮೂಲಕ ಹುಟ್ಟುಹಬ್ಬವನ್ನ ಅರ್ಥಪೂರ್ಣವಾಗಿ ಆಚರಣೆ ಮಾಡಿಕೊಳ್ಳಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಖುಷಿಯಿಂದ ನಿಖಿಲ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. 

ಅಡುಗೆ ಭಟ್ಟರಾದ್ರಾ ಪೃಥ್ವಿ ಅಂಬಾರ್, ದಿಯಾ ಗೆದ್ಮೆಲೂ ಯಾಕೆ ತಡ; ಗರಂ ಆಗಿದಾರಾ ಪ್ರೇಕ್ಷಕರು?!

ಶ್ರೀ ರಾಮಮಂದಿರ ಉದ್ಘಾಟನೆಗೆ ಆಹ್ವಾನ ಬಂದಿರೋ ವಿಚಾರವಾಗಿ ನಟ ನಿಖಿಲ್ ಕುಮಾರ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದು, ರಾಮ ಜನ್ಮಭೂಮಿ ಟ್ರಸ್ಟ್ ಗೆ ಈ ಮೂಲಕ ಧನ್ಯವಾದ ತಿಳಿಸಿದ್ದಾರೆ. ರಾಮಮಂದಿರದ ಸೇವಾ ಕೈಂಕರ್ಯದಲ್ಲಿ ಭಾಗಿಯಾಗುವುದು ಖುಷಿಯ ವಿಚಾರ ಎಂದು ತಿಳಿಸಿದ್ದಾರೆ.  ಜೆಡಿಎಸ್‌ ವರಿಷ್ಠ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರು ಬಿಜೆಪಿಯೊಂದಿಗೆ ಕರ್ನಾಟಕದ ರಾಜಕಾರಣದಲ್ಲಿ ಕೈ ಜೋಡಿಸಿರುವುದರಿಂದ ಈ ಬೆಳವಣಿಗೆಯನ್ನು ಸಹಜ ಎನ್ನಬಹುದೇನೋ!

Follow Us:
Download App:
  • android
  • ios