ಹೆಚ್ಚಿದ ಅಭಿಮಾನಿಗಳ ಆಕ್ರೋಶ; ಶಿವಣ್ಣ ಬಗ್ಗೆ ಹೇಳಿದ್ದ ಮಾತು ವಾಪಾಸ್ ಪಡೆದ ಪ್ರಶಾಂತ್ ಸಂಬರ್ಗಿ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ವಿರುದ್ಧ ಕೆಟ್ಟದಾಗಿ ಮಾತನಾಡಿ ನಾಲಿಗೆ ಹರಿಬಿಟ್ಟಿದ್ದ ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರ್ಗಿ ಇದೀಗ ಉಲ್ಟ ಹೊಡೆದಿದ್ದಾರೆ. ಶಿವಣ್ಣ ವಿರುದ್ಧ ನೀಡಿದ್ದ ಹೇಳಿಕೆ ವಾಪಾಸ್ ಪಡೆಡಿದ್ದಾರೆ. ಶಿವರಾಜ್ ಕುಮಾರ್ ಕಾಂಗ್ರೆಸ್ ಪರ ಪ್ರಚಾರಕ್ಕೆ ಇಳಿದ ಬೆನ್ನಲ್ಲೇ ಪ್ರಶಾಂತ್ ಸಂಬರ್ಗಿ ಕೆಟ್ಟದಾಗಿ ಟೀಕೆ ಮಾಡಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಅನೇಕ ಬಗೆಯ ಪೋಸ್ಟ್ಗಳನ್ನು ಶೇರ್ ಮಾಡಿದ್ದರು. ಇದು ಶಿವರಾಜ್ ಕುಮಾರ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಸಾಕಷ್ಟು ವಿರೋಧ, ಟೀಕೆ ವ್ಯಕ್ತವಾದ ನಂತರ ಪ್ರಶಾಂತ್ ಸಂಬರ್ಗಿ ತಾವು ಆಡಿದ ಮಾತನ್ನು ಹಿಂದಕ್ಕೆ ಪಡೆದಿದ್ದಾರೆ. ಈ ಬಗ್ಗೆ ಮತ್ತೊಂದು ಪೋಸ್ಟ್ ಶೇರ್ ಮಾಡಿದ್ದಾರೆ. ಶಿವಣ್ಣ ಜೊತೆಗಿರುವ ಒಂದಿಷ್ಟು ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಮಾತು ವಾಪಾಸ್ ಪಡೆಯುತ್ತೀನಿ ಎಂದ ಸಂಬರ್ಗಿ
'ಶಿವಣ್ಣ ಮತ್ತೆ ಇನೊಬ್ಬ ನಮ್ಮ ಆಪ್ತ ಮಿತ್ರ ನೊಂದಿಗೆ ಇದೀಗ ತಾನೇ ಮಾತನಾಡಿದೆ. ಶಿವಣ್ಣ ಅವರಿಗೆ ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಸ್ನೇಹಿತರನ್ನು ಹೊಂದಿದ್ದಾರೆ. ಶಿವಣ್ಣ ಅವರು ತಂದೆಯ ಬಯಕೆಯಂತೆ ಅವರು ರಾಜಕೀಯದಿಂದ ದೂರವಾಗಿದ್ದರೆ. ನಾನು ಅವರ ಬಗ್ಗೆ ಬರೆದಿರುವ ನನ್ನ ಪೋಸ್ಟ್ ಅನ್ನು ಹಿಂದಕ್ಕೆ ತೆಗೆದುಕೊಳ್ಳುತ್ತೇನೆ ಮತ್ತು ಶಿವಣ್ಣ ಮತ್ತು ಅವರ ಅಭಿಮಾನಿಗಳಿಗೆ ಕರ್ನಾಟಕದಾದ್ಯಂತ ನೋಯಿಸಬಾರದು ಎಂದು ನಾನು ಬಯಸುತ್ತೇನೆ' ಎಂದು ಪೋಸ್ಟ್ ಶೇರ್ ಮಾಡಿದ್ದಾರೆ.
ನಾನು ರಾಹುಲ್ ಗಾಂಧಿ ಫ್ಯಾನ್ ಎಂದ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ !
ಶಿವಣ್ಣ ಬಗ್ಗೆ ಪ್ರಶಾಂತ್ ಸಂಬರ್ಗಿ ಹೇಳಿದ್ದೇನು?
‘ಶಿವಣ್ಣ ಯಾವತ್ತೂ ಸ್ಕ್ರಿಪ್ಟ್ ಕೇಳೋದೇ ಇಲ್ಲ. ಆದರೆ ಪೇಮೆಂಟ್ ತುಂಬಾನೇ ಮುಖ್ಯ ಒಪ್ಪಿಕೊಂಡಿದ್ದ ಸಿನಿಮಾ ಮಾಡ್ತಾರೆ. ಸಿನಿಮಾ ಫ್ಲಾಪ್ ಆದ್ರೂ ಅವರು ಕೇರ್ ಮಾಡಲ್ಲ ಮತ್ತೆ ಪೇಪೆಂಟ್ ತಗೊಂಡು ಇನ್ನೊಂದು ಸಿನಿಮಾ ಮಾಡುತ್ತಾರೆ. ಅದಕ್ಕೆ ರಾಜಕೀಯದಲ್ಲೂ ಮಾಡಿದ್ದಾರೆ. ಕ್ಯಾಂಡಿಡೇಟ್ ಗೆದ್ರೆ ಏನು ಸೋತ್ರೆ ಏನು ಎಲ್ಲಾ ಒಂದೇ' ಎಂದು ಹೇಳಿದ್ದರು. ಸಂಬರ್ಗಿ ಪೋಸ್ಟ್ ಶೇರ್ ಮಾಡುತ್ತಿದ್ದಂತೆ ಭಾರಿ ವಿರೋಧ ವ್ಯಕ್ತವಾಗಿತ್ತು. ಅಭಿಮಾನಿಗಳು ಸಂಗರ್ಬಿ ವಿರುದ್ಧ ಮುಗಿಬಿದ್ದರು. ಪ್ರಶಾಂತ್ ಸಂಬರ್ಗಿ ಹೇಳಿಕೆಗೆ ಶಿವರಾಜ್‌ಕುಮಾರ್ ಅಭಿಮಾನಿಗಳು ಸಿಟ್ಟಿಗೆದ್ದಿದ್ದರು. ಪ್ರಶಾಂತ್ ಸಂಬರ್ಗಿ ಕ್ಷಮೆ ಕೇಳಬೇಕು ಎಂದು ಪಟ್ಟು ಹಿಡಿದಿದ್ದರು.
ಸಂಸದ ಪ್ರತಾಪ್ ಸಿಂಹ ಅಸಮಾಧಾನಕ್ಕೆ ನಟ ಶಿವರಾಜ್‌ಕುಮಾರ್ ತಿರುಗೇಟು...
ಶಿವಣ್ಣ ರಿಯಾಕ್ಷನ್
ಪ್ರಚಾರದಲ್ಲಿದ್ದ ಶಿವರಾಜ್‌ಕುಮಾರ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದರು. ‘ನನಗೆ ಹಣ ಕಡಿಮೆ ಆಗಿದೆಯಾ? ನಾನು ಮನಸ್ಸಿನ ಮಾತು ಕೇಳಿ ಬಂದಿದ್ದೇನೆ. ಅವರು ಆ ರೀತಿ ಮಾತನಾಡೋದು ಸರಿ ಅಲ್ಲ. ಮಾತನ್ನು ಅವರು ಹಿಂಪಡೆಯಲಿ’ ಎಂದಿದ್ದರು.
