Asianet Suvarna News Asianet Suvarna News

'ಕಾಂತಾರ' ನೋಡಿಲ್ಲ ಎಂದ ರಶ್ಮಿಕಾ ಮಂದಣ್ಣ; ಉಡಾಫೆ ಉತ್ತರ ಎಂದು ನೆಟ್ಟಿಗರಿಂದ ಸಖತ್ ಕ್ಲಾಸ್

ನಟಿ ರಶ್ಮಿಕಾ ಮಂದಣ್ಣ, ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾ ನೋಡಿಲ್ಲ ಎಂದು ಉಡಾಫೆ ಪ್ರತಿಕ್ರಿಯೆ ನೀಡಿದ್ದಾರೆ. ನೆಟ್ಟಿಗರು ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ.  

rashmika mandanna says not yet watched rishab shetty starrer kantara sgk
Author
First Published Oct 31, 2022, 4:53 PM IST

ರಿಷಬ್ ಶೆಟ್ಟಿ ನಿರ್ದೇಶನ ಮಾಡಿ, ನಟಿಸಿರುವ ಕಾಂತಾರ ಸಿನಿಮಾಗೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕನ್ನಡ ಪ್ರೇಕ್ಷಕರು ಜೊತೆಗೆ ಬೇರೆ ಬೇರೆ ಭಾಷೆಯ ಸಿನಿ ಪ್ರೇಕ್ಷಕರು ಹಾಗೂ ಸೆಲೆಬ್ರಿಟಿಗಳು ಸಿನಿಮಾ ನೋಡಿ ಹಾಡಿ ಹೊಗಳುತ್ತಿದ್ದಾರೆ. ಪ್ರಭಾಸ್, ಅನುಷ್ಕಾ ಶೆಟ್ಟಿ, ಶಿಲ್ಪಾ ಶೆಟ್ಟಿ ಹಾಗೂ ಸೂಪರ್ ಸ್ಟಾರ್ ರಜನಿಕಾಂತ್ ಕೂಡ ಕಾಂತಾರ ನೋಡಿ ಫಿದಾ ಆಗಿದ್ದಾರೆ. ರಿಷಬ್ ಅಭಿನಯಕ್ಕೆ ಮನಸೋತಿದ್ದಾರೆ. ಕಾಂತಾರ ಬಾಕ್ಸ್ ಆಫೀಸ್ ನಲ್ಲೂ ಭರ್ಜರಿ ಕಲೆಕ್ಷನ್ ಮಾಡಿದೆ. ರಿಷಬ್ ಶೆಟ್ಟಿ ಚಿತ್ರಕ್ಕೆ ದೇಶ, ವಿದೇಶಗಳಿಂದನೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಮೆಚ್ಚುಗೆಯ ಮಹಾಪೂರ ಬರುತ್ತಿದೆ. ಈ ನಡುವೆ ಕನ್ನಡ ಮೂಲದ ನಟಿ, ರಿಷಬ್ ಶೆಟ್ಟಿ ಸಿನಿಮಾ ಮೂಲಕವೇ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ರಶ್ಮಿಕಾ ಮಂದಣ್ಣ ಕಾಂತಾರ ಸಿನಿಮಾ ನೋಡಿಲ್ಲ ಎಂದು ಹೇಳುವ ಮೂಲಕ ಮತ್ತೆ ಟ್ರೋಲಿಗೆ ಗುರಿಯಾಗಿದ್ದಾರೆ. ಕಾಂತಾರ ನೋಡಿಲ್ಲ ಎನ್ನುವ ಮೂಲಕ ಮತ್ತೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.     

ರಿಷಬ್ ಶೆಟ್ಟಿ ನಿರ್ದೇಶನದ ಕಿರಿಕ್ ಪಾರ್ಟಿ ಸಿನಿಮಾ ಮೂಲಕವೇ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟು, ದೊಡ್ಡ ಮಟ್ಟದ ಖ್ಯಾತಿ ಗಳಿಸಿದ್ದ ರಶ್ಮಿಕಾ ಇದೀಗ ಮೊದಲ ನಿರ್ದೇಶಕರ ಚಿತ್ರ ನೋಡಿಲ್ಲ ಎಂದಿರುವುದು ಕನ್ನಡಿಗರ ಕೋಪಕ್ಕೆ ಕಾರಣವಾಗಿದೆ. ಸಿನಿಮಾ ನೋಡಿಲ್ಲ ಎಂದು ಉಡಾಫೆಯಾಗಿ ಹೇಳಿದ ರೀತಿಗೆ ನೆಟ್ಟಿಗರು ಸರಿಯಾಗಿ ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ. ರಿಷಬ್ ಶೆಟ್ಟಿ ಸಿನಿಮಾ ಮೂಲಕನೇ ಇಂದು ಬಾಲಿವುಡ್ ನಲ್ಲಿ ಮಿಂಚುತ್ತಿದ್ದೀರಾ ಆದರೆ ಅವರನ್ನೇ ಮರೆತಿದ್ದೀರಾ ಎಂದು ನೆಟ್ಟಿಗರು ಪ್ರಶ್ನೆ ಮಾಡುತ್ತಿದ್ದಾರೆ. 

ರಶ್ಮಿಕಾ ಇತ್ತೀಚಿಗಷ್ಟೆ ಮುಂಬೈನಲ್ಲಿ ಪಾಪರಾಜಿಗಳ ಮುಂದೆ ಹಾಜರಾಗಿದ್ದರು. ಪಾಪರಾಜಿಗಳು ರಶ್ಮಿಕಾಗೆ ಕಾಂತಾರ ಸಿನಿಮಾ ನೋಡಿದ್ದೀರಾ ಎಂದು ಪ್ರಶ್ನೆ ಮಾಡಿದರು. ಇದಕ್ಕೆ ರಶ್ಮಿಕಾ ಇನ್ನು ನೋಡಿಲ್ಲ, ನೋಡುತ್ತೇನೆ ಎಂದು ಉತ್ತರಿಸಿದರು. ರಶ್ಮಿಕಾ ಉತ್ತರ  ನೆಟ್ಟಿಗರನ್ನು ಕೆರಳಿಸಿದೆ. ಕಾಂತಾರ ಸಿನಿಮಾ ನೋಡಿ ಪರಭಾಷೆಯ ಸೂಪರ್ ಸ್ಟಾರ್‌ಗಳೇ ಹಾಡಿ ಹೊಗಳುತ್ತಿರುವಾಗ ಕನ್ನಡದವರೇ ಆಗಿರುವ ರಶ್ಮಿಕಾ ಇನ್ನೂ ಸಿನಿಮಾ ನೋಡದೇ ಇರುವುದು ಕನ್ನಡಿಗರ ಕೋಪಕ್ಕೆ ಕಾರಣವಾಗಿದೆ. ತಮ್ಮ ಮೊದಲ ಸಿನಿಮಾ ನಿರ್ದೇಶಕನ ಚಿತ್ರ ಹೇಗಿದೆ ಎಂದು ಹೇಳುವ ನಿಯತ್ತು ಕೂಡ ಇಲ್ಲಾ ಎಂದು ನೆಟ್ಟಿಗರು ರಶ್ಮಿಕಾಗೆ ಸೋಷಿಯಲ್ ಮೀಡಿಯಾದಲ್ಲಿ ಕ್ಲಾಸ್ ತೆಗೆದುಕೊಂಡಿದ್ದಾರೆ.

Rishab Shetty Meets Rajinikanth: ಕಾಂತಾರದ ಶಿವನಿಗೆ ಗೋಲ್ಡ್‌ ಚೈನ್‌ ಗಿಫ್ಟ್‌ ಆಗಿ ನೀಡಿದ ರಜನಿಕಾಂತ್‌?

ರಶ್ಮಿಕಾ ಮಾತಿಗೆ ಅನೇಕರು ತರಹೇವಾರಿ ಕಾಮೆಂಟ್ ಮಾಡಿದ್ದಾರೆ. ಬಾಲಿವುಡ್ ಅಂತ ರಶ್ಮಿಕಾ ಹೋದಳು. ಆದರೆ ನಮ್ಮ ಹುಡುಗ್ರು ಬಾಲಿವುಡ್ ಅನ್ನೇ ಕಬ್ಜ ಮಾಡಿದ್ರು ಅಂತ ಕಾಮೆಂಟ್ ಮಾಡುತ್ತಿದ್ದಾರೆ. ಇನ್ನು ಕೆಲವರು ಯಶಸ್ಸು ನೀವು ಎಲ್ಲಿಂದ ಬಂದಿದ್ದೀರಿ ಎಂಬುದನ್ನು ಮರೆಯಬಾರದು ಎಂದು ಕಾಮೆಂಟ್ ಮಾಡುತ್ತಿದ್ದಾರೆ. 

Kantara ನಿಲ್ಲದ ಓಟ; ಕೆಜಿಎಫ್ ಗಳಿಕೆಯ ದಾಖಲೆ ಮುರಿದ ರಿಷಬ್‌ಶೆಟ್ಟಿ ಚಿತ್ರ!

ರಶ್ಮಿಕಾ ಸದ್ಯ ಬಾಲಿವುಡ್ ಮತ್ತು ತೆಲುಗು, ತಮಿಳಿನಲ್ಲಿ ಬ್ಯುಸಿಯಾಗಿದ್ದಾರೆ. ಹಿಂದಿಯಲ್ಲಿ ರಶ್ಮಿಕಾ ನಟನೆಯ ಮೊದಲ ಸಿನಿಮಾ ಗುಡ್ ಬೈ ಸಿನಿಮಾ ರಿಲೀಸ್ ಆಗಿದೆ. ಆದರೆ ಈ ಸಿನಿಮಾ ಹೇಳಿಕೊಳ್ಳುವಷ್ಟು ಸಕ್ಸಸ್ ಕಂಡಿಲ್ಲ. ಬಾಕ್ಸ್ ಆಫೀಸ್ ನಲ್ಲೂ ಹೆಚ್ಚು ಕಮಾಯಿ ಮಾಡಿಲ್ಲ. ಇನ್ನು ಮಿಶನ್ ಮಜ್ನು ಸಿನಿಮಾ ಮುಗಿಸಿರುವ ರಶ್ಮಿಕಾ ರಿಲೀಸ್‌ಗೆ ಕಾಯುತ್ತಿದ್ದಾರೆ. ಈ ನಡುವೆ ,ರಣಬೀರ್ ಕಪೂರ್ ಜೊತೆ ನಟಿಸುತ್ತಿದ್ದಾರೆ. ಇನ್ನು ತಮಿಳಿನಲ್ಲಿ ದಳಪತಿ ವಿಜಯ್ ಜೊತೆ ನಟಿಸುತ್ತಿದ್ದಾರೆ.  ತೆಲುಗಿನಲ್ಲಿ ಪುಷ್ಪ-2 ಸಿನಿಮಾದಲ್ಲಿ ನಟಿಸುತ್ತಿದ್ದಾರೆ. 

Follow Us:
Download App:
  • android
  • ios