ಮದಗಜ ಮಹೇಶ್ ಸಾರಥ್ಯದಲ್ಲಿ ಮತ್ತೆ 'ಅಯೋಗ್ಯ'ರಾಗಲು ಹೊರಟ ಸತೀಶ್-ರಚಿತಾ!

6  ವರ್ಷದ ಹಿಂದೆ ಸಿದ್ದೇಗೌಡ ಹಾಗೂ ನಂದಿನಿ ಲವ್ ಸ್ಟೋರಿಗೆ ಕನ್ನಡ‌ ಸಿನಿಮಾ ಪ್ರೇಮಿಗಳು ಶಹಬ್ಬಾಸ್ ಎಂದಿದ್ದರು. ಈಗ ಮತ್ತದೇ ತಂಡ ಅಯೋಗ್ಯ 2 ಸಿನಿಮಾ ಮೂಲಕ‌ ಒಂದಾಗುತ್ತಿರುವುದು ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ...

Rachita Ram and Sathish Ninasam lead Ayogya movie 2 to set soon srb

ಸ್ಯಾಂಡಲ್ ವುಡ್ ನ‌ ಸೂಪರ್ ಸಕ್ಸಸ್ ಜೋಡಿಗಳಲ್ಲಿ ಒಂದಾಗಿರುವ ರಚಿತಾ ರಾಮ್ (Rachita Ram) ಹಾಗೂ ಸತೀಶ್ ನೀನಾಸಂ (Sathish Ninansam) ಮತ್ತೆ ಒಂದಾಗಿದ್ದಾರೆ. ಅಯೋಗ್ಯ ಸಿನಿಮಾ ಮೂಲಕ ಮೋಡಿ ಮಾಡಿದ್ದ ಈ ಜೋಡಿ ಇದೀಗ 6 ವರ್ಷಗಳ ಬಳಿಕ ಮತ್ತೆ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದೆ. ಹೌದು ಅಯೋಗ್ಯ ಸಿನಿಮಾದ ಪಾರ್ಟ್ 2 ಸೆಟ್ಟೇರುತ್ತಿದ್ದು (Ayogya 2) ಈಗಾಲೇ ಮುಹೂರ್ತಕ್ಕೆ ಡೇಟ್ ಫಿಕ್ಸ್ ಆಗಿದೆ

6  ವರ್ಷದ ಹಿಂದೆ ಸಿದ್ದೇಗೌಡ ಹಾಗೂ ನಂದಿನಿ ಲವ್ ಸ್ಟೋರಿಗೆ ಕನ್ನಡ‌ ಸಿನಿಮಾ ಪ್ರೇಮಿಗಳು ಶಹಬ್ಬಾಸ್ ಎಂದಿದ್ದರು. ಈಗ ಮತ್ತದೇ ತಂಡ ಅಯೋಗ್ಯ 2 ಸಿನಿಮಾ ಮೂಲಕ‌ ಒಂದಾಗುತ್ತಿರುವುದು ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ. 6 ವರ್ಷದ ಬಳಿಕ ಸಿದ್ದೇಗೌಡ ಹಾಗೂ ನಂದಿನಿ ಲವ್ ಸ್ಟೋರಿಯನ್ನು ಮತ್ತೆ ಪ್ರೇಕ್ಷಕರು ನೋಡಬಹುದು.

ಅಯೋಗ್ಯ ಸಿನಿಮಾದ ಹಾಡುಗಳು ಕನ್ನಡ ಸಿನಿಮಾರಂಗದಲ್ಲಿಯೇ ಹೊಸ ಇತಿಹಾಸ ಬರೆದಿತ್ತು. ಈಗ ಮತ್ತಷ್ಟು ನಿರೀಕ್ಷೆಗಳೊಂದಿಗೆ ಚಿತ್ರತಂಡ ಹೊಸ ದಾಖಲೆ ಸೃಷ್ಟಿಸಲು‌ ಸಜ್ಜಾಗಿದೆ. ಇನ್ನು ಅಯೋಗ್ಯ2 ಸಿನಿಮಾ ಡಿಸೆಂಬರ್ 11 ರಂದು ಸೆಟ್ಟೇರಲಿದ್ದು ಮಹೇಶ್ ಕುಮಾರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ.  ಎಂ ಮುನೇಗೌಡ ಅಯೋಗ್ಯ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ‌‌ ಇರಲಿದೆ.

Rachita Ram and Sathish Ninasam lead Ayogya movie 2 to set soon srb

 

ಸಾವಿಗೆ ಶರಣಾದ ನಟಿ ಶೋಭಿತಾ ಶಿವಣ್ಣ ಎಂಥ ಹುಡುಗಿ ಆಗಿದ್ದಳು?

 

ರಚಿತಾ ರಾಮ್, ಸತೀಶ್ ನಿನಾಸಂ‌, ರವಿಶಂಕರ್, ಶಿವರಾಜ್ ಕೆ ಆರ್ ಪೇಟೆ ಸೇರಿದಂತೆ ಅಯೋಗ್ಯ ಸಿನಿಮಾದಲ್ಲಿ ಅಭಿನಯಿಸಿದ ಬಹುತೇಕ ಕಲಾವಿದರು ಅಯೋಗ್ಯ2 ನಲ್ಲಿ ಮುಂದುವರೆಯುತ್ತಿರುವುದು ವಿಶೇಷ. ಸದ್ಯ ಪರಭಾಷೆಯ ಚಿತ್ರಗಳಲ್ಲೂ ನಟಿ ರಚಿತಾ ರಾಮ್ ಮಿಂಚುತ್ತಿದ್ದು, ಕನ್ನಡ ಸಿನಿಮಾರಂಗವನ್ನೂ ಬಿಟ್ಟಿಲ್ಲ. ದಶಕಗಳಿಂದ ನಟನೆಯಲ್ಲಿ ತೊಡಗಿಸಿಕೊಂಡಿರುವ ರಚಿತಾ ರಾವ್ ಈಗಲೂ ಬೇಡಿಕೆಯಲ್ಲಿದ್ದಾರೆ. 

ಸ್ವಂತ ಸೀಕ್ರೆಟ್ ಬಿಚ್ಚಿಟ್ಟ ಶ್ರೀಮುರಳಿ, 'ನೆಕ್ಸ್ಟ್ ಲೆವೆಲ್' ಅಂದಿಲ್ಲ ಅಂದ್ರೆ ಬಘೀರನ ಮೇಲಾಣೆ!

ಸೂಪರ್ ಹಿಟ್ ಸಿನಿಮಾದ ಸೀಕ್ವೆಲ್ ಅಂದರೆ ನಿರೀಕ್ಷೆ ಮತ್ತು ಕುತೂಹಲ ಕೊಂಚ ಜಾಸ್ತಿನೆ ಇರಲಿದೆ. ಹಾಗಾಗಿ ಅಯೋಗ್ಯ-2 ಕೂಡ ಸೆಟ್ಟೇರುವುದಕ್ಕೂ ಮೊದಲೇ ನಿರೀಕ್ಷೆ ದುಪ್ಪಟ್ಟು ಮಾಡಿದೆ. ಪಾರ್ಟ-2 ಹೇಗಿರಲಿದೆ ರವಿ ಶಂಕರ್ ಮತ್ತು ಸತೀಶ್ ನಡುವಿನ ಕಾದಾಟ, ಜಿದ್ದಾಜಿದ್ದಿ ಹಾಗೆ ಮುಂದುವರೆಯಲಿದಿಯಾ ಕಾದುನೋಡಬೇಕು. ಒಟ್ಟಿನಲ್ಲಿ, ಅಯೋಗ್ಯ, ಮದಗಜ ಸಿನಿಮಾಗಳ ಮೂಲಕ ಕನ್ನಡ ಸಿನಿಪ್ರೆಕ್ಷಕರಿಗೆ ಹಬ್ಬದೂಟ ಬಡಿಸಿದ್ದ ನಿರ್ದೇಶಕ ಮಹೇಶ್ ಕುಮಾರ್ ಮತ್ತೊಮ್ಮೆ 'ಅಯೋಗ್ಯ 2' ಮೂಲಕ ಮನರಂಜನೆ ಕೊಡಲು ಸಿದ್ಧರಾಗಿದ್ದಾರೆ. 

Latest Videos
Follow Us:
Download App:
  • android
  • ios