Asianet Suvarna News Asianet Suvarna News

ದರ್ಶನ್ ಪತ್ನಿ ವಿಜಯಲಕ್ಷ್ಮಿಗೂ ನೋಟಿಸ್ ಕೊಟ್ಟು ಠಾಣೆಗೆ ಕರೆಸಿಕೊಂಡ ಪೊಲೀಸರು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ನಟ ದರ್ಶನ್ ಶೂಗಳು ವಿಜಯಲಕ್ಷ್ಮೀ ಮನೆಯಲ್ಲಿ ಸಿಕ್ಕ ಹಿನ್ನೆಲೆಯಲ್ಲಿ ಅವರಿಗೂ ನೋಟೀಸ್ ನೀಡಿ ವಿಚಾರಣೆಗೆ ಕರೆಸಿಕೊಂಡಿದ್ದಾರೆ.

Renuka swamy murder case Actor Darshan wife Vijaya Lakshmi came to meet husband  his arrested sat
Author
First Published Jun 19, 2024, 12:26 PM IST

ಬೆಂಗಳೂರು (ಜೂ.19): ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ನಟ ದರ್ಶನ್ ಬಂಧನವಾಗಿ 9 ದಿನಗಳು ಕಳೆದಿವೆ. ಆದರೆ, ಆತನ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಶೂ ಸಿಕ್ಕಿದ್ದರಿಂದ ಪೊಲೀಸರು ಅವರಿಗೂ ನೋಟೀಸ್ ಜಾರಿಗೊಳಿಸಿ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಬುಧವಾರ ಹಾಜರಾಗಿದ್ದಾರೆ. 

ವಿಜಯಲಕ್ಷ್ಮೀ ನೋಟಿಸ್ ನೀಡಿದ್ದ ಪೊಲೀಸರು:  ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ  ವಿಜಯಲಕ್ಷ್ಮಿ ಮನೆಯಲ್ಲಿ ಕೊಲೆ ಆರೋಪಿ ದರ್ಶನ್ ಅವರ ಶೂ ಪತ್ತೆಯಾದ  ಬಗ್ಗೆ ಮಾಹಿತಿ ಪಡೆಯಲು ನೋಟಿಸ್ ನಿಡಿದ್ದರು. ಈ ಹಿನ್ನೆಲೆಯಲ್ಲಿ  ವಿಚಾರಣೆಗೆ ಹಾಜರಾಗಿ ಮಾಹಿತಿ ನೀಡಿದ್ದಾರೆ. ಪೊಲೀಸರ ನೋಟಿಸ್ ಹಿನ್ನೆಲೆ, ವಿಜಯಲಕ್ಷ್ಮಿ ವಿಚಾರಣೆಗೆ ಹಾಜರಾಗಿ ತನಿಖಾಧಿಕಾರಿ ಮುಂದೆ ಪ್ರಕರಣದ ಬಗ್ಗೆ ಹಾಗೂ ಶೂಗಳ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. 

ಸಲುಗೆ ಚಾಟ್‌ ಮಾಡಿ ರೇಣುಕಾಸ್ವಾಮಿಗೆ ಪವಿತ್ರಾಗೌಡ ಗಾಳ: ಏನಿದು ರೋಚಕ ಕತೆ...

ವಿಜಯಲಕ್ಷ್ಮಿಯನ್ನು ವಿಚಾರಣೆ ನಡೆಸಿದ ಪೊಲೀಸರು: ಇನ್ನು ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಆಗಮಿಸಿದ ಬೆನ್ನಲ್ಲಿಯೇ ಎಚ್ಚೆತ್ತ ಪೊಲೀಸರು ಒಂದಿಷ್ಟು ವಿಚಾರಣೆಯನ್ನೂ ನಡೆಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಮಾಡಿದ ನಂತರ ನಟ ದರ್ಶನ್ ಧರಿಸಿದ್ದ ಶೂಗಳನ್ನು ವಿಜಯಲಕ್ಷ್ಮೀ ಅವರ ಮನೆಯಲ್ಲಿ ಬಿಡಲಾಗಿತ್ತು. ಈ ಶೂಗಳನ್ನು ಪೊಲೀಸರು ಸ್ಥಳ ಮಹಜರು ಮಾಡಿ ವಶಕ್ಕೆ ಪಡೆದುಕೊಂಡಿದ್ದರು. ಇನ್ನು ಶೂ ಸಿಕ್ಕಿರುವ ಹಿನ್ನೆಲೆಯಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿಯನ್ನೂ ವಿಚಾರಣೆ ಮಾಡಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ಚಿಕ್ಕಮ್ಮನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ವಿರೋಧಿಸಿದ್ದಕ್ಕೆ ಕೊಲೆ ಮಾಡಿದ ಎಸ್‌ಎಸ್‌ಎಲ್‌ಸಿ ಬಾಲಕ

ದರ್ಶನ್ ಬಂಧನವಾಗಿ 9 ದಿನ:  ನಟಿ ಪವಿತ್ರಾಗೌಡ ಅವರಿಗೆ ಕೆಟ್ಟದಾಗಿ ಮೆಸೇಜ್ ಮಾಡಿದ್ದಾರೆಂದು ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿಸಿ ಕೊಲೆಗೈದ ಆರೋಪದಲ್ಲಿ ನಟ ದರ್ಶನ್ ಜೂ.11ರಂದು ಮಂಗಳವಾರ ಬಂಧನವಾಗಿದ್ದಾರೆ. ಈ ಕೇಸಿಗೆ ಸಂಬಂಧಪಟ್ಟಂತೆ ಪೊಲೀಸ್ ಕಸ್ಟಡಿಯಲ್ಲಿದ್ದು, ವಿಚಾರಣೆ ಎದುರಿಸುತ್ತಿದ್ದಾರೆ. ಕೊಲೆ ಆರೋಪದಲ್ಲಿ ಜೂ.11ರಂದು ಮೈಸೂರಿನಲ್ಲಿ ಬಂಧನವಾದ ನಂತರ ಕೋರ್ಟ್ ಮುಂದೆ ಹಾಜರುಪಡಿಸಿದ್ದಾಗ 6 ದಿನ ಪೊಲೀಸ್ ಕಸ್ಟಡಿಗೆ ಕೊಡಲಾಗಿತ್ತು. ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಜೂ.16ರಂದು ಕೋರ್ಟ್‌ಗೆ ಹಾಜರುಪಡಿಸಿದಾಗ ಪುನಃ 5 ದಿನ ಪೊಲೀಸ್ ಕಸ್ಟಡಿಗೆ ಕೊಡಲಾಗಿತ್ತು. ಒಟ್ಟು 9 ದಿನ ಪೊಲೀಸ್ ಕಸ್ಟಡಿಯಲ್ಲಿ ಕಳೆದಿರುವ ನಟ ದರ್ಶನ್ ಅಂಡ್ ಗ್ಯಾಂಗ್ ಅನ್ನು ನಾಳೆ ಕೋರ್ಟ್ ಮುಂದೆ ಹಾಜರುಪಡಿಸಲಾಗುತ್ತದೆ. ಈ ವೇಳೆ ನಟ ದರ್ಶನ್ ಅಂಡ್ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ವಿಧಿಸಿ ಜೈಲಿಗೆ ಕಳಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಗಂಡನನ್ನು ನೋಡಲು ಆಗಮಿಸಿದ್ದಾರೆ ಎಂದು ಹೇಳಲಾಗುತ್ತಿದೆ.

Latest Videos
Follow Us:
Download App:
  • android
  • ios