ಕನ್ನಡದ ಸೂಪರ್ ಹಿಟ್ ಚಿತ್ರಗಳಾದ 'ಆಟೋ ರಾಜ', 'ಗಲಾಟೆ ಸಂಸಾರ' ನಿರ್ಮಾಪಕ ಸಿ. ಜಯರಾಮ್ ಅವರು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಯಶಸ್ವಿ ನಿರ್ದೇಶಕ ಮಿಲನ ಪ್ರಕಾಶ್ ಅವರ ತಂದೆಯಾದ ಜಯರಾಮ್ ಅವರ ಅಗಲಿಕೆಗೆ ಚಿತ್ರರಂಗ ಕಂಬನಿ ಮಿಡಿದಿದೆ.

ಬೆಂಗಳೂರು (ಸೆ.09): ಕನ್ನಡ ಚಿತ್ರರಂಗದಲ್ಲಿ ಸೂಪರ್ ಹಿಟ್ ಸಿನಿಮಾಗಳಿಗೆ ಬಂಡಬಾಳ ಹಾಕಿದ ಸಿ. ಜಯರಾಮ್ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಿರ್ಮಾಪಕ ಸಿ. ಜಯರಾಮ್ ಅವರು ಸೆಪ್ಟೆಂಬರ್ 8 ಮಧ್ಯರಾತ್ರಿ 2 ಗಂಟೆಗೆ ತಮ್ಮ ಬೆಂಗಳೂರು ನಿವಾಸದಲ್ಲಿ ನಿಧನರಾಗಿದ್ದಾರೆ. ಇಂದು ಸೆಪ್ಟೆಂಬರ್ 9ರಂದು ಮಧ್ಯಾಹ್ನ 12 ಗಂಟೆಗೆ ಸುಮ್ಮನಹಳ್ಳಿ ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. 

Bigg Boss 13 ವಿಜೇತ ಸಿದ್ಧಾರ್ಥ್ ಶುಕ್ಲಾ ನಿಧನ!

ಶಂಕರ್ ನಾಗ್ ನಟನೆಯ 'ಆಟೋ ರಾಜ', ಅನಂತ್ ನಾಗ್ ನಟನೆಯ 'ನಾ ನಿನ್ನ ಬಿಡಲಾರೆ', ಡಾ.ವಿಷ್ಣುವರ್ಧನ್ ಮತ್ತು ರಜನಿಕಾಂತ್ ನಟನೆಯ 'ಗಲಾಟೆ ಸಂಸಾರ', ಶ್ರೀನಾಥ್ ನಟನೆಯ 'ಪಾವನ ಗಂಗಾ' ಸೇರಿದಂತೆ ಅನೇಕ ಸ್ಟಾರ್ ನಟರ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಈ ನೋವಿನ ಸುದ್ದಿ ಕೇಳಿ ಚಿತ್ರರಂಗದ ಕೆಲವು ಆಪ್ತರಿಗೆ ಶಾಕ್ ಆಗಿದೆ. ಸಿ.ಜಯರಾಮ್ ಅವರ ಪುತ್ರ ಮಿಲನ ಪ್ರಕಾಶ್ ಕೂಡ ಚಿತ್ರರಂಗದಲ್ಲಿ ಯಶಸ್ವಿ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ. ಕುಟುಂಬಸ್ಥರು ಹಾಗೂ ಸಿನಿ ಸ್ನೇಹಿತರು ಕಂಬನಿ ಮಿಡಿಯುತ್ತಿದ್ದಾರೆ.

ನಿರ್ಮಾಪಕ ಸಿ.ಜಯರಾಮ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸೋಣ.