Asianet Suvarna News Asianet Suvarna News

ಅಗಲಿದ ಪುನೀತ್ ರಾಜ್‌ಕುಮಾರ್‌ಗೆ ರಾಜಕೀಯ ಗಣ್ಯರ ಸಂತಾಪ

* ಖ್ಯಾತ ನಟ ಪುನೀತ್​ ರಾಜ್​ಕುಮಾರ್​ ನಿಧನ
* ಪುನೀತ್​ ರಾಜ್​ಕುಮಾರ್​ ನಿಧನಕ್ಕೆ ರಾಜಕೀಯ ನಾಯಕ ಕಂಬನಿ 
* ಅಪ್ಪು ಜೊತೆಗಿನ ತಮ್ಮ ಒಡನಾಟವನ್ನು ಮೇಲುಕು ಹಾಕಿದ ರಾಜಕೀಯ ಗಣ್ಯರು

Puneeth Rajkumar dies Karnataka politicians pay condolences rbj
Author
Bengaluru, First Published Oct 29, 2021, 3:53 PM IST
  • Facebook
  • Twitter
  • Whatsapp

ಬೆಂಗಳೂರು, (ಅ.29):  ಸ್ಯಾಂಡಲ್​ವುಡ್​ನ ಪವರ್ ಸ್ಟಾರ್Sandalwood Power Star), ಆಪ್ತರು ಹಾಗೂ ಅಭಿಮಾನಿಗಳಿಂದ ಅಪ್ಪು ಎಂದೇ ಕರೆಸಿಕೊಳ್ಳುತ್ತಿದ್ದ ಪುನೀತ್ ರಾಜ್​ಕುಮಾರ್  (Puneeth Rajkumar) ಇಂದು(ಅ.29) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 

"

ಖ್ಯಾತ ನಟ ಪುನೀತ್​ ರಾಜ್​ಕುಮಾರ್​ ಸಾವಿನ ಸುದ್ದಿ ಕನ್ನಡ ಚಿತ್ರರಂಗ ಮಾತ್ರವಲ್ಲೇ ರಾಜಕೀಯ ರಂಗವನ್ನು ಸಹ ಶೋಕ ಸಾಗರದಲ್ಲಿ ಮುಳುಗಿಸಿದೆ. 

Puneeth Rajkumar Death: ನಟ ಪುನೀತ್‌ ರಾಜ್‌ಕುಮಾರ್ ಕೊನೆಯದಾಗಿ ಹಂಚಿಕೊಂಡ ಪೋಸ್ಟ್, ಮಾತುಗಳಿವು!

ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai), ಮಾಜಿ ಸಿಎಂಗಳಾದ ಎಸ್​.ಎಂ. ಕೃಷ್ಣ, ಸಿದ್ದರಾಮಯ್ಯ, ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಪ್ರಧಾನಿ ದೇವೇಗೌಡರು ಸೇರಿ ಹಲವು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಅಲ್ಲದೇ  ಡಾ. ರಾಜ್​ಕುಮಾರ್ ಕುಟುಂಬದ ಜೊತೆ ಆಪ್ತ ಸಂಬಂಧ ಹೊಂದಿದ್ದ ಕೆಲ ರಾಜಕಾರಣಿಗಳು ಅಪ್ಪು ಜೊತೆಗಿನ ತಮ್ಮ ಒಡನಾಟವನ್ನು ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಂಡಿದ್ದಾರೆ.

* ಸಿದ್ದರಾಮಯ್ಯ ಸಂತಾಪ
ಕನ್ನಡದ ಪ್ರತಿಭಾವಂತ ಯುವ ನಟ ಪುನೀತ್ ರಾಜಕುಮಾರ್ ಹಠಾತ್ ನಿಧನದಿಂದ ಆಘಾತಕ್ಕೀಡಾಗಿದ್ದೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ.

ಪುನೀತ್​ ರಾಜ್​​ಕುಮಾರ್ ನಿಧನದ ಸುದ್ದಿಕೇಳಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ.. ಕನ್ನಡದ ಪ್ರತಿಭಾವಂತ ಯುವ ನಟ ಪುನೀತ್ ರಾಜಕುಮಾರ್ ಹಠಾತ್ ನಿಧನದಿಂದ ಆಘಾತಕ್ಕೀಡಾಗಿದ್ದೇನೆ. ನಟನಾ ಕೌಶಲದ ಜೊತೆ ಸರಳ-ಸಜ್ಜನಿಕೆಯ ನಡವಳಿಕೆಯಿಂದಲೂ ಕನ್ನಡಿಗರ ಮ‌ನೆ ಮಗನಂತಿದ್ದ ಪುನೀತ್ ಸಾವು ತುಂಬಲಾರದ ನಷ್ಟ ಉಂಟಾಗಿದೆ.

ರಾಜ್ ಕುಮಾರ್ ಕಾಲದಿಂದಲೂ ಅವರ ಕುಟುಂಬದ ಜೊತೆಯಲ್ಲಿ ಆತ್ಮೀಯ ಸಂಬಂಧ ಹೊಂದಿದ್ದ ನನ್ನ ಪಾಲಿಗೆ ಪುನೀತ್ ಸಾವು ಮನೆ ಸದಸ್ಯನೊಬ್ಬನನ್ನು ಕಳೆದುಕೊಂಡ ಶೋಕ. ಪುನೀತ್ ಕುಟುಂಬ ಮತ್ತು ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

"

* ಎಚ್ ಡಿ ದೇವೇಗೌಡರು ಟ್ವೀಟ್
ಕನ್ನಡ ಚಿತ್ರ ರಂಗದ ಖ್ಯಾತ ಚಿತ್ರನಟ ಯುವರತ್ನ ಪುನೀತ್ ರಾಜ್ ಕುಮಾರ್ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ಆಘಾತ ವಾಗಿದೆ. ಅವರ ನಟಿಸ್ಸಿದ್ದ ಪೃತ್ವಿ ಮತ್ತು ರಾಜಕುಮಾರ ಚಿತ್ರವನ್ನು ಅಪ್ಪು ಅವರ ಜೊತೆಯಲ್ಲೇ ನೋಡಿದ್ದೇ ಈ ದಿನ ಅವರಿಲ್ಲ ಎಂದರೆ ನಂಬಲಸಾಧ್ಯವಾಗಿದೆ. ಈ ದಿನ ಯುವರತ್ನನನ್ನು ಕಳೆದುಕೊಂಡು ನಮ್ಮ ಕರುನಾಡು ಬರಿದಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ. ದೇವರು ಅವರ ಕುಟುಂಬ ವರ್ಗಕ್ಕೆ ಹಾಗೂ ಅವರ ಅಭಿಮಾನಿಗಳಿಗೆ ದುಃಖ ಬರಿಸುವ ಶಕ್ತಿ ತುಂಬಲಿ, ಎಂದು ಟ್ವೀಟ್  ಮಾಡಿದ್ದಾರೆ.

* ಬಸವರಾಜ ಬೊಮ್ಮಾಯಿ ನಮನ
ಕನ್ನಡದ ಖ್ಯಾತನಟ ಶ್ರೀ ಪುನೀತ್ ರಾಜ್ ಕುಮಾರ್ ಅವರು ಹೃದಯಾಘಾತದಿಂದ ನಿಧನರಾಗಿದ್ದು ನಾನು ತೀವ್ರ ಆಘಾತಕ್ಕೆ ಒಳಗಾಗಿದ್ದೇನೆ. ಕನ್ನಡಿಗರ ಮೆಚ್ಚಿನ ನಟ ಅಪ್ಪು ನಿಧನದಿಂದ ಕನ್ನಡ ಹಾಗೂ ಕರ್ನಾಟಕಕ್ಕೆ ಅಪಾರ ನಷ್ಟ ವಾಗಿದ್ದು, ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಿ, ಅಭಿಮಾನಿಗಳಿಗೆ ಈ ನೋವನ್ನು ಸಹಿಸುವ ಶಕ್ತಿ ನೀಡಲಿಯೆಂದು ಪ್ರಾರ್ಥಿಸುತ್ತೇನೆ.

* ಡಿಕೆ ಶಿವಕುಮಾರ್
ನನ್ನ ನೆರೆಹೊರೆಯವರಾದ, ಸ್ವಂತ ಸಹೋದರನಂತಿದ್ದ ಪುನೀತ್ ಇನ್ನಿಲ್ಲ ಎಂಬ ಸುದ್ದಿಯನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಇಷ್ಟು ಚಿಕ್ಕವಯಸ್ಸಿನಲ್ಲಿ ಅವರನ್ನು ಕೊಂಡೊಯ್ದ ವಿಧಿ ಬಹಳ ಕ್ರೂರಿ. ಪುನೀತ್ ರಾಜ್​ಕುಮಾರ್ ನನಗೆ ಆತ್ಮೀಯರಾಗಿದ್ದರು. ನಮ್ಮ ಕುಟುಂಬದ ಆತ್ಮೀಯ ಸ್ನೇಹಿತರಾಗಿದ್ದರು. ನಮ್ಮಿಬ್ಬರ ಕುಟುಂಬ ಸದಸ್ಯರ ನಡುವೆ ಉತ್ತಮ ಒಡನಾಟವಿತ್ತು. ಅವರಿಗೆ ಯಾವ ಕೆಟ್ಟ ಅಭ್ಯಾಸವೂ ಇರಲಿಲ್ಲ. ಬೇರೆ ಅಭ್ಯಾಸ ಅಂಟಿಸಲು, ರಾಜಕಾರಣಕ್ಕೂ ಎಳೆಯಲು ನಾವು ಸಾಕಷ್ಟು ಪ್ರಯತ್ನ ಮಾಡಿದ್ದೆವು. ಆದರೆ, ಅದು ಸಾಧ್ಯವಾಗಿರಲಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ನಾವಿಬ್ಬರೂ ಒಟ್ಟಿಗೆ ವಾಕಿಂಗ್ ಮಾಡಿದ್ದೇವೆ. ಜಿಮ್ ಮಾಡಿದ್ದೇವೆ. ಚಿತ್ರರಂಗ ಸೇರಿ ಅನೇಕ ವಿಚಾರಗಳನ್ನು ಚರ್ಚೆ ಮಾಡಿದ್ದೇವೆ. ಶಿಸ್ತುಬದ್ಧ ಜೀವನ, ಕಟ್ಟುನಿಟ್ಟಿನ ವ್ಯಾಯಾಮದ ಮೂಲಕ ಪುನೀತ್ ಉತ್ತಮ ಆರೋಗ್ಯ ಕಾಪಾಡಿಕೊಂಡಿದ್ದರು. ಫಿಟ್ನೆಸ್ ವಿಚಾರವಾಗಿ ಯುವಕರಿಗೆ ರೋಲ್ ಮಾಡೆಲ್ ಆಗಿದ್ದರು. ಅಂತಹವರನ್ನು ಭಗವಂತ ಇಷ್ಟು ಬೇಗ ಕರೆಸಿಕೊಳ್ಳುತ್ತಾನೆ ಎಂದು ಕನಸಿನಲ್ಲಿಯೂ ಊಹಿಸಿರಲಿಲ್ಲ ಎಂದು ಡಿ.ಕೆ. ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.

ಎಚ್‌ಡಿ ಕುಮಾರಸ್ವಾಮಿ
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಕಾಲಿಕ ನಿಧನ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ. ವೈಯಕ್ತಿಕವಾಗಿ ನನಗೆ ಆಗಿರುವ ಆಘಾತ ಅಷ್ಟಿಷ್ಟಲ್ಲ. ಇಂತಹ ಸುದ್ದಿ ಕೇಳಬೇಕಾಗುತ್ತದೆ ಎಂದು ಕನಸು ಮನಸಿನಲ್ಲೂ ಎಣಿಸಿರಲಿಲ್ಲ.

ಪುನೀತ್ ಅಗಲಿಕೆ ಕನ್ನಡ ಚಿತ್ರರಂಗಕ್ಕೆ, ಕನ್ನಡಕ್ಕೆ, ನಾಡು ನುಡಿಗೆ ಭರಿಸಲಾಗದ ನಷ್ಟ. ಅವರ ನಿಧನ ದೊಡ್ಡ ಶೂನ್ಯವನ್ನೇ ಸೃಷ್ಟಿಸಿದೆ. ನಮೆಲ್ಲರ ಅಪ್ಪು ಇನ್ನಿಲ್ಲ ಎನ್ನುವ ಸ್ಥಿತಿಯನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ಹಾಗೂ ಕೋಟ್ಯಂತರ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ.

ಅಣ್ಣಾವ್ರ ಪುತ್ರರಾದರೂ ತಮ್ಮದೇ ವಿಭಿನ್ನ ನಟನಾ ಪ್ರತಿಭೆ ಹೊಂದಿದ್ದ ಪುನೀತ್ ಅವರು; ಬಾಲ ನಟರಾಗಿಯೇ ಕನ್ನಡಕ್ಕೆ ರಾಷ್ಟ್ರ ಪ್ರಶಸ್ತಿ ತಂದುಕೊಟ್ಟವರು. ಆಮೇಲೆ ಹೀರೋ ಆಗಿ ಪ್ರತೀ ಕನ್ನಡಿಗನ ಮನೆಮನ ರಂಜಿಸಿದ್ದರು. ಗಾಯಕರಾಗಿ, ನಿರ್ಮಾಪಕರಾಗಿ ಚಿತ್ರರಂಗದ ಕಣ್ಮಣಿ ಆಗಿದ್ದವರು.

Follow Us:
Download App:
  • android
  • ios