ಹುಟ್ಟುಹಬ್ಬದ ಶುಭಾಶಯಗಳು ಪ್ರೇಮ್, 'ನೀವು ಯಾವಾಗಲೂ ಸಂತೋಷವಾಗಿರಿ. ನಿಮಗೆ ಹೆಚ್ಚಿನ ಯಶಸ್ಸು ಮತ್ತು ಶಕ್ತಿ ಸಿಗಲಿ ಎಂದು ರಕ್ಷಿತಾ ಪ್ರೇಮ್ ಶುಭಾಶಯವನ್ನು ಕೋರಿದ್ದಾರೆ.

ಸ್ಯಾಂಡಲ್‌ವುಡ್‌ನ ಸ್ಟಾರ್ ಡೈರೆಕ್ಟರ್‌ ಜೋಗಿ ಪ್ರೇಮ್ (Jogi Prem) ಅವರು ಇಂದು 44ನೇ ವಸಂತಕ್ಕೆ ಕಾಲಿಟಿದ್ದಾರೆ. ಚಿತ್ರರಂಗದ ತಾರೆಯರೂ ಸೇರಿದಂತೆ ಅವರ ಎಲ್ಲ ಅಭಿಮಾನಿಗಳು ಹುಟ್ಟುಹಬ್ಬಕ್ಕೆ (Birthday) ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಪ್ರೇಮ್ ಅವರ ಮುದ್ದಿನ ಮಡದಿ ರಕ್ಷಿತಾ ಪ್ರೇಮ್ (Rakshita Prem) ವಿಶೇಷವಾಗಿ ಶುಭಾಶಯವನ್ನು ಕೋರಿದ್ದಾರೆ.

ಈ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ (Instagram), ಹುಟ್ಟುಹಬ್ಬದ ಶುಭಾಶಯಗಳು ಪ್ರೇಮ್, 'ನೀವು ಯಾವಾಗಲೂ ಸಂತೋಷವಾಗಿರಿ. ನನಗೆ ತಿಳಿದಿರುವ ಅತ್ಯಂತ ಕರುಣಾಳು ಆತ್ಮ (Soul). ಹಾಗೆಯೇ ಇರಿ. ನಿಮಗೆ ಹೆಚ್ಚಿನ ಯಶಸ್ಸು ಮತ್ತು ಶಕ್ತಿ ಸಿಗಲಿ' ಎಂದು ರಕ್ಷಿತಾ ಪ್ರೇಮ್ ಪೋಸ್ಟ್‌ ಮಾಡಿದ್ದಾರೆ. ಜೊತೆಗೆ 'ಏಕ್ ಲವ್ ಯಾ' (Ek Love Ya) ಚಿತ್ರತಂಡದೊಂದಿಗೆ ಹುಟ್ಟುಹಬ್ಬ ಆಚರಿಸಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.

View post on Instagram


ಪ್ರೇಮ್ ಹುಟ್ಟುಹಬ್ಬಕ್ಕೆ ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯಾ (Arjun Janya), 'ಪ್ರೀತಿಯ ಪ್ರೇಮ್ ಸರ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ನೀವು ಎಂತಹ ಅದ್ಭುತ ಆತ್ಮ ಸರ್. ನಾನು ಯಾವಾಗಲೂ ನಿಮ್ಮನ್ನು ಪ್ರೀತಿಸುತ್ತೇನೆ ಸರ್' ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ಪ್ರೇಮ್ ಜೊತೆ ಇರುವ ಪೋಟೋವನ್ನು ಶೇರ್ ಮಾಡಿಕೊಂಡು ಶುಭಾಶಯವನ್ನು ತಿಳಿಸಿದ್ದಾರೆ.

View post on Instagram


ಇನ್ನು ನಿನ್ನೆಯಷ್ಟೇ ಜೋಗಿ ಪ್ರೇಮ್ ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ ಎಂದು ಅದರ ಬಗ್ಗೆ ವಿಡಿಯೋ ಮಾಡಿದ್ದರು. 'ಎಲ್ಲರಿಗೂ ನಮಸ್ಕಾರ... ಇದೇ ಅಕ್ಟೋಬರ್ 22ರಂದು ನನ್ನ ಹುಟ್ಟುಹಬ್ಬವಿದೆ. ಪ್ರತಿ ಬಾರಿ ನನ್ನ ಅನ್ನದಾತರು, ಸ್ನೇಹಿತರು ಹಾಗೂ ನನ್ನ ಬಂಧು, ಬಳಗದವರು ಪ್ರತಿಯೊಬ್ಬರು ಬಂದು ನನಗೆ ಶುಭಾಶಯ ತಿಳಿಸಿ ಹೋಗುತ್ತಿದ್ದರು. ಆದರೆ ಈ ಬಾರಿ ನಾನು ಮನೆಯಲ್ಲಿ ಇರುವುದಿಲ್ಲ. ಕಾರಣ 'ಏಕ್ ಲವ್ ಯಾ' ಸಿನಿಮಾದ ಕೆಲಸಗಳು ನಡೆಯುತ್ತಿದೆ. ಹಾಗಾಗಿ ದಯವಿಟ್ಟು ಯಾರೂ ಕೂಡ ಮನೆಯ ಬಳಿ ಬಂದು ಕಾಯಬೇಡಿ. ಎಲ್ಲೆ ಇದ್ದರೂ ದೂರದಿಂದಲೇ ನನಗೆ ಆಶೀರ್ವಾದ ಮಾಡಿ ಎಂದು ನಿಮ್ಮಲ್ಲಿ ಪ್ರೀತಿಯಿಂದ ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳಿದರು. 

ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ

ದೀಪಾವಳಿ (Diwali) ಹಬ್ಬದ ದಿನ ಚಿತ್ರದ ಸಿನಿಮಾದ ಮೂರನೇ ಹಾಡನ್ನು ಬಿಡುಗಡೆಗೊಳಿಸುತ್ತಿದ್ದೇವೆ. ಈಗಾಗಲೇ ಎರಡು ಹಾಡನ್ನು ಹಿಟ್ ಮಾಡಿಕೊಟ್ಟಿದ್ದೀರಾ. ಈಗ ಮತ್ತೊಂದು ಲವ್ ಬ್ರೇಕ್ ಅಪ್ ಸಾಂಗ್ ರಿಲೀಸ್ ಆಗುತ್ತಿದೆ. ಈ ಹಾಡನ್ನು ವಿಶೇಷವಾಗಿ ಹುಡುಗಿಯರಿಗೆಂದು ಬಿಡುಗಡೆ ಮಾಡಲಾಗುತ್ತಿದೆ. ಹಾಡನ್ನು ಕೇಳಿ, ನೋಡಿ, ಬೆಂಬಲಿಸಿ ಮತ್ತು ಜನವರಿ 21ಕ್ಕೆ 'ಏಕ್ ಲವ್ ಯಾ' ಸಿನಿಮಾ ಎಲ್ಲೆಡೆ ಬಿಡುಗಡೆಗೊಳಿಸಲಾಗುತ್ತಿದೆ. ನಿಮ್ಮ ಪ್ರೀತಿ ವಿಶ್ವಾಸ ಸದಾ ನನ್ನ ಮೇಲೆ ಹೀಗೆ ಇರಲಿ ಎಂದು ಹೇಳಿದ್ದರು.

"