ರಾಹುಲ್ ಗಾಂಧಿ ಕೈಯಲ್ಲಿ ಅಪ್ಪು ಫೋಟೋ; 'ಭಾರತ್ ಜೋಡೋ ಯಾತ್ರೆ'ಯಲ್ಲಿ ಪುನೀತ್‌ಗೆ ನಮನ
ಭಾರತ್ ಜೋಡೋ ಯಾತ್ರೆಯಲ್ಲೂ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಫೋಟೋ ರಾರಾಜಿಸಿದೆ. ರಾಹುಲ್ ಗಾಂಧಿ ಕೈಯಲ್ಲಿ ಅಪ್ಪು ಫೋಟೋ ನೋಡಿ ಅಭಿಮಾನಿಗಳು ಖುಷಿ ಪಟ್ಟಿದ್ದಾರೆ
ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ ಏಳನೇ ದಿನಕ್ಕೆ ಕಾಲಿಟ್ಟಿದೆ. ಐಕ್ಯತಾ ಯಾತ್ರೆಗೆ ರಾಜ್ಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ರಾಹುಲ್ ಗಾಂಧಿ ಸಾಮಾನ್ಯರಲ್ಲಿ ಸಾಮಾನ್ಯರಂತೆ ಬೆರೆತು ಅವರ ಸಂಕಷ್ಟಗಳನ್ನು ವಿಚಾರಿಸುತ್ತಿದ್ದಾರೆ. ಇನ್ನು ವಿಶೇಷ ಎಂದರೆ ಈ ಯಾತ್ರೆಯಲ್ಲೂ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಫೋಟೋ ರಾರಾಜಿಸಿದೆ. ರಾಹುಲ್ ಗಾಂಧಿ ಕೈಯಲ್ಲಿ ಅಪ್ಪು ಫೋಟೋ ನೋಡಿ ಅಭಿಮಾನಿಗಳು ಖುಷಿ ಪಟ್ಟಿದ್ದಾರೆ. ಇತ್ತೀಚಿಗಷ್ಟೆ ಮೈಸೂರು ದಸರಾದಲ್ಲೂ ಪುನೀತ್ ರಾಜ್ ಕುಮಾರ್ ಅವರನ್ನು ಸ್ಮರಿಸಲಾಗಿತ್ತು. ದಸರಾದಲ್ಲಿ ಅಪ್ಪುಗೆ ವಿಶೇಷ ಗೌರವ ಸಲ್ಲಿಸಲಾಗಿತ್ತು. ಅಪ್ಪು ನಿಧನ ಹೊಂದಿ ವರ್ಷ ಆಗುತ್ತಾ ಬಂತು. ಆದರೂ ಅಭಿಮಾನಿಗಳ ಮನದಲ್ಲಿ ಅಪ್ಪು ನೆನಪು ಇನ್ನು ಹಸಿರಾಗೆ ಇದೆ. ಪುನೀತ್ ದೇವರಾಗಿದ್ದಾರೆ. ಅಭಿಮಾನಿಗಳು ಅಪ್ಪು ಫೋಟೋವನ್ನು ದೇವರ ಮನೆಯಲ್ಲಿ ಇಟ್ಟು ಪೂಜಿಸುತ್ತಿದ್ದಾರೆ. ಎಲ್ಲಾ ಸಮಾರಂಭಗಳಲ್ಲೂ ಅಪ್ಪು ಸ್ಮರಣೆ ಮಾಡಲಾಗುತ್ತಿದೆ. ಇದೀಗ ಭಾರತ್ ಜೋಡೋ ಯಾತ್ರೆಯಲ್ಲೂ ಅಪ್ಪುಗೆ ವಿಶೇಷ ನಮನ ಸಲ್ಲಿಸಲಾಗಿದೆ.
ಅಪ್ಪು ಅಭಿಮಾನಿಗಳು ರಾಹುಲ್ ಗಾಂಧಿ ಅವರಿಗೆ ಪುನೀತ್ ರಾಜ್ ಕುಮಾರ್ ಭಾವಚಿತ್ರವನ್ನು ನೀಡಿದ್ದಾರೆ. ರಾಹುಲ್ ಗಾಂಧಿ ಅಪ್ಪು ಭಾವಚಿತ್ರ ಕೈಯಲ್ಲಿ ಹಿಡಿದಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಹುಲ್ ಗಾಂಧಿ ಕೈಯಲ್ಲಿರುವ ಅಪ್ಪು ಫೋಟೋವನ್ನು ಶಾಸಕ ಟಿ ರಘುಮೂರ್ತಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಫೋಟೋ ಶೇರ್ ಮಾಡಿ ಭಾರತ್ ಜೋಡೋ ಯಾತ್ರೆಯಲ್ಲಿ ಅಪ್ಪು ಅವರಿಗೆ ನಮನ ಎಂದು ಹೇಳಿದ್ದಾರೆ.
Puneeth Rajkumar ರಾಣಾ ದಗ್ಗುಬಾಟಿ ಆಫೀಸ್‌ನಲ್ಲಿ ಅಪ್ಪು ಪುತ್ಥಳಿ!
'ದಶಕಗಳಿಂದ ಆತ್ಮೀಯ ಸಂಬಂಧ ಹೊಂದಿರುವ ಡಾ.ರಾಜ್‌ಕುಮಾರ್ ಕುಟುಂಬ ಹಾಗೂ ನೆಹರು ಕುಟುಂಬಗಳ ಬಾಂಧವ್ಯಕ್ಕೆ ಪುನೀತ್‌ರವರ ಚಿತ್ರಪಟ ಹಾಗೂ ಅವರ ನೆನಪುಗಳು ಸಾಕ್ಷಿಯಾಯ್ತು' ಎಂದು ಬರೆದುಕೊಂಡಿದ್ದಾರೆ.
ಅಂದಹಾಗೆ ರಾಹುಲ್ ಗಾಂಧಿ ಈ ಹಿಂದೆ ಡಾ ರಾಜ್ ಕುಮಾರ್ ಮನೆಗೆ ಭೇಟಿ ನೀಡಿದ್ದರು. ಪಾರ್ವತಮ್ಮ ರಾಜ್ ಕುಮಾರ್ ಅವರು ನಿಧನ ಹೊಂದಿದ ಸಮಯದಲ್ಲಿ ರಾಹುಲ್ ಗಾಂಧಿ ಭೇಟಿ ನೀಡಿ ಸಾಂತ್ವಾನ ಹೇಳಿದ್ದರು. ಬಳಿಕ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದ ಬಳಿಕವೂ ರಾಹುಲ್ ಗಾಂಧಿ ಅಪ್ಪು ನಿವಾಸಕ್ಕೆ ಭೇಟಿ ಕೊಟ್ಟಿದ್ದರು. ಅಶ್ವಿನಿ ಪುನೀತ್ ರಾಜ್ ಕುಮಾರ್ ಜೊತೆ ಕೆಲ ಸಮಯ ಮಾತನಾಡಿ, ಧೈರ್ಯ ಹೇಳಿದ್ದರು. ಇದೀಗ ಅಪ್ಪು ಭಾವಚಿತ್ರ ಹಿಡಿದು ಭಾರತ್ ಜೋಡೋ ಯಾತ್ರೆಯಲ್ಲಿ ಕಾಣಿಸಿಕೊಂಡಿರುವುದು ವಿಶೇಷ.
Puneeth Rajkumar ಅ.9ಕ್ಕೆ ಗಂಧದಗುಡಿ ಟ್ರೈಲರ್ ಬಿಡುಗಡೆ!
ಇನ್ನು ಪುನೀತ್ ರಾಜ್ ಕುಮಾರ್ ನಟನೆಯ ಸಾಕ್ಷ್ಯಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಅಪ್ಪು ನಿಧನ ಬಳಿಕ ತೆರೆಗೆ ಬರುತ್ತಿರುವ ಗಂಧದ ಗುಡಿ ಸಾಕ್ಷ್ಯಚಿತ್ರ ನೋಡಲು ಅಭಿಮಾನಿಗಳು ಸಹ ಕಾತರರಾಗಿದ್ದಾರೆ. ಅಕ್ಟೋಬರ್ 9ರಂದು ಗಂಧದ ಗುಡಿ ಚಿತ್ರದ ಟ್ರೈಲರ್ ರಿಲೀಸ್ ಆಗುತ್ತಿದೆ. ಅಪ್ಪು ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ. ಬಹುನಿರೀಕ್ಷೆಯ ಸಾಕ್ಷ್ಯಚಿತ್ರ ಇದೇ ತಿಂಗಳು ರಿಲೀಸ್ ಆಗುತ್ತಿದೆ. ಇತ್ತಚೀಗಷ್ಟೆ ಗಂಧದ ಗುಡಿಯ ಮೇಕಿಂಗ್ ರಿಲೀಸ್ ಮಾಡಲಾಗಿತ್ತು. ಪುನೀತ್ ನಗು ನಗುತ್ತಾ ಶೂಟಿಂಗ್ ಮಾಡಿರುವ ವಿಡಿಯೋ ನೋಡಿ ಅಭಿಮಾನಿಗಳು ಭಾವುಕರಾಗಿದ್ದರು. ಇದೀಗ ಸಾಕ್ಷ್ಯಚಿತ್ರವನ್ನು ನೋಡಲು ಕಾಯುತ್ತಿದ್ದಾರೆ.